ಮಸೀದಿ ಸೇರಿದಂತೆ 1,200 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳ ನೆಲಸಮ ಮಾಡಿದ ಯೋಗಿ ಸರ್ಕಾರ

|

Updated on: Jun 20, 2024 | 2:11 PM

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಫಿಯಾ, ಅಕ್ರಮಕ್ಕೆ ಕಡಿವಾಣ ಹಾಕಲು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅಕ್ಬರ್‌ನಗರದ ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ (ಎಲ್‌ಡಿಎ) ಅಧಿಕಾರಿಗಳು ಹೇಳಿದ್ದಾರೆ.

ಮಸೀದಿ ಸೇರಿದಂತೆ 1,200 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳ ನೆಲಸಮ ಮಾಡಿದ ಯೋಗಿ ಸರ್ಕಾರ
ಯೋಗಿ ಆದಿತ್ಯನಾಥ್
Follow us on

ಅಕ್ಬರ್‌ನಗರ, ಜೂ.20: ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (yogi adityanath)​​ ಅವರ ಸರ್ಕಾರ ಒಂದಲ್ಲ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮಾಫಿಯ, ಅಕ್ರಮ ಮಾಡುವವರಿಗೆ ಕಡಿವಾಣ ಹಾಕುತ್ತಿದ್ದಾರೆ. ಇದೀಗ ದೊಡ್ಡ ಮಟ್ಟದ ಕಾರ್ಯಚರಣೆ ಮಾಡಿದ್ದಾರೆ. ಅಕ್ಬರ್‌ನಗರದ ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ (ಎಲ್‌ಡಿಎ) ಅಧಿಕಾರಿಗಳು ಹೇಳಿದ್ದಾರೆ. ಜೂನ್​ 19ರಿಂದ ಪ್ರಾರಂಭವಾಗಿ ಇಂದು (ಜೂ.20) ಈ ಕಾರ್ಯಚರಣೆ ಕೊನೆಗೊಂಡಿದೆ.

ಬುಲ್ಡೋಜರ್‌ಗಳು ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಸುಮಾರು 1,169 ಅಕ್ರಮ ವಸತಿ ಆಸ್ತಿಗಳು ಮತ್ತು 100 ಕ್ಕೂ ಹೆಚ್ಚು ವಾಣಿಜ್ಯ ಆಸ್ತಿಗಳನ್ನು ನೆಲಸಮ ಮಾಡಲಾಗಿದೆ. ಇದರಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಮಸೀದಿಗಳನ್ನು ಕೂಡ ಕೆಡವಿದ್ದಾರೆ. 24.5 ಎಕರೆ ಜಾಗದಲ್ಲಿ ನಡೆದಿರುವ ಅಕ್ರಮ ಒತ್ತುವರಿ ತೆರವು ಕಾರ್ಯ ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರಂಭವಾಗಿತ್ತು. ಈ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳು ಸೇರಿದಂತೆ 1,320 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.

ಇದನ್ನೂ ಓದಿ: ಮೋದಿ ಹೆದರುವುದಿಲ್ಲ; ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು

ಜೂನ್ 18 ರಂದು ಸುಮಾರು 100 ಕಟ್ಟಡಗಳನ್ನು ಕೆಡವಲಾಯಿತು. ಇದೀಗ ಅದರ ಅವಶೇಷಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ಇನ್ನು ಈ ತೆರವು ಕಾರ್ಯಚರಣೆಯಿಂದ ಮನೆ ಕಳೆದುಕೊಂಡಿರುವ ಬಡ ಜನರಿಗೆ ನಗರದ ಇತರ ಭಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪರ್ಯಾಯ ವಸತಿ ಒದಗಿಸಲಾಗಿದೆ. ಅಕ್ಬರ್‌ನಗರದ 1,800ಕ್ಕೂ ಹೆಚ್ಚು ಕುಟುಂಬಗಳು ವಸತಿ ಸೌಲಭ್ಯ ಪಡೆದಿವೆ. ಈ ಪ್ರದೇಶದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ