Sameer Wankhede: ದೇಶಭಕ್ತರಾಗಿದ್ದಕ್ಕಾಗಿ ಈ ಶಿಕ್ಷೆ, ಆರ್ಯನ್ ಖಾನ್​​​ನ್ನು ಬಂಧಿಸಿದ ಸಮೀರ್ ವಾಂಖೆಡೆ ಮೇಲೆ ಸಿಬಿಐ ದಾಳಿ

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಹೊತ್ತಿರುವ ಮಾಜಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿ ಸಮೀರ್ ವಾಂಖೆಡೆ (Sameer Wankhede) ಮೇಲೆ ದೂರು ದಾಖಲಿಸಲಾಗಿದೆ.

Sameer Wankhede: ದೇಶಭಕ್ತರಾಗಿದ್ದಕ್ಕಾಗಿ ಈ ಶಿಕ್ಷೆ, ಆರ್ಯನ್ ಖಾನ್​​​ನ್ನು ಬಂಧಿಸಿದ ಸಮೀರ್ ವಾಂಖೆಡೆ ಮೇಲೆ ಸಿಬಿಐ ದಾಳಿ
ಸಮೀರ್ ವಾಂಖೆಡೆ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 14, 2023 | 11:13 AM

ಮುಂಬೈ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಹೊತ್ತಿರುವ ಮಾಜಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿ ಸಮೀರ್ ವಾಂಖೆಡೆ (Sameer Wankhede) ಮೇಲೆ ದೂರು ದಾಖಲಿಸಲಾಗಿದೆ. ವಾಂಖೆಡೆ ಅವರ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ದಾಳಿ ನಡೆಸಿದ್ದಕ್ಕೆ ಸಮೀರ್ ವಾಂಖೆಡೆ ಪ್ರತಿಕ್ರಿಯೆ ನೀಡಿದ್ದಾರೆ.

ವಾಂಖೆಡೆ ಅವರ ಪತ್ನಿ ಮತ್ತು ಮಕ್ಕಳು ಅವರ ಮನೆಯಲ್ಲಿ ಇರುವಾಗ 18 ಸಿಬಿಐ ಅಧಿಕಾರಿಗಳು ಶುಕ್ರವಾರ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ನಾನು ದೇಶಪ್ರೇಮಿ ಎಂಬುದಕ್ಕೆ ಪ್ರಶಸ್ತಿ ಪಡೆಯುತ್ತಿದ್ದೇನೆ, ನಿನ್ನೆ 18 ಸಿಬಿಐ ಅಧಿಕಾರಿಗಳು ನನ್ನ ನಿವಾಸದ ಮೇಲೆ ದಾಳಿ ನಡೆಸಿ 12 ಗಂಟೆಗಳಿಗೂ ಹೆಚ್ಚು ಕಾಲ ನನ್ನ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿದ್ದಾಗ ಶೋಧ ನಡೆಸಿದರು, ಅವರಿಗೆ 23,000 ಮತ್ತು ನಾಲ್ಕು ಆಸ್ತಿ ಪತ್ರಗಳು ಸಿಕ್ಕಿವೆ. ಈ ಆಸ್ತಿಯನ್ನು ಮೊದಲು ನಾನು ಸಂಪಾದಿಸಿದ ನಂತರವೇ ನಾನು ಈ ಸೇವೆಗೆ ಸೇರಿಕೊಂಡೆ ಎಂದು ವಾಂಖೆಡೆ ಹೇಳಿದರು.

ಸಿಬಿಐ ಅಧಿಕಾರಿಗಳು ತಮ್ಮ ಪತ್ನಿ ಕ್ರಾಂತಿ ರೆಡ್ಕರ್ ಅವರ ಫೋನ್ ಅನ್ನು ಸಹ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಸಮೀರ್ ವಾಂಖೆಡೆ ಹೇಳಿದ್ದಾರೆ. ಇದಲ್ಲದೆ ಅವರ ಸಹೋದರಿ ಯಾಸ್ಮಿನ್ ವಾಂಖೆಡೆ ಅವರ ಮನೆಯಲ್ಲಿ 28,000 ಮತ್ತು ಅವರ ತಂದೆ ಜ್ಞಾನೇಶ್ವರ್ ವಾಂಖೆಡೆ ಅವರ ಮನೆಯಿಂದ 28,000 ಸಿಬಿಐ ವಶಪಡಿಸಿಕೊಂಡಿದೆ. ವಾಂಖೆಡೆ ಅವರ ಮಾವ ಸಮೀರ್‌ನಿಂದ 1800 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:Sameer Wankhede: ಶಾರುಖ್ ಪುತ್ರ ಆರ್ಯನ್​​​ನ್ನು ಬಂಧಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಭ್ರಷ್ಟಾಚಾರ ಪ್ರಕರಣ ದಾಖಲು

ಡ್ರಗ್ಸ್ ಆನ್ ಕ್ರೂಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರ್ಯನ್ ಖಾನ್ ಜತೆಗೆ ಇತರ ಮೂವರ ಬಂಧಿಸಿದ್ದರು. ಈ ಪ್ರಕರಣದ ನೇತೃತ್ವ ವಹಿಸಿದ ಸಮೀರ್ ವಾಂಖೆಡೆ ಅವರ ಮೇಲೆ ಭ್ರಷ್ಟಾಚಾರ ಆರೋಪ ಮಾಡಲಾಗಿದೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ದೇಶಾದ್ಯಂತ 29 ಸ್ಥಳಗಳಲ್ಲಿ ಶೋಧ ನಡೆಸಿತು.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಎನ್‌ಸಿಬಿ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಇತರ ಮೂವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಮುಂಬೈ, ದೆಹಲಿ, ರಾಂಚಿ (ಜಾರ್ಖಂಡ್) ಮತ್ತು ಕಾನ್ಪುರ (ಉತ್ತರ ಪ್ರದೇಶ) 29 ಸ್ಥಳಗಳ ಮೇಲೆ ಸಂಸ್ಥೆ ದಾಳಿ ನಡೆಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್