AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಕ್ಷತೆ ದಿನವೇ ಶವವಾಗಿ ಪತ್ತೆಯಾದ ನವ ದಂಪತಿ, ಮನೆಯವರಿಗೆ ಕಾದಿತ್ತು ಅಚ್ಚರಿ

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಮದುವೆಯ ಆರತಕ್ಷತೆಗೆ ದಿನವೇ ನವವಿವಾಹಿತ ದಂಪತಿಗಳು ತಮ್ಮ ಮನೆಯ ಕೋಣೆಯೊಳಗೆ ದೇಹದ ಮೇಲೆ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರತಕ್ಷತೆ ದಿನವೇ ಶವವಾಗಿ ಪತ್ತೆಯಾದ ನವ ದಂಪತಿ, ಮನೆಯವರಿಗೆ ಕಾದಿತ್ತು ಅಚ್ಚರಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 22, 2023 | 12:35 PM

Share

ರಾಯಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಮದುವೆಯ ಆರತಕ್ಷತೆಗೆ ಮುನ್ನ ನವವಿವಾಹಿತ ದಂಪತಿಗಳು ತಮ್ಮ ಮನೆಯ ಕೋಣೆಯೊಳಗೆ ದೇಹದ ಮೇಲೆ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇಬ್ಬರ ನಡುವೆ ಜಗಳ ನಡೆದಿದ್ದು, ಬಳಿಕ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ತಡರಾತ್ರಿ ತಿಕ್ರಪಾರ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಿಜ್‌ನಗರದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಲಾಂ (24) ಮತ್ತು ಕಹ್ಕಶಾ ಬಾನೊ (22) ಭಾನುವಾರ ವಿವಾಹವಾಗಿದ್ದು, ಮಂಗಳವಾರ ರಾತ್ರಿ ಅವರ ವಿವಾಹ ಆರತಕ್ಷತೆ ನಡೆಯಬೇಕಿತ್ತು. ಅವರು ತಮ್ಮ ಕೊಠಡಿಯೊಳಗೆ ಕಾರ್ಯಕ್ರಮಕ್ಕೆ ತಯಾರಾಗುತ್ತಿದ್ದಾಗ ವರನ ತಾಯಿ ವಧುವಿನ ಕಿರುಚಾಟವನ್ನು ಕೇಳಿ ಅಲ್ಲಿಗೆ ಬಂದಿದ್ದಾರೆ ಎಂದು ಅವರು ಹೇಳಿದರು.

ಕೋಣೆಯ ಒಳಗಿನಿಂದ ಲಾಕ್ ಆಗಿತ್ತು, ಇಬ್ಬರ ಬಾಗಿಲು ತೆಗೆಯದ ಕಾರಣ ಹೊರಗಿನಿಂದ ಕುಟುಂಬದ ಸದಸ್ಯರು ಕಿಟಕಿಯ ಮೂಲಕ ಇಣುಕಿ ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: Crime News: 14 ವರ್ಷದ ಬಾಲಕಿ ಮೇಲೆ ಕಸಿನ್, ಚಿಕ್ಕಪ್ಪನಿಂದಲೇ ಅತ್ಯಾಚಾರ

ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಇದೀಗ ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಚಾಕುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ದಂಪತಿಗಳ ನಡುವೆ ವಾಗ್ವಾದ ನಡೆದಿದ್ದು, ಪತಿ ಪತ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸ್ ಅಧಿಆಕರಿಗಳು ಹೇಳಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Wed, 22 February 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ