AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸುವ ಜನರಲ್ಲಿ ನಾನು ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ.ಮೋದಿ ಜಿ ಐದಾರು ದೇಶಗಳಿಗೆ ಹೋಗಿ ನಮ್ಮ ದೇಶದ ಜನರನ್ನು ಅವಮಾನಿಸಿದಾಗ, ಭಾರತ ದೇಶದಲ್ಲೇ ಹುಟ್ಟಿದ್ದು ಪಾಪ ಎಂದು ಹೇಳಿದಾಗ ಯಾರೂ ಏನೂ ಹೇಳಿಲ್ಲ ಯಾಕೆ?

ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ರಾಹುಲ್ ಗಾಂಧಿ- ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ
|

Updated on: Mar 15, 2023 | 2:56 PM

Share

ದೆಹಲಿ: ಬ್ರಿಟನ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶದಲ್ಲಿ ತಮ್ಮ ಹೇಳಿಕೆಗಳ ಮೂಲಕ ದೇಶದ ಜನರನ್ನು “ಅವಮಾನಗೊಳಿಸಿರುವ” ಬಗ್ಗೆ ಉತ್ತರಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuan Kharge) ಬುಧವಾರ ಹೇಳಿದ್ದಾರೆ. ಯುಕೆಯಲ್ಲಿ “ಪ್ರಜಾಪ್ರಭುತ್ವವು ದಾಳಿಗೆ ಒಳಗಾಗಿದೆ” ಎಂಬ ಹೇಳಿಕೆಗೆ ರಾಹುಲ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಮತ್ತು ಹಲವಾರು ಹಿರಿಯ ಸಚಿವರು ಒತ್ತಾಯಿಸುತ್ತಿದ್ದಾರೆ.

ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸುವ ಜನರಲ್ಲಿ ನಾನು ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ.ಮೋದಿ ಜಿ ಐದಾರು ದೇಶಗಳಿಗೆ ಹೋಗಿ ನಮ್ಮ ದೇಶದ ಜನರನ್ನು ಅವಮಾನಿಸಿದಾಗ, ಭಾರತ ದೇಶದಲ್ಲೇ ಹುಟ್ಟಿದ್ದು ಪಾಪ ಎಂದು ಹೇಳಿದಾಗ ಯಾರೂ ಏನೂ ಹೇಳಿಲ್ಲ ಯಾಕೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇಲ್ಲಿ ಪ್ರಜಾಪ್ರಭುತ್ವ ಕ್ಷೀಣಿಸುತ್ತಿದೆ, ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯವನ್ನು ದುರ್ಬಲಗೊಳಿಸಲಾಗುತ್ತಿದೆ, ಟಿವಿ ಚಾನೆಲ್‌ಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಮತ್ತು ಸತ್ಯವನ್ನು ಮಾತನಾಡುವ ಜನರನ್ನು ಜೈಲಿಗೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವನ್ನು ಕೊನೆಗೊಳಿಸುವ ಪ್ರಕ್ರಿಯೆಯಲ್ಲದಿದ್ದರೆ ಏನು? ರಾಹುಲ್ ಗಾಂಧಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಇತ್ತೀಚಿನ ಯುಕೆ ಪ್ರವಾಸದ ಸಮಯದಲ್ಲಿ ರಾಹುಲ್ ಗಾಂಧಿಯವರ ಟೀಕೆಗಳನ್ನು ಸಂಸತ್​​ನಲ್ಲಿ ಬಿಜೆಪಿ ಖಂಡಿಸಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಎರಡು ದಿನಗಳಲ್ಲಿ ಯಾವುದೇ ಮಹತ್ವದ ಕಲಾಪ ನಡೆಸಲು ಎರಡೂ ಸದನಗಳು ವಿಫಲವಾಗಿವೆ. ಯುಕೆಯಲ್ಲಿ ತಮ್ಮ ಸಂವಾದದ ಸಮಯದಲ್ಲಿ ರಾಹುಲ್ ಗಾಂಧಿ ಅವರು ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ದಾಳಿಗೆ ಒಳಗಾಗುತ್ತಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ “ಪೂರ್ಣ ಪ್ರಮಾಣದ ಆಕ್ರಮಣ” ನಡೆಯುತ್ತಿದೆ ಎಂದು ಆರೋಪಿಸಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದಾಗ ಮೈಕ್‌ಗಳನ್ನು “ಆಫ್” ಮಾಡಲಾಗುತ್ತದೆ ಎಂದು ರಾಹುಲ್, ಲಂಡನ್‌ನಲ್ಲಿ ಬ್ರಿಟಿಷ್ ಸಂಸದರ ಮುಂದೆ ಹೇಳಿದ್ದರು.

ಇದನ್ನೂ ಓದಿ: Delhi Liquor Case: ಕೆ.ಕವಿತಾಗೆ ಇಡಿ ಸಮನ್ಸ್‌ ತಡೆ ನೀಡಲು ನಿರಾಕರಿಸಿದ ಸುಪ್ರೀಂ, ಮಾ. 24ಕ್ಕೆ ಅರ್ಜಿ ವಿಚಾರಣೆ

ರಾಹುಲ್ ಗಾಂಧಿಯವರ ಹೇಳಿಕೆಗಳು ರಾಜಕೀಯ ವಾಗ್ದಾಳಿಗೆ ಕಾರಣವಾಗಿದ್ದು, ಅವರು ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿ ವಿದೇಶಿ ಮಧ್ಯಸ್ಥಿಕೆಗಳನ್ನು ಬಯಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅದೇ ವೇಳೆ ಪ್ರಧಾನಿ ಮೋದಿ ವಿದೇಶದಲ್ಲಿ ಆಂತರಿಕ ರಾಜಕೀಯವನ್ನು ಮಾತನಾಡಿದ್ದನ್ನು ತೋರಿಸಿ ಕಾಂಗ್ರೆಸ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ