AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಈಗ 4 ಲಸಿಕೆಗಳಿವೆ; ದೇಶದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ: ಡಾ.ವಿ.ಕೆ.ಪೌಲ್

ವ್ಯಾಕ್ಸಿನೇಷನ್ ಬಗ್ಗೆ ಗರ್ಭಿಣಿಯರಿಗೆ ಸಲಹೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಲಸಿಕೆ ಗರ್ಭಿಣಿಯರಿಗೆ ಸುರಕ್ಷಿತವಾಗಿದೆ ಮತ್ತು ಆರೋಗ್ಯ ಸಚಿವಾಲಯ ಇದನ್ನು ಮತ್ತಷ್ಟು ಪರಿಶೀಲಿಸುತ್ತಿದೆ.

ಭಾರತದಲ್ಲಿ ಈಗ 4 ಲಸಿಕೆಗಳಿವೆ; ದೇಶದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ: ಡಾ.ವಿ.ಕೆ.ಪೌಲ್
ಡಾ. ವಿ.ಕೆ.ಪೌಲ್​
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 29, 2021 | 7:10 PM

Share

ದೆಹಲಿ: ಅಮೆರಿಕದ ಲಸಿಕೆ ಉತ್ಪಾದನಾ ದೈತ್ಯ ಮೊರ್ಡಾನಾಗೆ ಭಾರತದಲ್ಲಿ ತನ್ನ ಕೋವಿಡ್ -19 ಲಸಿಕೆಗಾಗಿ ನಿರ್ಬಂಧಿತ ತುರ್ತು ಬಳಕೆಯ ಅಧಿಕಾರವನ್ನು ನೀಡಲಾಗಿದೆ ಎಂದು ಕೊವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ವಿ.ಕೆ.ಪೌಲ್ ಮಂಗಳವಾರ ಹೇಳಿದ್ದಾರೆ. ಮಾಡರ್ನಾ ಈಗ ಭಾರತದ ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ ಬಳಸಲಾಗುವ ನಾಲ್ಕನೇ ಕೋವಿಡ್ -19 ಲಸಿಕೆಯಾಗಿದೆ. ರಷ್ಯಾದ ಗಮಲೇಯ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ ಅಸ್ಟ್ರಾಜೆನೆಕಾದ ಕೊವಿಶೀಲ್ಡ್, ಭಾರತ್ ಬಯೋಟೆಕ್​​ನ ಕೊವ್ಯಾಕ್ಸಿನ್ ಮತ್ತು ಸ್ಪುಟ್ನಿಕ್ ವಿ ನಂತರ ಮಾಡರ್ನಾ ಅವರ ಲಸಿಕೆ ಭಾರತದ ನಾಲ್ಕನೇ ಲಸಿಕೆ ಆಗಿದೆ. ಫೈಜರ್‌ನ ಲಸಿಕೆಗೂ ದೇಶ ಶೀಘ್ರದಲ್ಲೇ ದಾರಿ ಮಾಡಿಕೊಡಲಿದೆ ಎಂದು ಡಾ.ವಿ.ಕೆ ಪೌಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ದೇಶದಲ್ಲಿ ಲಸಿಕೆ ವಿತರಣೆ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಮಂಗಳವಾರ ಮಧ್ಯಾಹ್ನದ ವೇಳೆಗೆ 33 ಕೋಟಿ ಡೋಸ್ ಕೊವಿಡ್ -19 ಲಸಿಕೆಗಳನ್ನು ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ನೀಡಲಾಗಿದೆ. ಜೂನ್ ತಿಂಗಳಲ್ಲಿ, ಪ್ರತಿದಿನ ಸರಾಸರಿ 40 ಲಕ್ಷ ಡೋಸ್ ನೀಡಲಾಗುತ್ತಿತ್ತು. ಅಧಿಕೃತ ಮಾಹಿತಿಯ ಪ್ರಕಾರ ದೇಶದಲ್ಲಿ ಇಲ್ಲಿಯವರೆಗೆ ನೀಡಲಾದ 33 ಕೋಟಿ ಡೋಸ್‌ಗಳಲ್ಲಿ, 14.99 ಡೋಸ್‌ಗಳನ್ನು ಸ್ತ್ರೀಯರಿಗೆ ಮತ್ತು 17.48 ಕೋಟಿ ಡೋಸ್‌ಗಳನ್ನು ಪುರುಷರಿಗೆ ನೀಡಲಾಗಿದೆ.18-44 ವರ್ಷ ವಯಸ್ಸಿನ ಸುಮಾರು 59.7 ಕೋಟಿ ಜನರಿಗೆ, ಅಂದರೆ ಜನಸಂಖ್ಯೆಯ ಶೇಕಡಾ 15 ರಷ್ಟು ಜನರಿಗೆ ಲಸಿಕೆಯ ಮೊದಲ ಡೋಸ್‌ನೊಂದಿಗೆ ಲಸಿಕೆ ನೀಡಲಾಗಿದೆ ಎಂದು ಅದು ಹೇಳಿದೆ.

ಫೈಜರ್, ಮಾಡರ್ನಾ ಮತ್ತು ಜಾನ್ಸನ್ ಮತ್ತು ಜಾನ್ಸನ್ ಸೇರಿದಂತೆ ಹಲವಾರು ಲಸಿಕೆ ತಯಾರಕರೊಂದಿಗೆ ದೇಶವು ಮಾತುಕತೆ ನಡೆಸಿದೆ, ಆದರೆ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲಾಗಿಲ್ಲ.

ಗರ್ಭಿಣಿಯರಿಗೆ ಲಸಿಕೆ ವ್ಯಾಕ್ಸಿನೇಷನ್ ಬಗ್ಗೆ ಗರ್ಭಿಣಿಯರಿಗೆ ಸಲಹೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಲಸಿಕೆ ಗರ್ಭಿಣಿಯರಿಗೆ ಸುರಕ್ಷಿತವಾಗಿದೆ ಮತ್ತು ಆರೋಗ್ಯ ಸಚಿವಾಲಯ ಇದನ್ನು ಮತ್ತಷ್ಟು ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು.

ದೇಶದಲ್ಲಿ ಕೊವಿಡ್ ಪ್ರಕರಣ ದೇಶದಲ್ಲಿ ಕೊವಿಡ್ -19 ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ದೇಶಾದ್ಯಂತ ಕೇವಲ 111 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ದೈನಂದಿನ ಪ್ರಕರಣಗಳು ವರದಿಯಾಗಿವೆ. ಚೇತರಿಕೆ ದರವು ಪ್ರಸ್ತುತ ಶೇಕಡಾ 96.9 ರಷ್ಟಿದೆ. ಪ್ರಸ್ತುತ, ಭಾರತದಲ್ಲಿ 5.5 ಲಕ್ಷ ಸಕ್ರಿಯ ಪ್ರಕರಣಗಳಿವೆ ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ವೈರಸ್‌ ಪತ್ತೆಗಾಗಿ ಪ್ರತಿದಿನ ಸರಾಸರಿ 18 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಮೇ 7 ರಂದು ಭಾರತ ಎರಡನೇ ಅಲೆಯ ಉತ್ತುಂಗವನ್ನು ವರದಿ ಮಾಡಿದಾಗಿನಿಂದ ಕೊವಿಡ್ -19 ಪ್ರಕರಣಗಳ ಸಂಖ್ಯೆ ನಿರಂತರವಾಗಿ ಕಡಿಮೆಯಾಗಿದೆ. ಸೋಂಕಿನ ಹರಡುವಿಕೆ ಕಡಿಮೆ, ಮತ್ತು ಆದ್ದರಿಂದ, ಆರೋಗ್ಯ ರಕ್ಷಣೆಯ ಒತ್ತಡವೂ ಕಡಿಮೆ.

ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ  ಲವ್  ಅಗರ್ವಾಲ್, “ಸರಾಸರಿ ಹೊಸ ಪ್ರಕರಣಗಳಲ್ಲಿ ಶೇಕಡಾ 17 ರಷ್ಟು ಇಳಿಕೆ ಕಂಡುಬಂದಿದೆ ಮತ್ತು ಈಗ ಭಾರತದಲ್ಲಿ 111 ಜಿಲ್ಲೆಗಳು ಮಾತ್ರ ಪ್ರತಿದಿನ 100 ಕ್ಕೂ ಹೆಚ್ಚು ಕೊವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಅಂದಿನಿಂದ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ” ಎಂದು ಹೇಳಿದರು.

ಇದನ್ನೂ ಓದಿ:  CA exam 2021: ಸಿಎ ಪರೀಕ್ಷೆ ಮುಂದೂಡುವುದಿಲ್ಲ ಎಂದ ಸುಪ್ರೀಂಕೋರ್ಟ್: ಪರೀಕ್ಷೆ ತೆಗೆದುಕೊಳ್ಳಲು ಆಗದವರಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆ

ಇದನ್ನೂ ಓದಿ: ದೇಶದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳ ಸಂಖ್ಯೆ 51ಕ್ಕೆ ಏರಿಕೆ: ಕೇಂದ್ರ ಸರ್ಕಾರ

(There are four vaccines now We will soon close the deal on Pfizer as well says Dr VK Paul)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ