ಪಿಎಂ ಕೇರ್ ನಿಧಿ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟಿನಿಂದ ಮಹತ್ವದ ಆದೇಶ ಹೊರಬಿದ್ದಿದೆ.
ಪಿಎಂ ಕೇರ್ ಫಂಡ್ PM CARES Fund ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಪಿಎಂ ಕೇರ್ ಫಂಡ್, NDRF ನಿಂದ ಪ್ರತ್ಯೇಕವಾಗಿದೆ ಜೊತೆಗೆ NDRF ನಿಧಿಗೆ ಜನರು ಹಣ ನೀಡುವುದಕ್ಕೆ ಯಾವುದೇ ನಿರ್ಬಂಧ ಇಲ್ಲ.
ಆದರೆ ಪಿಎಂ ಕೇರ್ ಫಂಡ್ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿದ್ದು ಇದರಿಂದ ಪ್ರತ್ಯೇಕವಾಗಿದೆ. ಹೀಗಾಗಿ ಪಿಎಂ ಕೇರ್ ಫಂಡ್ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆಗೆ ನಿರ್ದೇಶನ ನೀಡುವ ಅಗತ್ಯವಿಲ್ಲ. ಇದರಿಂದಾಗಿ ವಿಪತ್ತು ನಿರ್ವಹಣಾ ನಿಧಿ ನಿಯಮ ಉಲ್ಲಂಘನೆಯಾಗಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.