ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಮೂವರ ಬಂಧನ

|

Updated on: Dec 27, 2023 | 2:54 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman)​ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆಯ ಇ-ಮೇಲ್ ಕಳುಹಿಸಿದ್ದ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ. ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಮೂವರನ್ನು ಬಂಧಿಸಿದೆ.

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಮೂವರ ಬಂಧನ
ನಿರ್ಮಲಾ ಸೀತಾರಾಮನ್
Follow us on

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman)​ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆಯ ಇ-ಮೇಲ್ ಕಳುಹಿಸಿದ್ದ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ. ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಮೂವರನ್ನು ಬಂಧಿಸಿದೆ.

ಗುಜರಾತ್‌ನ ವಡೋದರಾದಿಂದ ಮೂವರನ್ನು ಸೆರೆ ಹಿಡಿಯಲಾಗಿದೆ. ಒಬ್ಬ ವ್ಯಕ್ತಿಯನ್ನು ಆದಿಲ್ ರಫಿಗ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆತನ ಸಂಬಂಧಿ ಮತ್ತು ಇನ್ನೊಬ್ಬ ವ್ಯಕ್ತಿ ಅವನ ಸ್ನೇಹಿತ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆದರಿಕೆ ಇಮೇಲ್‌ಗಳ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಬಂಧಿತ ವ್ಯಕ್ತಿಗಳನ್ನು ಪ್ರಶ್ನಿಸಲಾಯಿತು. ಇದಲ್ಲದೆ, ಸೀತಾರಾಮನ್ ರಾಜೀನಾಮೆ ನೀಡದಿದ್ದರೆ ಆರ್‌ಬಿಐ, ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಕಚೇರಿಗಳ ಮೇಲೆ ದಾಳಿ ಮಾಡಲಾಗುವುದು ಎಂದು ಇಮೇಲ್‌ಗಳನ್ನು ಕಳುಹಿಸಲು ಬಳಸಿದ ಸಾಧನವನ್ನು ವಶಕ್ಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ