ಕೊವಿಡ್ ಸಾಂಕ್ರಾಮಿಕ ಉತ್ತುಂಗದಲ್ಲಿದ್ದಾಗ ಟ್ವಿಟರ್​​ನಲ್ಲಿ ಬ್ಯುಸಿಯಾಗಿದ್ದ ವಿಪಕ್ಷ ನಾಯಕರು ಮನೆಯಲ್ಲೇ ಇರಲಿ: ಯೋಗಿ ಆದಿತ್ಯನಾಥ

Yogi Adityanath ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ ಅವರು  "ಕೊವಿಡ್ ಸಮಯದಲ್ಲಿ ಮನೆಯಲ್ಲಿ ಕುಳಿತಿರುವ ನಾಯಕರನ್ನು ಚುನಾವಣೆಯಲ್ಲಿ ಮನೆಯಲ್ಲೇ  ಉಳಿಯುವಂತೆ ನೋಡಿಕೊಳ್ಳಬೇಕು" ಎಂದು ಹೇಳಿದ್ದಾರೆ.

ಕೊವಿಡ್ ಸಾಂಕ್ರಾಮಿಕ ಉತ್ತುಂಗದಲ್ಲಿದ್ದಾಗ ಟ್ವಿಟರ್​​ನಲ್ಲಿ ಬ್ಯುಸಿಯಾಗಿದ್ದ ವಿಪಕ್ಷ ನಾಯಕರು ಮನೆಯಲ್ಲೇ ಇರಲಿ: ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 07, 2021 | 3:50 PM

ದೆಹಲಿ: ಉತ್ತರ ಪ್ರದೇಶದ ಬಿಜೆಪಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಅವರು ಕೊವಿಡ್ -19 ಸಾಂಕ್ರಾಮಿಕದ ಉತ್ತುಂಗದಲ್ಲಿ ಮನೆಯಿಂದ ಹೊರ ಬರಲು ಒಪ್ಪದ ವಿಪಕ್ಷ  ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ (Uttar Pradesh) ಇಟಾವಾದಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ ಅವರು  “ಕೊವಿಡ್ ಸಮಯದಲ್ಲಿ ಮನೆಯಲ್ಲಿ ಕುಳಿತಿರುವ ನಾಯಕರನ್ನು ಚುನಾವಣೆಯಲ್ಲಿ ಮನೆಯಲ್ಲೇ  ಉಳಿಯುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ. ಕೊವಿಡ್ ಉತ್ತುಂಗದಲ್ಲಿದ್ದಾಗ ನಾನು ನಿಮ್ಮ ನಡುವೆ ಇದ್ದೆ. ನಿಮಗೆ ನೆನಪಿದ್ದರೆ, ಸಾಂಕ್ರಾಮಿಕ ರೋಗದ ನಡುವೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಮುಂಚೂಣಿಯಲ್ಲಿರುವ ಆರೋಗ್ಯ ವೃತ್ತಿಪರರನ್ನು ಭೇಟಿ ಮಾಡಲು ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ” “ಆದರೆ ಇತರ ಪಕ್ಷಗಳ ನಾಯಕರು ಹೋಮ್ ಐಸೋಲೇಷನ್ ನಲ್ಲಿದ್ದರು . ಹಾಗಾಗಿ ಅವರಿಗೆ ಚುನಾವಣೆಯ ಸಮಯದಲ್ಲಿಯೂ ಮನೆಯಲ್ಲಿಯೇ ಇರಲು ಹಕ್ಕಿದೆ. ಅವರು ಮನೆಯಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳಿ”.ಅವರು ಟ್ವಿಟರ್‌ನಲ್ಲಿ ಬ್ಯುಸಿಯಾಗಿದ್ದರು. ಆದ್ದರಿಂದ ಅವರಲ್ಲಿ, ಬಾಬುವಾ  ಟ್ವಿಟರ್ ನಿಮಗೆ ಮತ ಹಾಕುತ್ತದೆ ಎಂದು ಹೇಳಿ ಎಂದಿದ್ದಾರೆ ಯೋಗಿ ಆದಿತ್ಯನಾಥ.

ಆದಾಗ್ಯೂ, ಉತ್ತರ ಪ್ರದೇಶ ಸರ್ಕಾರವು ಕೊವಿಡ್ ಎರಡನೇ ಅಲೆ ನಿಭಾಯಿಸಿದ್ದು ಟೀಕೆಗೊಳಗಾಗಿತ್ತು. ಕೊರೊನಾವೈರಸ್ ಉತ್ತುಂಗದಲ್ಲಿದ್ದಾಗ ನದಿಗಳಲ್ಲಿ ತೇಲುತ್ತಿರುವ ಮೃತ ದೇಹಗಳ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯ ಪ್ರಕರಣಗಳು ವಿಷಯಗಳನ್ನು ಇನ್ನಷ್ಟು ಹದಗೆಡಿಸಿತ್ತು.

ಭಾನುವಾರ ನಡೆಯುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉತ್ತರಪ್ರದೇಶ ಚುನಾವಣೆ ಸೇರಿದಂತೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಸರಮಾಲೆಯನ್ನು ಗೆಲ್ಲುವ ಕಾರ್ಯತಂತ್ರಗಳು ಪ್ರಮುಖ ಆದ್ಯತೆಯ ಕಾರ್ಯಸೂಚಿಯಾಗಿದೆ. ಈ ವಾರದ ಆರಂಭದಲ್ಲಿ ಹಲವಾರು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳ ಫಲಿತಾಂಶಗಳು ಕಾಂಗ್ರೆಸ್ ಕಳೆದುಕೊಂಡಿರುವ ನೆಲವನ್ನು ಮರಳಿ ಪಡೆದಿದೆ ಎಂದು ತೋರಿಸಿದೆ, ಆದರೆ ಪ್ರತಿಪಕ್ಷಗಳ ಮುನ್ನಡೆಯು ಬಿಜೆಪಿಯನ್ನು ಚಿಂತೆಗೀಡುಮಾಡುವಷ್ಟು ಗಮನಾರ್ಹವಾಗಿರಲಿಲ್ಲ.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ಎಂಬ ಐದು ರಾಜ್ಯಗಳಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ 2022 ರ ಕೊನೆಯಲ್ಲಿ ಚುನಾವಣೆಗಳು ನಡೆಯಲಿವೆ. ಪಂಜಾಬ್ ಹೊರತುಪಡಿಸಿ ಈ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಇದನ್ನೂ ಓದಿ: Chennai Rain: ಕುಂಭದ್ರೋಣ ಮಳೆಗೆ ತತ್ತರಿಸಿದ ಚೆನ್ನೈ; ಇಡೀ ನಗರ ಜಲಾವೃತ, ಐಎಂಡಿಯಿಂದ ರೆಡ್​ ಅಲರ್ಟ್​ ಘೋಷಣೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ