AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಐತಿಹಾಸಿಕ ಕ್ಷಣ, ಸಂಸತ್ತಿನಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರದ ಕುರಿತು ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

ಸಂಸತ್ತಿನ ಎರಡೂ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಅಂಗೀಕಾರವು ಸಾಮಾಜಿಕ-ಆರ್ಥಿಕ ನ್ಯಾಯ, ಪಾರದರ್ಶಕತೆ ಮತ್ತು ಸಮಗ್ರ ಬೆಳವಣಿಗೆಗಾಗಿ ನಮ್ಮ ಸಾಮೂಹಿಕ ಪ್ರಯತ್ನಗಳಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ದೀರ್ಘಕಾಲದವರೆಗೆ ಅಂಚಿನಲ್ಲಿರುವ ಮತ್ತು ಧ್ವನಿ ಮತ್ತು ಅವಕಾಶ ಎರಡರಿಂದಲೂ ವಂಚಿತರಾದವರಿಗೆ ಇದು ವಿಶೇಷವಾಗಿ ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದು ಐತಿಹಾಸಿಕ ಕ್ಷಣ, ಸಂಸತ್ತಿನಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರದ ಕುರಿತು ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ
ನರೇಂದ್ರ ಮೋದಿ Image Credit source: Zee Business
ನಯನಾ ರಾಜೀವ್
|

Updated on:Apr 04, 2025 | 9:26 AM

Share

ನವದೆಹಲಿ, ಏಪ್ರಿಲ್ 04: ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ. ಲೋಕಸಭೆಯ ನಂತರ, ವಕ್ಫ್ ತಿದ್ದುಪಡಿ ಮಸೂದೆ(Waqf Amendment Bill) 2025 ಅನ್ನು ರಾಜ್ಯಸಭೆಯಲ್ಲಿಯೂ ಅಂಗೀಕರಿಸಲಾಯಿತು. ಈಗ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮೊದಲ ಪ್ರತಿಕ್ರಿಯೆ ಬಂದಿದೆ. ಪ್ರಧಾನಿ ಮೋದಿ ಇದನ್ನು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ.

ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಪ್ರಧಾನಿ, ಸಂಸತ್ತಿನ ಎರಡೂ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಅಂಗೀಕಾರವು ಸಾಮಾಜಿಕ-ಆರ್ಥಿಕ ನ್ಯಾಯ, ಪಾರದರ್ಶಕತೆ ಮತ್ತು ಸಮಗ್ರ ಬೆಳವಣಿಗೆಗಾಗಿ ನಮ್ಮ ಸಾಮೂಹಿಕ ಪ್ರಯತ್ನಗಳಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ದೀರ್ಘಕಾಲದವರೆಗೆ ಅಂಚಿನಲ್ಲಿರುವ ಮತ್ತು ಧ್ವನಿ ಮತ್ತು ಅವಕಾಶ ಎರಡರಿಂದಲೂ ವಂಚಿತರಾದವರಿಗೆ ಇದು ವಿಶೇಷವಾಗಿ ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ
Image
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
Image
ವಕ್ಫ್ ವಿಷಯದಲ್ಲಿ ವಿಪಕ್ಷಗಳಿಂದ ದೇಶ ಇಬ್ಭಾಗಿಸುವ ಪ್ರಯತ್ನ; ಅಮಿತ್ ಶಾ ಆರೋಪ
Image
ಸಂಸತ್ತಿನ ಕಟ್ಟಡವನ್ನೂ ವಕ್ಫ್ ಆಸ್ತಿ ಎನ್ನುತ್ತಿದ್ದರು;ಕಿರಣ್ ರಿಜಿಜು ಟೀಕೆ
Image
ವಕ್ಫ್​ ಬಿಲ್​: ಲೋಕಸಭೆ, ರಾಜ್ಯಸಭೆಯ ಸಂಖ್ಯಾಬಲದ ಆಟದಲ್ಲಿ ಯಾರು ಮುಂದು

ಸಂಸದೀಯ ಮತ್ತು ಸಮಿತಿ ಚರ್ಚೆಗಳಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಈ ಕಾನೂನುಗಳನ್ನು ಬಲಪಡಿಸಲು ಕೊಡುಗೆ ನೀಡಿದ ಎಲ್ಲಾ ಸಂಸದರಿಗೆ ಧನ್ಯವಾದಗಳು. ಸಂಸದೀಯ ಸಮಿತಿಗೆ ತಮ್ಮ ಅಮೂಲ್ಯ ಸಲಹೆಗಳನ್ನು ಕಳುಹಿಸಿದ ಅಸಂಖ್ಯಾತ ಜನರಿಗೆ ವಿಶೇಷ ಧನ್ಯವಾದಗಳು ಎಂದರು.

ಎರಡೂ ಸದನಗಳಲ್ಲಿ ಎಷ್ಟು ಮತಗಳು ಚಲಾವಣೆಯಾದವು?

ರಾಜ್ಯಸಭೆಯಲ್ಲಿ ಮಸೂದೆಯ ಮೇಲಿನ ಚರ್ಚೆ ಪೂರ್ಣಗೊಂಡ ನಂತರ, ತಡರಾತ್ರಿ 2 ಗಂಟೆಯ ನಂತರ ಮತದಾನ ನಡೆಸಲಾಯಿತು. ಈ ಸಮಯದಲ್ಲಿ, ಆಡಳಿತ ಪಕ್ಷವು ಮಸೂದೆಯನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಯಿತು. ವಕ್ಫ್ ತಿದ್ದುಪಡಿ ಮಸೂದೆಯ ಪರವಾಗಿ 128 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು.

ಪ್ರಧಾನಿ ಮೋದಿ ಪೋಸ್ಟ್​

ಈ ರೀತಿಯಾಗಿ, 12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ನಂತರ, ರಾಜ್ಯಸಭೆಯು ಬೆಳಗಿನ ಜಾವ 2.32 ಕ್ಕೆ ವಕ್ಫ್ ಮಸೂದೆಯನ್ನು ಅಂಗೀಕರಿಸಿತು. ರಾಜ್ಯಸಭೆಯಲ್ಲಿ ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 232 ಮತಗಳು ಚಲಾವಣೆಯಾದವು.

ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದವು, ಅವರು ಮಸೂದೆಯನ್ನು “ಮುಸ್ಲಿಂ ವಿರೋಧಿ” ಮತ್ತು “ಅಸಂವಿಧಾನಿಕ” ಎಂದು ಕರೆದರು, ಸರ್ಕಾರವು ಐತಿಹಾಸಿಕ ಸುಧಾರಣೆ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರತಿಕ್ರಿಯಿಸಿತು.

ವಕ್ಫ್​ ಕಾಯ್ದೆ ಎಂದರೇನು? ವಕ್ಫ್ ಎಂದು ಗುರುತಿಸಲಾಗಿರುವ, ದಾನ ಮಾಡಲಾದ ‘ಔಕಾಫ್’ ಆಸ್ತಿಗಳನ್ನು ನಿಯಂತ್ರಿಸಲು ಜಾರಿಗೊಳಿಸಲಾಗಿದ್ದು ಈ ವಕ್ಫ್ ಕಾಯ್ದೆ, 1995. ಈ ಕಾಯ್ದೆಯು “ವಾಕಿಫ್” ಅನ್ನು ಸಹ ಉಲ್ಲೇಖಿಸಿದೆ. ಅಂದರೆ ಮುಸ್ಲಿಂ ಕಾನೂನು ಪುಣ್ಯದ, ಧಾರ್ಮಿಕ ಅಥವಾ ದತ್ತಿ ಎಂದು ಗುರುತಿಸಲ್ಪಟ್ಟ ಯಾವುದೇ ಉದ್ದೇಶಕ್ಕಾಗಿ ಆಸ್ತಿಯನ್ನು ಅರ್ಪಿಸುವ ವ್ಯಕ್ತಿ ಎಂದರ್ಥ. ವಕ್ಫ್ ಕಾಯಿದೆಯನ್ನು 1954ರಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಯಿತು. ವಕ್ಫ್‌ನ ನಿರ್ವಹಣೆ ಉದ್ದೇಶಕ್ಕಾಗಿ ವಕ್ಫ್ ಕಾಯಿದೆ, 1954ಯನ್ನು ರಚಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:09 am, Fri, 4 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ