ದೆಹಲಿ, ಆ.4: ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಏಪ್ರಿಲ್‌ನಲ್ಲಿ, ಎನ್‌ಜಿಒ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಅರುಣ್ ಗೋಯೆಲ್ ಅವರ ನೇಮಕಾತಿಯ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ನೇಮಕಾತಿ ಚುನಾವಣಾ ಸಮಿತಿಯ ಸಾಂಸ್ಥಿಕ ಸಮಗ್ರತೆ ಮತ್ತು ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.
ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಸಂವಿಧಾನ ಪೀಠವು ಈಗಾಗಲೇ ಈ ಸಮಸ್ಯೆಯನ್ನು ಪರಿಶೀಲಿಸಿದೆ ಮತ್ತು ತೀರ್ಪನ್ನು ಪೂರ್ವಾವಲೋಕನ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಸಂವಿಧಾನಿಕ ಪೀಠವು ಈ ಅರ್ಜಿಯ ಬಗ್ಗೆ ಕೆಲವು ಅವಲೋಕನಗಳನ್ನು ಮಾಡಿದ್ದು, ಅರುಣ್ ಗೋಯೆಲ್ ಅವರ ನೇಮಕಾತಿಯನ್ನು ರದ್ದುಗೊಳಿಸಲು ನಿರಾಕರಿಸಿದೆ ಎಂದು ಹೇಳಿದೆ.
ರಾಜಕೀಯ ಹಸ್ತಕ್ಷೇಪದಿಂದ ಚುನಾವಣಾ ಸಂಸ್ಥೆಯನ್ನು ರಕ್ಷಿಸುವ ಉದ್ದೇಶದಿಂದ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯು ಚುನಾವಣಾ ಆಯುಕ್ತರನ್ನು ನೇಮಿಸುತ್ತದೆ ಎಂದು ಸಂವಿಧಾನ ಪೀಠವು ಮಾರ್ಚ್‌ನಲ್ಲಿ ತೀರ್ಪು ನೀಡಿತ್ತು. ಇನ್ನು ಈ ನೇಮಕಾತಿ ಎರಡು ಕಡೆ (ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ) ಒಪ್ಪಿಗೆಯಿಂದಲ್ಲೇ ಆಗಿರುತ್ತದೆ ಎಂದು ಹೇಳಿದೆ.
ಇದನ್ನೂ ಓದಿ: ಅರುಣ್ ಗೋಯೆಲ್ ನೇಮಕಾತಿಗಾಗಿರುವ ಕಡತಕ್ಕೆ ಆತುರದಿಂದ ಅನುಮತಿ ಸಿಕ್ಕಿದೆ: ಸುಪ್ರೀಂಕೋರ್ಟ್
ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಕಳೆದ ವರ್ಷ ನವೆಂಬರ್ 18ರಂದು ಸ್ವಯಂ ನಿವೃತ್ತಿ ಪಡೆದಿದ್ದರು, ಬಳಿಕ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಇದೀಗ ಮುಂದಿನ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳಲಿದ್ದಾರೆ. ಆದರೆ ಈ ಆತುರದ ನೇಮಕಾತಿ ಯಾಕೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಈಗಿನ ಆಯುಕ್ತರ ಅವಧಿ ಮುಗಿಯುವ ಮೊದಲೇ ಈ ಆಯ್ಕೆ ಬೇಕಿತ್ತಾ? ಕಾನೂನು ಸಚಿವರು ಚುನಾವಣಾ ಆಯುಕ್ತರ ನೇಮಕಾತಿಗೆ ಶಾರ್ಟ್‌ಲಿಸ್ಟ್ ಮಾಡಿ, 4 ಹೆಸರನ್ನು ಕಳಿಸುತ್ತಾರೆ. ಅದು ಪ್ರಧಾನಿ , ವಿರೋಧ ಪಕ್ಷದ ನಾಯಕ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ನೀಡಲಾಗುತ್ತದೆ. ಪ್ರಧಾನಿ ಒಬ್ಬರ ಹೆಸರನ್ನು ಶಿಫಾರಸ್ಸು ಮಾಡುತ್ತಾರೆ. ಆದರೆ ಇಲ್ಲಿ ಯಾವುದಾದರೂ ತರಾತುರಿಯಲ್ಲಿ ಮಾಡಲಾಗಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. 2025ರಲ್ಲಿ ಪ್ರಸ್ತುತ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರ ಅಧಿಕಾರಾವಧಿಯು ಕೊನೆಗೊಳ್ಳುವ ಸಂದರ್ಭದಲ್ಲಿ ಅರುಣ್ ಗೋಯೆಲ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಲಿದ್ದಾರೆ.
ಮತ್ತಷ್ಟು ರಾಷ್ಚ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ