Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ. ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ […]

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
Follow us
ಸಾಧು ಶ್ರೀನಾಥ್​
|

Updated on: Dec 19, 2019 | 8:41 AM

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ.

ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ ಅಟ್ಟಹಾಸ ಮೆರೆದಿದ್ದು, ಟೋಲ್ ಸಿಸಿ ಕ್ಯಾಮರಾದಲ್ಲಿ ಎಲ್ಲಾ ದೃಶ್ಯ ಸೆರೆಯಾಗಿದೆ.

42 ಆಮೆಗಳು ವಶಕ್ಕೆ: ಪಶ್ಚಿಮಬಂಗಾಳದ ಬುರ್ದ್ವಾನ್​​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 42ಕ್ಕೂ ಹೆಚ್ಚು ಆಮೆಗಳನ್ನ ವಶಕ್ಕೆ ಪಡೆಯಲಾಗಿದೆ. ರೈಲಿನಲ್ಲಿ ಇಬ್ಬರು ಮಹಿಳೆಯರು ಆಮೆಗಳನ್ನು ಸಾಗಿಸುತ್ತಿದ್ದು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

₹43 ಲಕ್ಷ ನಗದು ವಶ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 43 ಲಕ್ಷದ 98 ಸಾವಿರ ರೂಪಾಯಿಯನ್ನ ಹರಿಯಾಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರಿಯಾಣದ ಜಹಾಜರ್​​ನಲ್ಲಿ ಹಣ ಸಾಗಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪೊಲೀಸರು ಹಣ ಸೀಜ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಹಿಮಮಳೆಯಲ್ಲಿ ಮೋಜು-ಮಸ್ತಿ: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಹಿಮಮಳೆ ಜೋರಾಗಿದೆ. ಹಿಮಮಳೆಯಲ್ಲಿ ಪ್ರವಾಸಿಗರು ಮಿಂದೇಳ್ತಿದ್ದು ಮಸ್ತ್ ಮಸ್ತ್ ಎಂಜಾಯ್​ ಮಾಡ್ತಿದ್ದಾರೆ. ಇನ್ನೊಂದೆಡೆ ಶೀಮ್ಲಾದಲ್ಲೂ ಹಿಮಮಳೆ ಜೋರಾಗಿದ್ದು, ಪ್ರವಾಸಿಗರು ಹಿಮದಲ್ಲಿ ಆಟವಾಡ್ತಿದ್ದಾರೆ.

ಸೈರಸ್‌ ಮಿಸ್ತ್ರಿ ಮರುನೇಮಕಕ್ಕೆ ಆದೇಶ: ಟಾಟಾ ಸನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸೈರಸ್‌ ಮಿಸ್ತ್ರಿ ಅವರನ್ನ ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ ಹೇಳಿದೆ. ಅಲ್ಲದೆ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನಟರಾಜನ್‌ ಚಂದ್ರಶೇಖರನ್‌ ಅವರ ನೇಮಕವು ಕಾನೂನುಬಾಹಿರ ಅಂತಾನೂ ತಿಳಿಸಿದೆ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ