ಚಳಿಯನ್ನೂ ಲೆಕ್ಕಿಸದೆ ಲಡಾಖ್(Ladakh) ಜನತೆ ಬೀದಿಗಿಳಿದಿದ್ದಾರೆ, ಅಂಗಡಿ ಮುಂಗಟ್ಟುಗಳು ಮುಚ್ಚಿವೆ, ಜನರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಸಂವಿಧಾನದ 6ನೇ ಶೆಡ್ಯೂನ್ ಅಡಿಯಲ್ಲಿ ರಾಜ್ಯದ ಸ್ಥಾನಮಾನ ನೀಡುವುದು ಹಾಗೂ ಸಾಂವಿಧಾನಿಕ ರಕ್ಷಣೆಗಾಗಿ ಒತ್ತಾಯಿಸಿ ಸಾವಿರಾರು ಜನರು ರಸ್ತೆಗಿಳಿದಿದ್ದಾರೆ. ಈ ಪ್ರತಿಭಟನೆಯನ್ನು ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ ಜಂಟಿಯಾಗಿ ಆಯೋಜಿಸಿವೆ.
ಲಡಾಖ್‌ಗೆ ರಾಜ್ಯ ಸ್ಥಾನಮಾನ, ಸಂವಿಧಾನದ ಆರನೇ ಶೆಡ್ಯೂಲ್‌ನ ಅನುಷ್ಠಾನ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಸಂಸತ್ತು ಸ್ಥಾನಗಳನ್ನು ಒತ್ತಾಯಿಸುವ ಘೋಷಣೆಗಳನ್ನು ಕೂಗಿದ್ದಾರೆ. ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್‌ನ ಪ್ರತಿನಿಧಿಗಳೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಸುವುದಾಗಿ ಕೇಂದ್ರದ ಘೋಷಣೆಯ ಹೊರತಾಗಿಯೂ ರಾಜ್ಯದಲ್ಲಿ ಬಂದ್ ಆಚರಿಸಲಾಯಿತು.
ಲಡಾಖ್ ಜನರ ಬೇಡಿಕೆಗಳನ್ನು ಪರಿಶೀಲಿಸಲು ಕೇಂದ್ರವು ಈಗಾಗಲೇ ರಾಜ್ಯ ಸಚಿವ (ಗೃಹ ವ್ಯವಹಾರಗಳು) ನಿತ್ಯಾನಂದ ರೈ ಅವರ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರದ ಸಮಿತಿಯನ್ನು ರಚಿಸಿದೆ. ಲಡಾಖ್‌ನ ಜನರು ಕೇಂದ್ರಾಡಳಿತ ಪ್ರದೇಶದಲ್ಲಿ ಅಂತ್ಯವಿಲ್ಲದ ಅಧಿಕಾರಶಾಹಿ ಆಳ್ವಿಕೆಯಲ್ಲಿ ಬದುಕಲು ಸಾಧ್ಯವಿಲ್ಲ.
ಮತ್ತಷ್ಟು ಓದಿ: ನಾವು ಲಡಾಖ್ ಜನರು ಜಮ್ಮು ಕಾಶ್ಮೀರ ರಾಜ್ಯದ ಭಾಗವಾಗಿದ್ದಾಗ ಉತ್ತಮವಾಗಿದ್ದೆವು: ಸೋನಮ್ ವಾಂಗ್ಚುಕ್
370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ ರಚಿಸಲಾಯಿತು ಮತ್ತು ಆಗಸ್ಟ್ 2019 ರಲ್ಲಿ, ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು. ಆರ್ಟಿಕಲ್ 370 ಮತ್ತು 35A ರದ್ದು ಬಳಿಕ ಲಡಾಖ್ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆಯಾಯಿತು.
ರಾಜ್ಯದ ಸ್ಥಾನಮಾನಕ್ಕಾಗಿ ಪ್ರತಿಭಟನೆ
#WATCH | Leh, Ladakh: Thousands brave the freezing cold as they march demanding statehood for Ladakh and protections under the 6th Schedule of the Constitution for the Union Territory. (03.02) pic.twitter.com/gwsiGZBxXc
— ANI (@ANI) February 4, 2024
ಲಡಾಖ್‌ನ ನಿವಾಸಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಸುದೀರ್ಘ ಅಧಿಕಾರಶಾಹಿ ಆಡಳಿತದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಮತ್ತು ಈ ಪ್ರದೇಶವನ್ನು ಆಳಲು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಾಧ್ಯವಾಗುವ ಸಂಪೂರ್ಣ ರಾಜ್ಯತ್ವ ಮಾತ್ರ ತಮ್ಮ ಬೇಡಿಕೆಗಳನ್ನು ಪೂರೈಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ