AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಕುಟುಂಬಗಳು ರಾಜಕೀಯ ಲಾಭಕ್ಕಾಗಿ ಯುವಕರ ಕೈಗೆ ಕಲ್ಲು ಕೊಟ್ಟು ಭವಿಷ್ಯ ಹಾಳು ಮಾಡುತ್ತಿವೆ: ಮೋದಿ

ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳುವುದು ಅವರ ರಾಜಕೀಯ ಅಜೆಂಡಾ. ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಕೇವಲ ಭಯ ಮತ್ತು ಅರಾಜಕತೆಯನ್ನು ನೀಡಿದ್ದಾರೆ. ಆದರೆ ಈಗ ಜಮ್ಮು ಮತ್ತು ಕಾಶ್ಮೀರವು ಇನ್ನು ಮುಂದೆ ಈ ಮೂರು ಕುಟುಂಬಗಳ ಹಿಡಿತದಲ್ಲಿರುವುದಿಲ್ಲ. ಇಲ್ಲಿಯ ನಮ್ಮ ಯುವಕರು ಅವರಿಗೆ ಸವಾಲು ಹಾಕುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಮೂರು ಕುಟುಂಬಗಳು ರಾಜಕೀಯ ಲಾಭಕ್ಕಾಗಿ ಯುವಕರ ಕೈಗೆ ಕಲ್ಲು ಕೊಟ್ಟು ಭವಿಷ್ಯ ಹಾಳು ಮಾಡುತ್ತಿವೆ: ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 19, 2024 | 3:10 PM

Share

ಶ್ರೀನಗರ ಸೆಪ್ಟೆಂಬರ್ 19: ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ರಾಜಕೀಯ ಲಾಭಕ್ಕಾಗಿ ಜಮ್ಮು ಮತ್ತು ಕಾಶ್ಮೀರದ (Jammu And  kashmir) ಯುವಕರ ಕೈಗೆ ಕಲ್ಲು ಕೊಟ್ಟು ಅವರ ಭವಿಷ್ಯವನ್ನು ಹಾಳುಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದ್ದಾರೆ. ಶ್ರೀನಗರದಲ್ಲಿ  ಗುರುವಾರ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಜಮ್ಮು ಮತ್ತು ಕಾಶ್ಮೀರದ ಈ ಮೂರು ಕುಟುಂಬಗಳು” ರಾಜ್ಯದ ಮತ್ತೊಂದು ಪೀಳಿಗೆಯನ್ನು ನಾಶಮಾಡಲು ನಾನು ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

“ನಮ್ಮ ಯುವಕರು ಶಾಲಾ-ಕಾಲೇಜುಗಳ ಹೊರಗಿನ ಅಧ್ಯಯನದಿಂದ ದೂರವಿದ್ದರು.ಈ ಮೂರು ಕುಟುಂಬಗಳು (ಕಾಂಗ್ರೆಸ್, ಎನ್‌ಸಿ ಮತ್ತು ಪಿಡಿಪಿ) ಕೈಗೆ ಕಲ್ಲು ಕೊಟ್ಟು ಸಂತೋಷವಾಗಿದ್ದವು, ಈ ಜನರು ತಮ್ಮ ಲಾಭಕ್ಕಾಗಿ ನಮ್ಮ ಮಕ್ಕಳ ಭವಿಷ್ಯವನ್ನು ಹಾಳುಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಪಿತೂರಿ ನಡೆಸುತ್ತಿರುವ ಪ್ರತಿಯೊಂದು ಶಕ್ತಿಯನ್ನೂ ಸೋಲಿಸಬೇಕು. ಇಲ್ಲಿನ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಮೋದಿಯವರ ಉದ್ದೇಶ, ಮೋದಿಯವರ ಗ್ಯಾರಂಟಿ ಎಂದಿದ್ದಾರೆ ಪ್ರಧಾನಿ.

ಕಾಂಗ್ರೆಸ್, ಎನ್‌ಸಿ ಮತ್ತು ಪಿಡಿಪಿ ಎಂಬ ಮೂರು ಪಕ್ಷಗಳು ಕುಟುಂಬರಾಜಕಾರಣ ಮಾಡುತ್ತವೆ ಎಂದು ಬಿಜೆಪಿ ಹೇಳಿಕೊಂಡಿದೆ. “ಈ 3 ಕುಟುಂಬಗಳ ಕೈಯಲ್ಲಿ ನಮ್ಮ ಮುಂದಿನ ಪೀಳಿಗೆಯನ್ನು ನಾಶಮಾಡಲು ನಾನು ಬಿಡುವುದಿಲ್ಲ. ಅದಕ್ಕಾಗಿಯೇ ನಾನು ಇಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಇಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಶಾಲಾ-ಕಾಲೇಜುಗಳು ಸುಗಮವಾಗಿ ನಡೆಯುತ್ತಿವೆ. ಇಂದು, ಶಾಲೆಗಳಲ್ಲಿ ಗಲಭೆ ಬಗ್ಗೆ ಯಾವುದೇ ವರದಿಗಳಿಲ್ಲ. ಬದಲಾಗಿ, ಹೊಸ ಶಾಲೆಗಳು, ಹೊಸ ಕಾಲೇಜುಗಳು, AIIMS, ವೈದ್ಯಕೀಯ ಕಾಲೇಜುಗಳು ಮತ್ತು IIT ಗಳನ್ನು ನಿರ್ಮಿಸಲಾಗುತ್ತಿದೆ ಎಂಬ ವರದಿಗಳಿವೆ.  ಯಾವುದೇ ವಿಧಾನದಿಂದ ಅಧಿಕಾರ ಹಿಡಿಯುವುದು ತಮ್ಮ ಜನ್ಮಸಿದ್ಧ ಹಕ್ಕು ಎಂದು ಮೂರು ಕುಟುಂಬಗಳು ಭಾವಿಸಿವೆ. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯ ಮತ್ತು ಅರಾಜಕತೆಯನ್ನು ಹರಡುತ್ತಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳುವುದು ಅವರ ರಾಜಕೀಯ ಅಜೆಂಡಾ. ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಕೇವಲ ಭಯ ಮತ್ತು ಅರಾಜಕತೆಯನ್ನು ನೀಡಿದ್ದಾರೆ. ಆದರೆ ಈಗ ಜಮ್ಮು ಮತ್ತು ಕಾಶ್ಮೀರವು ಇನ್ನು ಮುಂದೆ ಈ ಮೂರು ಕುಟುಂಬಗಳ ಹಿಡಿತದಲ್ಲಿರುವುದಿಲ್ಲ. ಇಲ್ಲಿಯ ನಮ್ಮ ಯುವಕರು ಅವರಿಗೆ ಸವಾಲು ಹಾಕುತ್ತಿದ್ದಾರೆ.  ಪ್ರಗತಿಗೆ ಅವಕಾಶ ನೀಡದ ಯುವಕರು ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ . ಈ ಮೂರು ಕುಟುಂಬಗಳ ಆಳ್ವಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಯುವಕರು ಎದುರಿಸುತ್ತಿರುವ ಸಂಕಟಗಳು ಹೊರಬರುತ್ತಲೇ ಇರುತ್ತಿರಲಿಲ್ಲ.

ಇದನ್ನೂ ಓದಿ: ಕಾಂಗ್ರೆಸ್​ ಹಾಗೂ ಪಾಕಿಸ್ತಾನ ಎರಡರ ಅಜೆಂಡವೂ ಒಂದೇ: ಅಮಿತ್ ಶಾ

ಅದೇ ವೇಳೆ ಕೇಂದ್ರಾಡಳಿತ ಪ್ರದೇಶದ ಯುವಕರು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಜಮ್ಮು ಮತ್ತು ಕಾಶ್ಮೀರದ ನಮ್ಮ ಯುವಕರು ವಿಫಲವಾದ ಕಾರಣ ಇದು ಸಂಭವಿಸಲಿಲ್ಲ, ಆದರೆ ಕಾಂಗ್ರೆಸ್, ಎನ್‌ಸಿ ಮತ್ತು ಪಿಡಿಪಿಯ ಮೂರು ಕುಟುಂಬಗಳು ವಿಫಲವಾದ ಕಾರಣ ಇದು ಸಂಭವಿಸಿದೆ” ಎಂದಿದ್ದಾರೆ ಮೋದಿ.

10 ವರ್ಷಗಳ ಭಾರೀ ಅಂತರದ ನಂತರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ನಡೆದಿದ್ದು, ಇನ್ನೆರಡು ಹಂತ ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್