AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ರಾಷ್ಟ್ರಮಟ್ಟದಲ್ಲಿ ಬದಲಾವಣೆಯಾಗಲಿದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮೋದಿ ವಾಗ್ದಾಳಿಗೆ ಕೆಸಿಆರ್ ಪ್ರತಿಕ್ರಿಯೆ

ಯಾರೂ ಸಂತೋಷವಾಗಿಲ್ಲ, ರಾಷ್ಟ್ರ ಮಟ್ಟದಲ್ಲಿ ಬದಲಾವಣೆಯಾಗಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎರಡು-ಮೂರು ತಿಂಗಳಲ್ಲಿ ನಿಮಗೆ ಸೆನ್ಸೇಷನಲ್ ನ್ಯೂಸ್ ಸಿಗಲಿದೆ ಎಂದು ಕೆ ಚಂದ್ರಶೇಖರ ರಾವ್ ಹೇಳಿದ್ದಾರೆ.

ಈ ಬಾರಿ ರಾಷ್ಟ್ರಮಟ್ಟದಲ್ಲಿ ಬದಲಾವಣೆಯಾಗಲಿದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮೋದಿ ವಾಗ್ದಾಳಿಗೆ ಕೆಸಿಆರ್ ಪ್ರತಿಕ್ರಿಯೆ
ಕೆ.ಚಂದ್ರಶೇಖರ್ ರಾವ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 26, 2022 | 7:09 PM

Share

ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ‘ಪರಿವಾರವಾದ್ (ವಂಶಾಡಳಿತ ರಾಜಕೀಯ) ‘ವಾಗ್ದಾಳಿಗೆ ಪ್ರತಿಕ್ರಿಯಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (K Chandrashekar Rao) “ಯಾರೂ ಸಂತೋಷವಾಗಿಲ್ಲ, ರಾಷ್ಟ್ರ ಮಟ್ಟದಲ್ಲಿ ಬದಲಾವಣೆಯಾಗಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎರಡು-ಮೂರು ತಿಂಗಳಲ್ಲಿ ನಿಮಗೆ ಸೆನ್ಸೇಷನಲ್ ನ್ಯೂಸ್ ಸಿಗಲಿದೆ ಎಂದು ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಸಿಆರ್ (KCR), ದೇಶದಲ್ಲಿ ಆದಿವಾಸಿಗಳು, ರೈತರು ಮತ್ತು ಬಡವರು ನೆಮ್ಮದಿಯಾಗಿಲ್ಲ. ಕೈಗಾರಿಕೆಗಳು ಮುಚ್ಚುತ್ತಿವೆ. ಜಿಡಿಪಿ ಕುಸಿಯುತ್ತಿದೆ, ಹಣದುಬ್ಬರ ಹೆಚ್ಚುತ್ತಿದೆ ಮತ್ತು ರೂಪಾಯಿ ಮೌಲ್ಯ ಕುಸಿಯುತ್ತಿದೆ. ಭಾಷಣ ಮಾಡುತ್ತೀರಿ ಆದರೆ ನಮಗೆ ಬದಲಾವಣೆ ಬೇಕು ಎಂದು ತೆಲಂಗಾಣ ರಾಷ್ಟ್ರ ಸಮಿತಿ ನಾಯಕ ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಬೆಂಗಳೂರಿನಲ್ಲಿ ಭೇಟಿಯಾದ ನಂತರ ಕೆಸಿಆರ್ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರದ ವಿರುದ್ಧ ಗುಡುಗಿದ್ದಾರೆ. ದೇವೇಗೌಡರ ಜತೆಗಿನ ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೂಡಾ ಭಾಗಿಯಾಗಿದ್ದರು. ತೆಲಂಗಾಣದ ಗೌರವಾನ್ವಿತ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಇದು ನಮ್ಮ ಮನೆಯಲ್ಲಿ ನನ್ನನ್ನು ಭೇಟಿಯಾಗಿದ್ದರು. ದೇಶದಲ್ಲಿನ ಪ್ರಮುಖ ಸಂಗತಿಗಳ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಇದು ಸೌಹಾರ್ದಯುತ ಸಭೆಯಾಗಿತ್ತು ಎಂದು ದೇವೇಗೌಡ ಟ್ವೀಟ್ ಮಾಡಿದ್ದಾರೆ.

ನಮ್ಮ ಹಿರಿಯ ಸಹೋದರ ಗೌರವಾನ್ವಿಕ ದೇವೇಗೌಡ ಜೀ ಮತ್ತು ಕುಮಾರಸ್ವಾಮಿ ಜೀ ಅವರೊಂದಿಗೆ ದೇಶ, ಕರ್ನಾಟಕ ರಾಜ್ಯ ರಾಜಕಾರಣ ಮತ್ತು ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಒಂದು ವಿಷಯ, ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಹಿಂದೆ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತೇನೆ ಎಂದು ಹೇಳಿದಾಗ ನನ್ನ ಮಾತು ನಿಜ ಎಂದು ಸಾಬೀತಾಗಿತ್ತು. ಅವರು ಮುಖ್ಯಮಂತ್ರಿಯಾದರು. ಈ ಬಾರಿ ರಾಷ್ಟ್ರಮಟ್ಟದಲ್ಲಿ ಬದಲಾವಣೆಯಾಗಲಿದೆ ಎಂದು ಭರವಸೆ ನೀಡುತ್ತೇನೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’  ಎಂದಿದ್ದಾರೆ  ಕೆಸಿಆರ್.

“ಭಾರತ ಬದಲಾಗುತ್ತದೆ. ಮಾತುಕತೆಗಳು ಯಾವಾಗಲೂ ನಡೆಯುತ್ತವೆ. ಈ ದೇಶವು ‘ಇಸಂಗಳು’ ಮತ್ತು ಭಾಷಣಗಳನ್ನು ಮೀರಿ ಬೆಳೆಯಬೇಕಾಗಿದೆ,” ಎಂದು ಅವರು ಬಿಜೆಪಿ ವಿರುದ್ಧ ಪ್ರತಿದಾಳಿ ನಡೆಸಿದರು.

ಇದನ್ನೂ ಓದಿ
Image
‘ರಾಜಕೀಯದಲ್ಲಿ ಇರುವುದಕ್ಕಿಂತ ಮನೆಗೆ ಹೋಗಿ ಅಡುಗೆ ಮಾಡಿ’: ಸುಪ್ರಿಯಾ ಸುಳೆ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಅಧ್ಯಕ್ಷನ ಹೇಳಿಕೆಗೆ ವ್ಯಾಪಕ ಖಂಡನೆ
Image
PM Modi in Hyderabad: ಹೈದರಾಬಾದಿನಲ್ಲಿ ಯೋಗಿ ಆದಿತ್ಯನಾಥರನ್ನು ಹೊಗಳಿ, KCR ಕುಟುಂಬವಾದಕ್ಕೆ ಛೀಮಾರಿ ಹಾಕಿದ ಪ್ರಧಾನಿ ಮೋದಿ! ಇನ್ನೂ ಏನು ಹೇಳಿದರು?
Image
ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ
Image
ರಾಷ್ಟ್ರ ರಾಜಕಾರಣದತ್ತ ತೆಲಂಗಾಣ ಸಿಎಂ ಕೆಸಿಆರ್ ಕಣ್ಣು: ಅರವಿಂದ ಕೇಜ್ರಿವಾಜ್ ಜೊತೆಗೆ ಇಂದು ಪಂಜಾಬ್ ಯಾತ್ರೆ

“ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಪರ್ಯಾಯ ರಂಗಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಹಲವಾರು ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರು ದೇಶವನ್ನು ಉಳಿಸಲು ಮತ್ತು ರಾಷ್ಟ್ರ ಮತ್ತು ಬಡ ಜನರ ಹಿತಾಸಕ್ತಿಯಲ್ಲಿ ಬದಲಾವಣೆಯನ್ನು ತರಲು ಬಯಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಳೆದ ವಾರ ದೆಹಲಿಗೆ ಭೇಟಿ ನೀಡಿದ ಕೆಸಿಆರ್, ಅಖಿಲೇಶ್ ಯಾದವ್ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು. 2024 ರ ಚುನಾವಣೆಗೆ ಮುನ್ನ ಅವರು ಬಿಜೆಪಿಯೇತರ, ಕಾಂಗ್ರೆಸ್ಸೇತರ ರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ.

“ವಂಶಾಡಳಿತ ರಾಜಕೀಯ ನಡೆಸುವ ಪಕ್ಷವು ಕೇವಲ ರಾಜಕೀಯ ಸಮಸ್ಯೆಯಲ್ಲ, ಆದರೆ ನಮ್ಮ ದೇಶದ ಪ್ರಜಾಪ್ರಭುತ್ವ ಮತ್ತು ಯುವಜನತೆಯ ದೊಡ್ಡ ಶತ್ರು. ಒಂದು ಕುಟುಂಬಕ್ಕೆ ಸಮರ್ಪಿತವಾಗಿರುವ ರಾಜಕೀಯ ಪಕ್ಷಗಳು ಭ್ರಷ್ಟಾಚಾರದ ಮುಖ ಹೇಗೆ ಆಗುತ್ತವೆ ಎಂಬುದನ್ನು ನಮ್ಮ ದೇಶ ನೋಡಿದೆ” ಎಂದು ಹೈದರಾಬಾದಿನಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಹೇಳಿದ್ದಾರೆ. ನಾಲ್ಕು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಕೆಸಿಆರ್ ಅವರು ದಕ್ಷಿಣ ರಾಜ್ಯದಲ್ಲಿ ಪ್ರಧಾನಿಯನ್ನು ಸ್ವಾಗತಿಸುವುದನ್ನು ತಪ್ಪಿಸಿಕೊಂಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:46 pm, Thu, 26 May 22

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ