AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ಬಗ್ಗೆ ಸಮರ್ಥನೆಗೆ ಅವಕಾಶವೇ ಇಲ್ಲ; SCO ಶೃಂಗಸಭೆಯಲ್ಲಿ ಸಚಿವ ಜೈಶಂಕರ್ ಸಂದೇಶ

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ರಷ್ಯಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಯೋತ್ಪಾದನೆಯ ಬಗ್ಗೆ ದೃಢವಾದ ಸಂದೇಶವನ್ನು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯವು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿನ ಬೆದರಿಕೆಗೆ ಶೂನ್ಯ ಸಹಿಷ್ಣುತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.

ಭಯೋತ್ಪಾದನೆ ಬಗ್ಗೆ ಸಮರ್ಥನೆಗೆ ಅವಕಾಶವೇ ಇಲ್ಲ; SCO ಶೃಂಗಸಭೆಯಲ್ಲಿ ಸಚಿವ ಜೈಶಂಕರ್ ಸಂದೇಶ
Jaishankar
ಸುಷ್ಮಾ ಚಕ್ರೆ
|

Updated on: Nov 18, 2025 | 4:55 PM

Share

ನವದೆಹಲಿ, ನವೆಂಬರ್ 18: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಇಂದು ರಷ್ಯಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಯೋತ್ಪಾದನೆಯ ಕುರಿತು ತೀಕ್ಷ್ಣವಾದ ಸಂದೇಶವನ್ನು ನೀಡಿದ್ದಾರೆ. ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿನ ಬೆದರಿಕೆಗೆ ಜಗತ್ತು ಶೂನ್ಯ ಸಹಿಷ್ಣುತೆ ತೋರಿಸಬೇಕು ಎಂದು ಅವರು ಘೋಷಿಸಿದ್ದಾರೆ.

“ಭಯೋತ್ಪಾದನೆ ಕುರಿತು ಯಾವುದೇ ಸಮರ್ಥನೆಯಿಲ್ಲ, ವೈಟ್​ವಾಶ್ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಭಾರತವು “ಭಯೋತ್ಪಾದನೆಯ ವಿರುದ್ಧ ತನ್ನ ಜನರನ್ನು ರಕ್ಷಿಸುವ ಹಕ್ಕನ್ನು ಹೊಂದಿದೆ ಮತ್ತು ಭಾರತ ಆ ಹಕ್ಕನ್ನು ಚಲಾಯಿಸುತ್ತದೆ” ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಇನ್ನೂ ಅಮೆರಿಕದ ಜೊತೆ ಒಪ್ಪಂದ ಮಾಡಿಕೊಳ್ಳದಿರುವುದೇಕೆ? ಕಾರಣ ಬಿಚ್ಚಿಟ್ಟ ಸಚಿವ ಜೈಶಂಕರ್

“ಜಗತ್ತು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಿಗೆ ಶೂನ್ಯ ಸಹಿಷ್ಣುತೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ” ಎಂದು ಜೈಶಂಕರ್ ಹೇಳಿದ್ದಾರೆ.

ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟವನ್ನು ಭಯೋತ್ಪಾದಕ ದಾಳಿ ಎಂದು ಪರಿಗಣಿಸಿ ತನಿಖೆಯನ್ನು NIAಗೆ ಹಸ್ತಾಂತರಿಸುವಂತೆ ಕೇಂದ್ರವು ನಿರ್ದೇಶಿಸಿದ ಕೆಲವೇ ದಿನಗಳಲ್ಲಿ ಜೈಶಂಕರ್ ಈ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು; ವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಸಚಿವ ಜೈಶಂಕರ್

ಮಾಸ್ಕೋಗೆ ಆಗಮಿಸುವ ಮೂಲಕ 3 ದಿನಗಳ ರಷ್ಯಾ ಭೇಟಿಯನ್ನು ಪ್ರಾರಂಭಿಸಿದ ಸಚಿವ ಜೈಶಂಕರ್, ಮುಂದಿನ ತಿಂಗಳು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನವದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ SCO ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ