Jammu and Kashmir: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತದ ಒಳನುಸುಳಲು ಪ್ರಯತ್ನಿಸಿದ ಭಯೋತ್ಪಾದಕರನ್ನು ಭಾರತೀಯ ಸೇನೆಯು ವಿಫಲಗೊಳಿಸಿದೆ.

Jammu and Kashmir: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ
ಸಾಂದರ್ಭಿಕ ಚಿತ್ರ

Updated on: Jul 17, 2023 | 5:48 PM

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೂಲಕ ಭಾರತದ ಒಳನುಸುಳಲು ಪ್ರಯತ್ನಿಸಿದ ಇಬ್ಬರು  ಭಯೋತ್ಪಾದಕರನ್ನು ಭಾರತೀಯ ಸೇನೆಯು ಹತ್ಯೆಗೈದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ, ಪೂಂಚ್ ಸೆಕ್ಟರ್‌ನಲ್ಲಿ ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ನಂತರ ಪಡೆಗಳು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್‌ಒಸಿ) ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸೇನೆಯ ಪ್ರಕಾರ, ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಶೋಧ ಕಾರ್ಯಾಚರಣೆ ಸಂಜೆಯವರೆಗೆ ನಡೆದಿದೆ. ಈಗಲೂ ಈ ಕಾರ್ಯಚರಣೆ ನಡೆಯುತ್ತಿದೆ.

ಇದನ್ನೂ ಓದಿ: ಪೂಂಚ್​ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಸೈನಿಕರು

ಎಲ್‌ಒಸಿಯಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಪೂಂಚ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us