Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ, ಇಬ್ಬರು ಹೆಂಡತಿಯರು ಇರುವವಗೆ 2 ಲಕ್ಷ ರೂ. ಆರ್ಥಿಕ ನೆರವು: ಕಾಂಗ್ರೆಸ್​ ನಾಯಕ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಪತ್ನಿಯನ್ನು ಹೊಂದಿರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್​ ನಾಯಕ ಕಾಂತಿಲಾಲ್ ಹೇಳಿದ್ದಾರೆ.

ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ, ಇಬ್ಬರು ಹೆಂಡತಿಯರು ಇರುವವಗೆ 2 ಲಕ್ಷ ರೂ. ಆರ್ಥಿಕ ನೆರವು: ಕಾಂಗ್ರೆಸ್​ ನಾಯಕ
ಕಾಂತಿಲಾಲ್
Follow us
ನಯನಾ ರಾಜೀವ್
|

Updated on:May 10, 2024 | 11:51 AM

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ (Congress) ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್​ ನಾಯಕ ಕಾಂತಿಲಾಲ್ ಭುರಿಯಾ ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದಾರೆ. ಪಕ್ಷವು ಅಧಿಕಾರಕ್ಕೆ ಬಂದರೆ ಪಕ್ಷದ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡಲಾಗುವುದು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ಮಹಿಳೆಯ ಖಾತೆಗೆ 1 ಲಕ್ಷ ರೂ. ಜಮಾ ಮಾಡಲಾಗುವುದು. ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದ್ದು, ಇಬ್ಬರು ಪತ್ನಿಯರಿರುವವರಿಗೆ 2 ಲಕ್ಷ ರೂಪಾಯಿ ನೀಡಲಾಗುವುದು ಎಂದರು. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಜಿತು ಪಟ್ವಾರಿ ಅವರ ಸಮ್ಮುಖದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್‌ನ ಪ್ರಣಾಳಿಕೆಯಂತೆ ಮಹಿಳೆಯರು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ವಿಭಾಗದಿಂದ ಹೊರಬರುವವರೆಗೆ ಮಹಾಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 8,500 ರೂ. ನೀಡಲಾಗುವುದು.

ಮತ್ತಷ್ಟು ಓದಿ: ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಇಲ್ಲವಾದರೆ ಅಣುಬಾಂಬ್​ ದಾಳಿ ನಡೆಸಬಹುದು: ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ

ಹಿಂದಿನ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್ (ಯುಪಿಎ) ಸರ್ಕಾರದಲ್ಲಿ ಭೂರಿಯಾ ಅವರು ಬುಡಕಟ್ಟು ವ್ಯವಹಾರಗಳ ಸಚಿವರಾಗಿದ್ದರು. ಅವರ ಹೇಳಿಕೆಗೆ ಆಡಳಿತಾರೂಢ ಬಿಜೆಪಿಯಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಾಯಕನ ವಿರುದ್ಧ ಚುನಾವಣಾ ಆಯೋಗದಿಂದ ಕ್ರಮ ಕೈಗೊಳ್ಳುವಂತೆ ಕೋರಿದೆ.

ಭುರಿಯಾ ಅವರು ಮಧ್ಯಪ್ರದೇಶದ ಅರಣ್ಯ ಸಚಿವ ನಗರ್ ಸಿಂಗ್ ಚೌಹಾಣ್ ಅವರ ಪತ್ನಿ ಅನಿತಾ ಚೌಹಾಣ್ ವಿರುದ್ಧ ರತ್ಲಾಮ್‌ನಲ್ಲಿ ಕಣಕ್ಕಿಳಿದಿದ್ದಾರೆ. ಮೇ 13 ರಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ರತ್ಲಾಮ್‌ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಫಲಿತಾಂಶಗಳು ಜೂನ್ 4 ರಂದು ಪ್ರಕಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:51 am, Fri, 10 May 24

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?