ಗಾಂಧೀಜಿಯ ಹಂತಕನನ್ನು ಆರಾಧಿಸುವವರು ಕಾಂಗ್ರೆಸ್​​ನ್ನು ವಿಸರ್ಜಿಸಬೇಕೆಂದು ಹೇಳುತ್ತಿದ್ದಾರೆ; ಮೋದಿ ಭಾಷಣ ವಿರುದ್ಧ ಖರ್ಗೆ ವಾಗ್ದಾಳಿ

ಪ್ರಧಾನಿ ಭಾಷಣಕ್ಕೆ ಪ್ರತಿಕ್ರಿಯಿಸಿದ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯಕ್ಕೆ ಉತ್ತರಿಸುವ ಬದಲು ಮೋದಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಗಾಂಧೀಜಿಯ ಹಂತಕನನ್ನು ಆರಾಧಿಸುವವರು ಕಾಂಗ್ರೆಸ್​​ನ್ನು ವಿಸರ್ಜಿಸಬೇಕೆಂದು ಹೇಳುತ್ತಿದ್ದಾರೆ; ಮೋದಿ ಭಾಷಣ ವಿರುದ್ಧ ಖರ್ಗೆ ವಾಗ್ದಾಳಿ
ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 08, 2022 | 7:38 PM

ದೆಹಲಿ: ರಾಷ್ಟ್ರಪತಿ ಭಾಷಣಕ್ಕೆ ವಂದನಾರ್ಪಣೆ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್ ವಿರುದ್ಧ ಸಂಪೂರ್ಣ ವಾಗ್ದಾಳಿ ನಡೆಸಿದ್ದಾರೆ. ಕೊವಿಡ್ -19 ನಿಂದಾಗಿ 2020 ರ ಮಾರ್ಚ್‌ನಲ್ಲಿ ಘೋಷಿಸಲಾದ ಹಠಾತ್ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ (Lockdown) ಮುಂಬೈನಲ್ಲಿ ಸಿಕ್ಕಿಬಿದ್ದವರಿಗೆ ಉಚಿತ ರೈಲು ಟಿಕೆಟ್‌ಗಳನ್ನು ಹಸ್ತಾಂತರಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು. ವಲಸಿಗರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡುವ ಕ್ರಮವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಕೊವಿಡ್ -19 ಹರಡಲು ಸಹಾಯ ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಪ್ರಧಾನಿ ಭಾಷಣಕ್ಕೆ ಪ್ರತಿಕ್ರಿಯಿಸಿದ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯಕ್ಕೆ ಉತ್ತರಿಸುವ ಬದಲು ಮೋದಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಸಂಸದರು ಹೊರನಡೆದರು ಎಂದಿದ್ದಾರೆ. ಮೋದಿ ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿದ್ದಾರೆ, ಸದನದಲ್ಲಿ ಎಲ್ಲಾ ಪಕ್ಷಗಳ ಸದಸ್ಯರಿದ್ದಾರೆ. ಅವರು ಎಲ್ಲಾ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮಾತನಾಡುವ ಬದಲು ಮೋದಿ ಕಾಂಗ್ರೆಸ್ ಬಗ್ಗೆ ಟೀಕೆಗಳನ್ನು ಮಾಡಿದರು.  ಅವರು ಗಾಂಧೀಜಿಯನ್ನು ನೆನಪಿಸಿಕೊಂಡರು, ಗಾಂಧೀಜಿಯವರ ಹಂತಕನನ್ನು ಆರಾಧಿಸುವವರು ಕಾಂಗ್ರೆಸ್ ಅನ್ನು ವಿಸರ್ಜಿಸಬೇಕೆಂದು ನಮಗೆ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತರರನ್ನು ನಿಂದಿಸುವ ಮೂಲಕ ಪ್ರಧಾನಿ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದು ಸರಿಯಲ್ಲ ಎಂದು ಖರ್ಗೆ ಹೇಳಿದ್ದಾರೆ. “ಜನರು ತೊಂದರೆಯಲ್ಲಿದ್ದರು. ಅವರಿಗೆ ವಸತಿ, ಆಹಾರ, ನೀರು ಅಥವಾ ಬಟ್ಟೆ ಇರಲಿಲ್ಲ. ಅವರು ಎಲ್ಲಿಗೆ ಹೋಗುತ್ತಿದ್ದರು? ಅವರಿಗೆ ಸಹಾಯ ಮಾಡಿದ್ದು ತಪ್ಪೇ? ಒಬ್ಬ ಪ್ರಧಾನಿಯಾಗಿ ಇತರರನ್ನು ನಿಂದಿಸುವ ಮೂಲಕ ನಿಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದು ಸರಿಯಲ್ಲ,” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸರ್ಕಾರವು ನಿಖರವಾದ ಕೊವಿಡ್-19 ಸಾವಿನ ಅಂಕಿಅಂಶಗಳನ್ನು ಹೊಂದಿಲ್ಲ ಎಂದು ಆರೋಪಿಸಿದ ಖರ್ಗೆ “ಪ್ರಧಾನಿ ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ಭಾಷಣ ಮಾಡುತ್ತಿದ್ದಾರೆ. ಅವರು ಮಾನವೀಯತೆಯ ಸಲುವಾಗಿ ಇದೆಲ್ಲವನ್ನೂ ಮೀರಬೇಕು ಎಂದು ಖರ್ಗೆ ಹೇಳಿದ್ದಾರೆ.

ಮಂಗಳವಾರ ಸದನದಲ್ಲಿ ಮಾತನಾಡಿದ ನರೇಂದ್ರ ಮೋದಿ ಬ್ರಿಟಿಷರ ಒಡೆದು ಆಳುವ  ನೀತಿಯನ್ನು ಅನುಸರಿಸುವ ಮೂಲಕ ಕಾಂಗ್ರೆಸ್ ಪಕ್ಷವು ಭಾರತದಲ್ಲಿ ಪ್ರತ್ಯೇಕತಾವಾದವನ್ನು ಬಲಪಡಿಸುತ್ತಿದೆ, ಅದು “ಟುಕ್ಡೇ ಟುಕ್ಡೇ ಗ್ಯಾಂಗ್‌ನ ನಾಯಕ” ಆಗುತ್ತಿದೆ ಎಂದು ಆರೋಪಿಸಿದ್ದರು. ಈಗ ‘ರಾಷ್ಟ್ರ’ವನ್ನು ಆಕ್ಷೇಪಿಸುತ್ತಿದ್ದಾರೆ. ‘ರಾಷ್ಟ್ರ’ದ ಕಲ್ಪನೆಯು ಅಸಾಂವಿಧಾನಿಕವಾಗಿದ್ದರೆ, ನಿಮ್ಮ ಪಕ್ಷವನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂದು ಏಕೆ ಕರೆಯುತ್ತಾರೆ” ಎಂದು ಪ್ರಧಾನಿ ಮೋದಿ ಹೇಳಿದರು.

ಕಾಂಗ್ರೆಸ್ ಇಲ್ಲದಿದ್ದರೆ ರಾಜ್ಯಸಭೆಯು ರಾಜ್ಯಗಳ ಮಂಡಳಿಯಾಗಿ ಉಳಿಯುತ್ತಿತ್ತು

ಕಾಂಗ್ರೆಸ್ ಇಲ್ಲದಿದ್ದರೆ, ರಾಜ್ಯಸಭೆಯು 1919 ರ ಭಾರತ ಸರ್ಕಾರದ ಕಾಯಿದೆಯಡಿಯಲ್ಲಿ ರಾಜ್ಯಗಳ ಮಂಡಳಿಯಾಗಿ ಉಳಿಯುತ್ತಿತ್ತು, ಅಲ್ಲಿ ಸಾಮಾನ್ಯ ನಾಗರಿಕರ ಬದಲಿಗೆ, ರಾಜಕುಮಾರರು ಮತ್ತು ಆಡಳಿತಗಾರರು ಕುಳಿತು ರಾಣಿ ಎಲಿಜಬೆತ್ II ರನ್ನು ಹಾಡಿ ಹೊಗಳುತ್ತಿದ್ದರು ಎಂದು ಪಿ ಚಿದಂಬರಂ ಹೇಳಿದ್ದಾರೆ. ಅದೇ ವೇೆಳೆಕೊವಿಡ್ ಸಾಂಕ್ರಾಮಿಕ ಸಮಯದಲ್ಲಿ ಗಂಗಾದಲ್ಲಿ ಪತ್ತೆಯಾದ ಮೃತದೇಹಗಳ ಬಗ್ಗೆ, ಆಮ್ಲಜನಕದ ಕೊರತೆಯ ಮಾಹಿತಿ ಇಲ್ಲ ಎಂದು ಹೇಳಿದ ಸರ್ಕಾರವನ್ನು ಟೀಕಿಸಿದ್ದು ಇದು ಎನ್​​ಡಿಎಅಲ್ಲ ದತ್ತಾಂಶ ಲಭ್ಯವಿಲ್ಲದ ಸರ್ಕಾರ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿPM Modi in Parliament: ಕಾಂಗ್ರೆಸ್ ಇಲ್ಲದಿದ್ದರೆ ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು ಸಂಭವಿಸುತ್ತಿರಲಿಲ್ಲ; ಸಂಸತ್​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Published On - 6:50 pm, Tue, 8 February 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್