ಗೋವಾದಲ್ಲಿ ಅವಧಿಗೂ ಪೂರ್ವ ವಿಧಾನಸಭೆ ಚುನಾವಣೆ?!-ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿದ್ದೇನು?

40 ಸದಸ್ಯರ ಬಲ ಇರುವ ಗೋವಾ ವಿಧಾನಸಭೆಯಲ್ಲಿ, ಸದ್ಯ ಬಿಜೆಪಿ 27 ಶಾಸಕರು ಇದ್ದಾರೆ. ಕಾಂಗ್ರೆಸ್​ನ ಐವರು ಶಾಸಕರಿದ್ದಾರೆ. ಇನ್ನುಳಿದಂತೆ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮೂವರು ಶಾಸಕರಿದ್ದಾರೆ.

ಗೋವಾದಲ್ಲಿ ಅವಧಿಗೂ ಪೂರ್ವ ವಿಧಾನಸಭೆ ಚುನಾವಣೆ?!-ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿದ್ದೇನು?
ಪ್ರಮೋದ್ ಸಾವಂತ್​
Follow us
TV9 Web
| Updated By: Lakshmi Hegde

Updated on: Aug 12, 2021 | 2:36 PM

ಗೋವಾದಲ್ಲಿ ಅವಧಿಗೂ ಮೊದಲೇ ವಿಧಾನಸಭೆ ಚುನಾವಣೆ (Goa Assembly elections) ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಗೋವಾದಾದ್ಯಂತ ಬಿಜೆಪಿ ನಾಯಕರು ಮಂಗಳವಾರದಿಂದಲೇ ಚುನಾವಣಾ ಪ್ರಚಾರ (Election Campaign) ನಡೆಸುತ್ತಿರುವ ಕಾರಣ, ಅಲ್ಲಿ ಅವಧಿ ಪೂರ್ವ ಚುನಾವಣೆ ಪಕ್ಕಾ ಎಂದೇ ಹೇಳಲಾಗುತ್ತಿತ್ತು. ಈ ಮಧ್ಯೆ ಒಂದೆರಡು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಕೂಡ ಗೋವಾ ಪ್ರವಾಸ ಕೈಗೊಂಡಿದ್ದರು. ಆದರೆ ಈಗ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್ (Pramod Sawant​ ಎಲ್ಲ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಗೋವಾದಲ್ಲಿ ವಿಧಾನಸಭೆ ಚುನಾವಣೆ ಅವಧಿ ಪೂರ್ವವಾಗಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಗೋವಾದಲ್ಲಿ 2022ರ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ಈಗಿನಿಂದಲೇ ಬಿಜೆಪಿ ನಾಯಕರು ಪ್ರಚಾರ ಶುರು ಮಾಡಿದ್ದನ್ನು ನೋಡಿ, ಫೆಬ್ರವರಿಗೂ ಮೊದಲೇ ಚುನಾವಣೆ ನಡೆಯುವ ಬಗ್ಗೆ ಬಲವಾದ ಚರ್ಚೆ ಶುರುವಾಗಿತ್ತು. ಆದರೆ ಮುಖ್ಯಮಂತ್ರಿಯೀಗ ಅದನ್ನು ಅಲ್ಲಗಳೆದಿದ್ದಾರೆ. ಮುಂಚಿತವಾಗಿ ಚುನಾವಣೆ ನಡೆಯುವ ಸಾಧ್ಯತೆಯೇ ಇಲ್ಲ ಎಂದಿದ್ದಾರೆ. ಹಾಗೇ, ಮುಖ್ಯಮಂತ್ರಿ ಪ್ರಮೋದ್​ ಸಾವಂತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತನವಡೆ ಮುಂದಿನ 15 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

40 ಸದಸ್ಯರ ಬಲ ಇರುವ ಗೋವಾ ವಿಧಾನಸಭೆಯಲ್ಲಿ, ಸದ್ಯ ಬಿಜೆಪಿ 27 ಶಾಸಕರು ಇದ್ದಾರೆ. ಕಾಂಗ್ರೆಸ್​ನ ಐವರು ಶಾಸಕರಿದ್ದಾರೆ. ಇನ್ನುಳಿದಂತೆ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮೂವರು, ಮಹಾರಾಷ್ಟ್ರವಾದಿ ಗೋಮಂತಕ ಪಕ್ಷ ಮತ್ತು ಎನ್‌ಸಿಪಿಯ ತಲಾ ಒಂದು ಸದಸ್ಯರಿದ್ದು, ಇನ್ನುಳಿದಂತೆ ಮೂವರು ಸ್ವತಂತ್ರ ಶಾಸಕರಿದ್ದಾರೆ.

ಇದನ್ನೂ ಓದಿ: World Elephant Day 2021: ವಾವ್​! ತಮ್ಮ ದಿನವನ್ನು ಆಚರಿಸಲು 1300 ಕಿ.ಮೀ ನಡೆದು ತವರಿಗೆ ಬಂದ ಆನೆಗಳು

ಬಿಎಸ್​ವೈ ಮಾರ್ಗದರ್ಶನದಲ್ಲಿ ಸರ್ಕಾರ ನಡೆಸಿ, ನನ್ನಿಂದ ನಿಮಗೆ ಏನೂ ತೊಂದರೆ ಆಗುವುದಿಲ್ಲ: ಹೆಚ್​.ಡಿ.ದೇವೇಗೌಡ

(There in no possibility of Early Assembly Election in Goa said Cm Pramod Sawant)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ