ಚುನಾವಣೆಗೆ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸದಂತೆ ಅಭ್ಯರ್ಥಿಗಳನ್ನು ನಿರ್ಬಂಧಿಸಲು ಕೋರಿದ ಅರ್ಜಿಯನ್ನು ಅನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ದೆಹಲಿ: ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸದಂತೆ ಅಭ್ಯರ್ಥಿಗಳನ್ನು ನಿರ್ಬಂಧಿಸಲು ಕೋರಿದ ಅರ್ಜಿಯನ್ನು ಅನ್ನು ಸುಪ್ರೀಂ ಕೋರ್ಟ್ (Supreme Court ) ತಿರಸ್ಕರಿಸಿದೆ. ಶಾಸಕಾಂಗ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳು ಎಂದು ಹೇಳುವ ಮೂಲಕ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
Supreme Court rejected a PIL seeking to restrict candidates from contesting elections for the same office simultaneously from more than one constituency, saying the issues pertain to legislative domain. pic.twitter.com/Nqt8rZ7Zdp
— ANI (@ANI) February 2, 2023
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರ ಪೀಠವು ಚುನಾವಣೆಯಲ್ಲಿ ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸಲು ಅವಕಾಶ ನೀಡುವ ಕಾನೂನನ್ನು ರದ್ದುಗೊಳಿಸಲು ನಿರಾಕರಿಸಿತು. ಇದು ರಾಜಕೀಯ ಪ್ರಜಾಪ್ರಭುತ್ವದ ಸಮಸ್ಯೆಯಾಗಿದ್ದು, ಕೋರ್ಟ್‌ಗೆ ಸಂಬಂಧಿಸಿದ್ದಲ್ಲ. ಈ ಬಗ್ಗೆ ಸಂಸತ್ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಒಂದಕ್ಕಿಂತ ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಯನ್ನು ಅನುಮತಿಸುವುದು ಶಾಸಕಾಂಗ ನೀತಿಯ ವಿಷಯವಾಗಿದೆ. ಏಕೆಂದರೆ ಅಂತಿಮವಾಗಿ ಅಂತಹ ಆಯ್ಕೆಯನ್ನು ನೀಡುವ ಮೂಲಕ ರಾಜಕೀಯ ಪ್ರಜಾಪ್ರಭುತ್ವವನ್ನು ಮುಂದುವರಿಸಲಾಗುತ್ತದೆಯೇ ಎಂಬುದು ಸಂಸತ್ ತೀರ್ಮಾನವಾಗಿದೆ ಎಂದು ಪೀಠ ಹೇಳಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ
ವಿವಿಧ ಕಾರಣಗಳಿಂದಾಗಿ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಸ್ಪರ್ಧಿಸಬಹುದು. ಇದು ಪ್ರಜಾಪ್ರಭುತ್ವದ ಹಾದಿಯನ್ನು ಮತ್ತಷ್ಟು ಹೆಚ್ಚಿಸಬಹುದೇ ಎಂಬುದು ಸಂಸತ್ಗೆ ಬಿಟ್ಟದ್ದು ಎಂದು ಪೀಠ ಹೇಳಿದೆ. ಈ ನಿಬಂಧನೆಯನ್ನು ಅಸಂವಿಧಾನಿಕ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್, ಶಾಸಕಾಂಗ ಆದೇಶವು ಸಂಸತ್ತಿನ ಸಾರ್ವಭೌಮತ್ವದ ವಿಷಯವಾಗಿದೆ. ತನ್ನ ಆದೇಶವು ಕಾನೂನನ್ನು ತಿದ್ದುಪಡಿ ಮಾಡುವುದಕ್ಕೆ ಸಂಸತ್ ನ್ನು ತಡೆಯುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಒಬ್ಬ ವ್ಯಕ್ತಿಗೆ ಅವಕಾಶ ನೀಡುವ ಪ್ರಜಾಪ್ರತಿನಿಧಿ (ಆರ್‌ಪಿ) ಕಾಯ್ದೆಯ ಸೆಕ್ಷನ್ 33(7) ಅನ್ನು ಅಮಾನ್ಯ ಮತ್ತು ಅಲ್ಟ್ರಾ-ವೈರಸ್ ಎಂದು ಘೋಷಿಸಲು ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಮೇಲೆ ಸುಪ್ರೀಂಕೋರ್ಟ್ ಈ ಆದೇಶವನ್ನು ನೀಡಿದೆ.
ಸ್ವತಂತ್ರ ಅಭ್ಯರ್ಥಿಗಳು ಸಂಸತ್ತು ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನವನ್ನು ಇದು ಕೋರಿದೆ.
Published On - 1:16 pm, Thu, 2 February 23