ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ: ಮೋದಿ

ಇದು ವೈಭವದ ದಿನ. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ನೂತನ ಸಂಸತ್ತಿನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯುತ್ತಿದೆ. ಈ ಭವ್ಯ ದಿನದಂದು ನಾನು ಹೊಸದಾಗಿ ಆಯ್ಕೆಯಾದ ಎಲ್ಲಾ ಸಂಸದರನ್ನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ: ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ನಯನಾ ರಾಜೀವ್

Updated on:Jun 24, 2024 | 12:02 PM

ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. 18ನೇ ಲೋಕಸಭಾ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್​ನಲ್ಲಿ ಮೋದಿ ಮಾತನಾಡಿ, ಭಾರತವನ್ನು ಬಡತನದಿಂದ ಮುಕ್ತಗೊಳಿಸುವಲ್ಲಿ ದೊಡ್ಡ ಯಶಸ್ಸು ಸಾಧಿಸಬಹುದು, ನಮ್ಮ ಈ ಮನೆ ಸಂಕಲ್ಪದ ಮನೆಯಾಗಬೇಕು.

ದೇಶದ ಜನತೆ ಕೂಡ ಪ್ರತಿಪಕ್ಷಗಳಿಂದ ಒಳ್ಳೆಯ ಹೆಜ್ಜೆಗಳನ್ನೇ ನಿರೀಕ್ಷಿಸುತ್ತಿದ್ದಾರೆ. ಭಾರತದ ಪ್ರಜಾಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ರಕ್ಷಿಸುತ್ತೇವೆ ಮತ್ತು 50 ವರ್ಷಗಳ ಹಿಂದೆ ಮಾಡಲಾದ ಕೆಲಸವನ್ನು ಭಾರತದಲ್ಲಿ ಯಾರೂ ಮಾಡಲು ಧೈರ್ಯ ಮಾಡಬಾರದು ಎಂಬ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇವೆ ಎಂದರು.

ಇದೇ ಮೊದಲ ಬಾರಿಗೆ ನೂತನ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಅವರು, ಸತತ ಮೂರನೇ ಬಾರಿಗೆ ಆಡಳಿತ ನಡೆಸಲು ಸಾರ್ವಜನಿಕರು ಸರ್ಕಾರಕ್ಕೆ ಅವಕಾಶ ನೀಡಿರುವುದು ಇತಿಹಾಸದಲ್ಲಿ ಇದು ಎರಡನೇ ಬಾರಿ. 60 ವರ್ಷಗಳ ನಂತರ ಈ ಅವಕಾಶ ಬಂದಿದೆ.

ಮತ್ತಷ್ಟು ಓದಿ: Lok Sabha Session: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಶುರು

ಅಭಿವೃದ್ಧಿ ಹೊಂದಿದ ಭಾರತದ ಗುರಿಯೊಂದಿಗೆ 18ನೇ ಲೋಕಸಭೆ ಇಂದು ಆರಂಭವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅದ್ಧೂರಿಯಾಗಿ ಚುನಾವಣೆ ನಡೆಸುವುದು ಭಾರತೀಯರಿಗೆ ಹೆಮ್ಮೆಯ ವಿಷಯ.

ಸ್ವಾತಂತ್ರ್ಯಾ ನಂತರ ಎರಡನೇ ಬಾರಿಗೆ ದೇಶದ ಜನತೆ ಸತತ ಮೂರನೇ ಬಾರಿಗೆ 60 ವರ್ಷಗಳ ನಂತರ ಬಂದಿರುವ ಸರ್ಕಾರಕ್ಕೆ ಸೇವೆ ಮಾಡುವ ಅವಕಾಶವನ್ನು ನೀಡಿದ್ದಾರೆ. ಇದಕ್ಕಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.

ಹಂಗಾಮಿ ಸ್ಪೀಕರ್​ ಆಗಿ ಬರ್ತೃಹರಿ ಆಯ್ಕೆ ಬಿಜೆಪಿ ಹಂಗಾಮಿ ಸ್ಪೀಕರ್ ಆಗಿ 7 ಬಾರಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಆಯ್ಕೆ ಮಾಡಿದೆ.ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್​ 8 ಬಾರಿ ಸಂಸದರಾಗಿರುವ ಕೆ ಸುರೇಶ್​ ಅವರನ್ನು ಹಂಗಾಮಿ ಸ್ಪೀಕರ್ ಮಾಡಬೇಕೆಂಬ ಬೇಡಿಕೆ ಇಟ್ಟಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:26 am, Mon, 24 June 24

ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ