ತಿರುಮಲ ತಿರುಪತಿಯಲ್ಲಿ ದೇವರ ದರ್ಶನ ಸಮಯ ವಿಸ್ತರಣೆ; ರಾತ್ರಿ 11ಗಂಟೆವರೆಗೂ ಭಕ್ತರಿಗೆ ಅವಕಾಶ

ತಿರುಪತಿ:  ತಿರುಮಲ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ವಿಸ್ತರಿಸಲಾಗಿದ್ದು, ಸೆಪ್ಟೆಂಬರ್​ 19ರಿಂದ ರಾತ್ರಿ 11ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಹಿಂದೆ ದೇವಸ್ಥಾನದಲ್ಲಿ ರಾತ್ರಿ 10 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಅದನ್ನೀಗ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚು ಮಾಡಿದೆ. ಇನ್ನುಮುಂದೆ ಯಾತ್ರಾರ್ಥಿಗಳು ರಾತ್ರಿ 11-11.30ರವರೆಗೂ ದೇವರ ದರ್ಶನ ಪಡೆಯಬಹುದು. ರಾತ್ರಿ 12ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದ್ದು, ಅದಕ್ಕೂ ಮುನ್ನ ಸಮಾರೋಪ ಕಾರ್ಯಕ್ರಮ ಏಕಾಂತ ಸೇವೆ ನಡೆಯಲಿದೆ.  ತಿರುಮಲ ದೇವಸ್ಥಾನಕ್ಕೆ ಪ್ರತಿನಿತ್ಯ […]

ತಿರುಮಲ ತಿರುಪತಿಯಲ್ಲಿ ದೇವರ ದರ್ಶನ ಸಮಯ ವಿಸ್ತರಣೆ; ರಾತ್ರಿ 11ಗಂಟೆವರೆಗೂ ಭಕ್ತರಿಗೆ ಅವಕಾಶ
ತಿರುಮಲ ದೇಗುಲ
Follow us
TV9 Web
| Updated By: Lakshmi Hegde

Updated on:Sep 21, 2021 | 1:19 PM

ತಿರುಪತಿ:  ತಿರುಮಲ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ವಿಸ್ತರಿಸಲಾಗಿದ್ದು, ಸೆಪ್ಟೆಂಬರ್​ 19ರಿಂದ ರಾತ್ರಿ 11ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಹಿಂದೆ ದೇವಸ್ಥಾನದಲ್ಲಿ ರಾತ್ರಿ 10 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಅದನ್ನೀಗ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚು ಮಾಡಿದೆ. ಇನ್ನುಮುಂದೆ ಯಾತ್ರಾರ್ಥಿಗಳು ರಾತ್ರಿ 11-11.30ರವರೆಗೂ ದೇವರ ದರ್ಶನ ಪಡೆಯಬಹುದು. ರಾತ್ರಿ 12ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದ್ದು, ಅದಕ್ಕೂ ಮುನ್ನ ಸಮಾರೋಪ ಕಾರ್ಯಕ್ರಮ ಏಕಾಂತ ಸೇವೆ ನಡೆಯಲಿದೆ. 

ತಿರುಮಲ ದೇವಸ್ಥಾನಕ್ಕೆ ಪ್ರತಿನಿತ್ಯ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ದಿನವೊಂದಕ್ಕೆ ಸರಾಸರಿ 25 ಸಾವಿರ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ದರ್ಶನ ಸಮಯವನ್ನು ವಿಸ್ತರಿಸುವ ಅನಿವಾರ್ಯತೆಯೂ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಶನಿವಾರ ಒಂದೇ ದಿನ 29,621 ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಆಗಮಿಸಿದ್ದರು. ತಿರುಮಲ ಶನಿವಾರದ ನಿಮಿತ್ತ ದೇವಸ್ಥಾನ ಹೆಚ್ಚುವರಿಯಾಗಿ 800 ಟೈಂ ಸ್ಲಾಟೆಡ್​ ಸರ್ವ ದರ್ಶನ ಟೋಕನ್​ ಬಿಡುಗಡೆ ಮಾಡಿದ್ದರಿಂದ ಅಂದು ಅಷ್ಟುಪ್ರಮಾಣದ ಜನರು ಆಗಮಿಸಿದ್ದರು ಎನ್ನಲಾಗಿದೆ.

ಇನ್ನು ಈ ಬಗ್ಗೆ ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದು, ಉಚಿತ ದರ್ಶನ ಟೋಕನ್​ಗಳ​ ಸಂಖ್ಯೆಯನ್ನು ಶೀಘ್ರದಲ್ಲೇ ಏರಿಸಲಾಗುವುದು ಎಂದಿದ್ದಾರೆ. ಹಾಗೇ 300 ರೂ.ಬೆಲೆಯ ಟಿಕೆಟ್​ಗಳ ಅಕ್ಟೋಬರ್​ ಕೋಟಾವನ್ನು ಅಕ್ಟೋಬರ್​ 23ರಂದು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.  ಭಕ್ತರು ಟಿಟಿಡಿ ವೆಬ್​ಸೈಟ್​ನಲ್ಲಿ ಮುಂಚಿತವಾಗಿಯೇ ಟಿಕೆಟ್​ ಕಾಯ್ದಿರಿಸಿಕೊಳ್ಳಬಹುದು ಎಂದೂ ದೇಗುಲ ಆಡಳಿತ ಮಂಡಳಿ ತಿಳಿಸಿದೆ. ಸರ್ವದರ್ಶನ ಟೋಕನ್​​ಗಳು ಆನ್​ಲೈನ್​ನಲ್ಲಿ ಅಕ್ಟೋಬರ್​ 24ರ ಬೆಳಗ್ಗೆ 9ಗಂಟೆಯಿಂದ ಲಭ್ಯವಾಗಲಿವೆ. ಒಂದು ದಿನದಲ್ಲಿ ಉಚಿತ ದರ್ಶನಕ್ಕೆ 2000 ಟೋಕನ್​ಗಳನ್ನು ಮಾತ್ರ ಮೀಸಲಿಡಲಾಗಿತ್ತು. ಅದನ್ನೀಗ 8000ಕ್ಕೆ ಏರಿಸಲು ಟಿಟಿಡಿ ನಿರ್ಧರಿಸಿದೆ.

ಇದನ್ನೂ ಓದಿ: ಬೊಮ್ಮಾಯಿ ಸಂಘ ಪರಿವಾರದಿಂದ ಬಂದಿಲ್ಲ, ಕಮ್ಯುನಿಸ್ಟ್ ಪಕ್ಷದಿಂದ ಬಂದಿದವರು; ಸಿಎಂ ವಿರುದ್ಧ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಆಕ್ರೋಶ

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ತಹಶೀಲ್ದಾರ್ ಮದುವೆ; ಚಿಕ್ಕಮಗಳೂರು ಡಿಸಿಯಿಂದ ಗೀತಾಗೆ ನೋಟಿಸ್

Published On - 1:09 pm, Tue, 21 September 21

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್