AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ನಿರಾಕರಿಸಿದ ಸುಪ್ರೀಂ

ಮೇ 28 ರಂದು ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Supreme Court: ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ನಿರಾಕರಿಸಿದ ಸುಪ್ರೀಂ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 26, 2023 | 1:56 PM

Share

ದೆಹಲಿ: ಮೇ 28 ರಂದು ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇದರ ಜತೆಗೆ ವಕೀಲರು ತಮ್ಮ ಮನವಿಯನ್ನು ಹಿಂತೆಗೆದುಕೊಂಡಿದ್ದಾರೆ.

ಈ ವಿಷಯಗಳನ್ನು ಪರಿಶೀಲಿಸುವುದು ನ್ಯಾಯಾಲಯದ ಕಾರ್ಯವಲ್ಲ ಎಂದು ಸುಪ್ರೀಂ ಕೋರ್ಟ್​​ ಹೇಳಿದೆ. ಹೊಸ ಸಂಸತ್ ಕಟ್ಟಡವನ್ನು ಭಾರತದ ರಾಷ್ಟ್ರಪತಿಗಳು ಉದ್ಘಾಟಿಸಬೇಕು ಎಂದು ಲೋಕಸಭೆಯ ಸಚಿವಾಲಯಕ್ಕೆ ನಿರ್ದೇಶನ  ನೀಡಬೇಕು ಎಂದು ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ವಕೀಲ ಸಿಆರ್ ಜಯ ಸುಕಿನ್ ಅವರು ಅರ್ಜಿ ಸಲ್ಲಿಸಿದ್ದಾರೆ.

ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ಈ ಅರ್ಜಿಯಲ್ಲಿ ಉಲ್ಲೇಖಿಸಿದಂತೆ ಸಂವಿಧಾನದ 79ನೇ ವಿಧಿಯನ್ನು ತಿಳಿಸಿದ್ದಾರೆ. ಸಂಸತ್ತು ಅಧ್ಯಕ್ಷ ಉಭಯ ಸದನಗಳನ್ನು ಒಳಗೊಂಡಿರುತ್ತದೆ ಎಂದು ಹೇಳುತ್ತದೆ. ರಾಷ್ಟ್ರದ ಪ್ರಥಮ ಪ್ರಜೆಯಾದ ರಾಷ್ಟ್ರಪತಿಗಳಿಗೆ ಸಂಸತ್ತಿನ ಅಧಿವೇಶನಗಳನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರವಿದೆ ಎಂದು ಸೂಚಿಸಲಾಗಿದೆ. ಪ್ರಧಾನ ಮಂತ್ರಿ ಮತ್ತು ಇತರ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸುವವರು ರಾಷ್ಟ್ರಪತಿಗಳು ಮತ್ತು ಎಲ್ಲಾ ಕಾರ್ಯಕಾರಿ ಕ್ರಮಗಳಲ್ಲಿ ರಾಷ್ಟ್ರಪತಿಗಳ ಆಹ್ವಾನಿಸಲಾಗುತ್ತದೆ. ಸಮಾರಂಭಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸದಿರುವುದು ಅವಮಾನ ಮತ್ತು ಸಂವಿಧಾನದ ಉಲ್ಲಂಘನೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: New Parliament Inauguration Row: ನೂತನ ಸಂಸತ್ ಭವನವನ್ನು ಯಾರು ಉದ್ಘಾಟಿಸಬೇಕೆಂಬ ವಿವಾದ: ಸಂವಿಧಾನ ಹೇಳುವುದೇನು? ಇಲ್ಲಿದೆ ಮಾಹಿತಿ

ಹೊಸದಾಗಿ ನಿರ್ಮಿಸಲಾದ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಇದು ನಡೆದಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಕಳೆದ ಗುರುವಾರ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನಿಸಿದ್ದರು.

Published On - 12:55 pm, Fri, 26 May 23

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ