AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ

ಪಿಎಂ ಕೇರ್ಸ್​ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎನ್ನುವ ಆರೋಪವನ್ನು ವಿಪಕ್ಷಗಳು ಮಾಡಿದ್ದವು. ಅಲ್ಲದೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ
ಪ್ರಧಾನಿ ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 9:46 PM

Share

ನವದೆಹಲಿ: ಪಿಎಂ ಕೇರ್ಸ್​ ಹಣ ಸೋರಿಕೆ ಆಗುತ್ತಿದೆ ಎನ್ನುವ ಆರೋಪವನ್ನು ಪ್ರತಿಪಕ್ಷಗಳು ಈ ಮೊದಲಿನಿಂದಲೂ ಮಾಡುತ್ತಲೇ ಬಂದಿವೆ. ಈವರೆಗೆ ಕೇಂದ್ರ ಸರ್ಕಾರ ಈ ಬಗ್ಗೆ ಮೌನ ತಾಳುತ್ತಲೇ ಬಂದಿತ್ತು. ಆದರೆ, ಈಗ ಪ್ರತಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಪಿಎಂ ಕೇರ್ಸ್​ ಮೇಲೆ ನಮ್ಮ ನಿಯಂತ್ರಣ ಇಲ್ಲ ಎಂದಿದೆ.

ಪಿಎಂ ಕೇರ್ಸ್​ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎನ್ನುವ ಆರೋಪವನ್ನು ವಿಪಕ್ಷಗಳು ಮಾಡಿದ್ದವು. ಅಲ್ಲದೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಈ ಎಲ್ಲ ಚರ್ಚೆಗಳಿಗೆ ಕೇಂದ್ರ ಸರ್ಕಾರ ಇತಿಶ್ರೀ ಹಾಡಿದೆ.

ಪಿಎಂ ಕೇರ್ಸ್​ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳ ನೇರ ಅಥವಾ ಪರೋಕ್ಷ ನಿಯಂತ್ರಣವಿರುವುದಿಲ್ಲ. ಈ ಹಣವನ್ನು ಸಾಂಕ್ರಾಮಿಕ ರೋಗ, ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಕಾಮಗಾರಿಗಳಿಗೆ ಬಳಕೆ ಮಾಡಲಾಗುತ್ತದೆ. ಟ್ರಸ್ಟ್‌ನ ಸದಸ್ಯರು ಕೂಡ ಟ್ರಸ್ಟ್‌ಗೆ ಹಣ ದೇಣಿಗೆ ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಧಾನಿ‌ ನರೇಂದ್ರ ಮೋದಿ ಪಿಎಂ ಕೇರ್ಸ್ ಟ್ರಸ್ಟ್‌ನ ಅಧ್ಯಕ್ಷರಾಗಿರುತ್ತಾರೆ. ಪ್ರಧಾನಿಯವರು ಟ್ರಸ್ಟ್‌ನ ಉಪಾಧ್ಯಕ್ಷರನ್ನೂ ನೇಮಿಸಬಹುದು. ಗೃಹ, ರಕ್ಷಣಾ, ಹಣಕಾಸು ಖಾತೆ ಸಚಿವರು ಈ ಟ್ರಸ್ಟ್​ನ ಸದಸ್ಯರಾಗಿರುತ್ತಾರೆ, ಎಂದು ತಿಳಿಸಿದೆ.

ಪಿಎಂ ಕೇರ್ಸ್ ನಿಧಿಯಲ್ಲಿ ಪಾರದರ್ಶಕತೆಯಿಲ್ಲವೆಂದು ಟೀಕೆಗಳು ಕೇಳಿ ಬಂದಿದ್ದವು. ಆಪರೇಷನ್​ ಕಮಲಕ್ಕೆ ಪಿಎಂ ಕೇರ್ಸ್​ ಹಣ ಬಳಕೆ ಮಾಡಿಕೊಳ್ಳಲಾಗಿತ್ತು ಎನ್ನುವ ಗಂಭೀರ ಆರೋಪವನ್ನು ವಿಪಕ್ಷಗಳು ಮಾಡಿದ್ದವು.

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ