ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿದೆ ಎಂಬುದಕ್ಕೆ ಒಂದೂ ಪುರಾವೆಗಳಿಲ್ಲ: ಚುನಾವಣಾ ಆಯೋಗಕ್ಕೆ ವಿಶೇಷ ವೀಕ್ಷಕರ ವರದಿ ಸಲ್ಲಿಕೆ

ಮಮತಾ ಬ್ಯಾನರ್ಜಿಯವರು ನಂದಿಗ್ರಾಮದಲ್ಲಿ ಪೊಲೀಸ್ ರಕ್ಷಣೆಯಲ್ಲೇ ಇದ್ದರು. ಅವರ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿತ್ತು ಎಂದು ವಿಶೇಷ ವೀಕ್ಷಕರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿದೆ ಎಂಬುದಕ್ಕೆ ಒಂದೂ ಪುರಾವೆಗಳಿಲ್ಲ: ಚುನಾವಣಾ ಆಯೋಗಕ್ಕೆ ವಿಶೇಷ ವೀಕ್ಷಕರ ವರದಿ ಸಲ್ಲಿಕೆ
ಮಮತಾ ಬ್ಯಾನರ್ಜಿ
Follow us
Lakshmi Hegde
|

Updated on: Mar 13, 2021 | 7:27 PM

ಕೋಲ್ಕತ್ತ: ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಮಮತಾ ಬ್ಯಾನರ್ಜಿಯವರು ಆಕಸ್ಮಿಕವಾಗಿ ಗಾಯಗೊಂಡಿದ್ದಾರೆ. ಹಲ್ಲೆಯ ಯಾವುದೇ ಕುರುಹೂ ಇಲ್ಲ ಎಂದು ಚುನಾವಣಾ ಆಯೋಗ ನಿಯೋಜಿಸಿದ್ದ ವಿಶೇಷ ವೀಕ್ಷಕರು ವರದಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್​ 10ರಂದು ಮಮತಾ ಬ್ಯಾನರ್ಜಿಯವರು ನಂದಿಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಅವರು ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದರು. ಯಾರೋ 4-5 ಜನ ಅಪರಿಚಿತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಅವರು ಆರೋಪ ಮಾಡಿದ್ದರು. ಇನ್ನು ಮಮತಾ ಬ್ಯಾನರ್ಜಿಯವರ ಮೇಲೆ ಆದ ಹಲ್ಲೆಯ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಸರ್ಕಾರದ ವತಿಯಿಂದ ಚುನಾವಣಾ ಆಯೋಗಕ್ಕೂ ಮನವಿ ಸಲ್ಲಿಸಲಾಗಿತ್ತು.. ಹಾಗೇ ಘಟನೆಯ ಬಗ್ಗೆ ವರದಿಯನ್ನೂ ನೀಡಲಾಗಿತ್ತು. ಆದರೆ ಇಂದು ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಸರ್ಕಾರ ನೀಡಿದ ವರದಿ ಅಪೂರ್ಣವಾಗಿದೆ ಎಂದು ಹೇಳಿದ್ದಲ್ಲದೆ, ಇನ್ನಷ್ಟು ಮಾಹಿತಿಯನ್ನೂ ಕೇಳಿತ್ತು.

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಯವರು ಗಾಯಗೊಳ್ಳಲು ಕಾರಣವಾದ ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಚುನಾವಣಾ ಆಯೋಗ ವಿವೇಕ್​ ದುಬೆ ಮತ್ತು ಅಜಯ್ ನಾಯಕ್​ರನ್ನು ವಿಶೇಷ ವೀಕ್ಷಕರನ್ನಾಗಿ ನೇಮಕ ಮಾಡಿತ್ತು. ಅವರು ತಮ್ಮ ಪರಿಶೀಲನಾ ವರದಿಯನ್ನು ಇಂದು ಎಲೆಕ್ಷನ್ ಕಮಿಶನ್​ಗೆ ಸಲ್ಲಿಸಿದ್ದು, ಮಮತಾ ಬ್ಯಾನರ್ಜಿಯವರ ಮೇಲೆ ಹಲ್ಲೆ ನಡೆದಿದೆ, ಯಾರೋ ದಾಳಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಯೂ ಸಿಗುತ್ತಿಲ್ಲ. ಹಾಗೇ, ಮಮತಾ ಬ್ಯಾನರ್ಜಿಯವರ ಬೆಂಗಾವಲು ಪಡೆಯ ಮೇಲೆ ಹಲ್ಲೆಯಾಗಿದ್ದಕ್ಕೂ ಸಾಕ್ಷಿಗಳಿಲ್ಲ. ಇನ್ನು ಮಮತಾ ಬ್ಯಾನರ್ಜಿಯವರು ನಂದಿಗ್ರಾಮದಲ್ಲಿ ಪೊಲೀಸ್ ರಕ್ಷಣೆಯಲ್ಲೇ ಇದ್ದರು. ಅವರ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿತ್ತು ಎಂದೂ ವೀಕ್ಷಕರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಅಜಯ್​ ನಾಯಕ್​ ಹಾಗೂ ವಿವೇಕ್ ದುಬೆ ತಮ್ಮ ವರದಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವ ಮೊದಲು ಸ್ಥಳವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದಲ್ಲದೆ, ಸುತ್ತಲಿನವರನ್ನೂ ಕೆಲವರನ್ನು ವಿಚಾರಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಮಮತಾ ಬ್ಯಾನರ್ಜಿಯವರ ಮೇಲೆ ಹಲ್ಲೆ ನಡೆದಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದ ತೃಣಮೂಲ ಕಾಂಗ್ರೆಸ್ ನಾಯಕರು, ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾರನ್ನೂ ಭೇಟಿಯಾಗಿದ್ದರು. ಇದೊಂದು ಪಿತೂರಿ ಎಂದೇ ಪ್ರತಿಪಾದಿಸಿದ್ದರು. ಇನ್ನು ಘಟನೆಯ ಬಗ್ಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಿಂದ ಚುನಾವಣಾ ಆಯೋಗ ವಿವರಣೆ ಕೇಳಿದ್ದು, ಅವರೇನು ಸಲ್ಲಿಸುತ್ತಾರೆ ಎಂಬುದು ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ‘ವರದಿ ಅಪೂರ್ಣ..ಅಸ್ಪಷ್ಟವಾಗಿದೆ, ಬೇರೆ ಕೊಡಿ’-ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯ ಬಗ್ಗೆ ಇನ್ನಷ್ಟು ವಿವರಣೆ ಕೇಳಿದ ಚುನಾವಣಾ ಆಯೋಗ

Mamata Banerjee: ನಂದಿಗ್ರಾಮದಲ್ಲಿ ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್