Petrol Diesel Rate Today: ರಷ್ಯಾ-ಉಕ್ರೇನ್​ ಸಂಘರ್ಷದಿಂದ ಕಚ್ಚಾತೈಲದ ಬೆಲೆ ಏರಿಕೆ; ಭಾರತದ ಮಹಾನಗರಗಳಲ್ಲಿ ಎಷ್ಟಿದೆ ಪೆಟ್ರೋಲ್​-ಡೀಸೆಲ್​ ದರ?

ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ.

Petrol Diesel Rate Today: ರಷ್ಯಾ-ಉಕ್ರೇನ್​ ಸಂಘರ್ಷದಿಂದ ಕಚ್ಚಾತೈಲದ ಬೆಲೆ ಏರಿಕೆ; ಭಾರತದ ಮಹಾನಗರಗಳಲ್ಲಿ ಎಷ್ಟಿದೆ ಪೆಟ್ರೋಲ್​-ಡೀಸೆಲ್​ ದರ?
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Feb 17, 2022 | 9:32 AM

Petrol Diesel Price Today| ರಷ್ಯಾ ಮತ್ತು ಉಕ್ರೇನ್​ ನಡುವಿನ ಉದ್ವಿಗ್ನತೆಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಳೆದ ಏಳುವರ್ಷಗಳಲ್ಲೇ ಗರಿಷ್ಠಮಟ್ಟಕ್ಕೆ ತಲುಪಿದೆ. ಈ ಕಾರಣಕ್ಕೆ ಅಮೆರಿಕ-ಪಾಕಿಸ್ತಾನ ಸೇರಿ ವಿಶ್ವದ ಹಲವು ದೇಶಗಳಲ್ಲಿ ಪೆಟ್ರೋಲ್​ ಬೆಲೆಯೂ ಹೆಚ್ಚಾಗಿದೆ. ಆದರೆ ಭಾರತದಲ್ಲಿ 2021ರ ನವೆಂಬರ್​ ತಿಂಗಳಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತ ಆಗಲಿಲ್ಲ. ಈಗಂತೂ ಪಂಚರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಸದ್ಯ ಏರಿಕೆಯಾಗುವುದೂ ಇಲ್ಲ ಎಂದು ಹೇಳಲಾಗಿದೆ.  ಆದರೆ ಮಾರ್ಚ್​ ತಿಂಗಳಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗಬಹುದು ಎಂಬ ನಿರೀಕ್ಷೆಯೂ ಇದೆ.

ಭಾರತದಲ್ಲಿ 2021ರ ನವೆಂಬರ್​​ವರೆಗೆ ಪೆಟ್ರೋಲ್​ ರೇಟ್​ ಹೆಚ್ಚುತ್ತಲೇ ಇತ್ತು. ಆದರೆ ನವೆಂಬರ್ 3ರಂದು ದೇಶದ ಜನರಿಗೆ ದೀಪಾವಳಿ ಉಡುಗೊರೆಯೆಂಬಂತೆ ಕೇಂದ್ರ ಸರ್ಕಾರ ಪೆಟ್ರೋಲ್​-ಡೇಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಪೆಟ್ರೋಲ್​ ಮೇಲೆ 5 ರೂಪಾಯಿ ಮತ್ತು ಡೀಸೆಲ್​ ಮೇಲೆ 10 ರೂಪಾಯಿ ಅಬಕಾರಿ ಸುಂಕ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ಇಂಧನ ಬೆಲೆಯಲ್ಲಿ ಇಳಿಕೆಯಾಗಿ, ವಾಹನ ಬಳಕೆದಾರರು ಸ್ವಲ್ಪ ಮಟ್ಟಿಗೆ ನಿಟ್ಟುಸಿರುಬಿಡುವಂತಾಯ್ತು. ಇನ್ನು ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸುತ್ತಿದ್ದಂತೆಯೇ, ಹಲವು ರಾಜ್ಯಸರ್ಕಾರಗಳೂ ಕೂಡ ಇಂಧನಗಳ ಮೇಲಿನ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆ ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಹಾಗಿದ್ದಾಗ್ಯೂ ಕೂಡ ದೇಶದ 25ಕ್ಕೂ ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ಬೆಲೆ 100 ರೂಪಾಯಿ ಮೇಲೆ ಇದೆ.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ?

ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ. ರಾಷ್ಟ್ರದ ಸುಮಾರು 27 ಮಹಾನಗರಗಳಲ್ಲಿ ಪೆಟ್ರೋಲ್​ ದರ 100 ರೂ.ಗಡಿ ದಾಟಿದೆ.

ನೀವೇ ಚೆಕ್​ ಮಾಡಿಕೊಳ್ಳಬಹುದು

ನಿಮ್ಮ ನಗರದಲ್ಲಿರುವ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಗ್ರಾಹಕರೇ ಎಸ್​ಎಂಎಸ್ ಮೂಲಕ ಪಡೆದುಕೊಳ್ಳಬಹುದು. ಇಂಡಿಯನ್ ಆಯ್ಲ್​ ಕಂಪನಿ ಗ್ರಾಹಕರು RSP <space> (Dealer Code of Petrol Pump -ಡೀಲರ್ ಕೋಡ್​ ಹಾಕಿ ) ಎಂದು  9224992249 ನಂಬರ್​ಗೆ ಎಸ್​ಎಂಎಸ್​ ಕಳಿಸಬೇಕು. ನಂತರ ಬಿಪಿಸಿಎಲ್​ ಗ್ರಾಹಕರು ಇದೇ ಮಾದರಿಯಲ್ಲಿ 9223112222 ಕ್ಕೆ ಮತ್ತು ಎಚ್​ಪಿಸಿಎಲ್​ ಗ್ರಾಹಕರು HPPrice ಎಂದು ಬರೆದು, ಕೋಡ್ ಹಾಕಿ 9222201122ಕ್ಕೆ ಕಳಿಸಬೇಕು.

ಪ್ರತಿ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಇದನ್ನೂ ಓದಿ: Rohit Sharma: ರೋಚಕ ಗೆಲುವಿನ ಬಳಿಕ ರೋಹಿತ್ ಶರ್ಮಾ ಹೊಗಳಿದ್ದು ಮಾತ್ರ ಈ ಒಬ್ಬ ಆಟಗಾರನನ್ನು