ದೆಹಲಿ: ವಿಶ್ವದ ಹಲವು ದೇಶಗಳಲ್ಲಿ ಹೊಸ ತಳಿಯ B.1.1.529 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೆಲ ನಿರ್ದಿಷ್ಟ ದೇಶಗಳಿಂದ ಆಗಮಿಸುವವರಿಗೆ ಟೆಸ್ಟ್ ಕಡ್ಡಾಯಗೊಳಿಸಿದೆ. ಹೆಚ್ಚುವರಿ ಪರೀಕ್ಷೆಗಳೂ ಸೇರಿದಂತೆ ಸುರಕ್ಷಾ ಕ್ರಮಗಳನ್ನು ಅನುಸರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಸೂಚನೆಯಂತೆ ಐರೋಪ್ಯ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಸಿಂಗಾಪುರ, ಹಾಂಗ್‌ಕಾಂಗ್, ಇಸ್ರೆಲ್‌ನಿಂದ ಭಾರತಕ್ಕೆ ಬರುವವರಿಗೆ ಕೊವಿಡ್ ಟೆಸ್ಟ್ ಸೇರಿ ಹೆಚ್ಚುವರಿ ಕ್ರಮ ಅನುಸರಿಸಲು ಸೂಚನೆ ನೀಡಲಾಗಿದೆ.
Ministry of Health and Family Welfare adds Hong Kong and Israel to the list of countries from where travellers would need to follow additional measures on arrival in India, including post-arrival testing. #COVID19 pic.twitter.com/pPPuOlHqdV
— ANI (@ANI) November 26, 2021
ಭಾರತದಲ್ಲಿ ಮತ್ತೊಂದು ಸೋಂಕಿನ ಭೀತಿ
ಕಳೆದ ಒಂದೂವರೆ ವರ್ಷದಿಂದ ಕೊರೊನಾ ವೈರಸ್ ಇಡೀ ವಿಶ್ವವನ್ನೇ ತತ್ತರಿಸುವಂತೆ ಮಾಡಿದೆ. ಕೊರೊನಾಗೆ ಲಸಿಕೆ ಕಂಡುಹಿಡಿದು, ಎಲ್ಲರೂ ನಿರ್ಭೀತರಾಗಿ ಓಡಾಡುವ ದಿನಗಳು ಸಮೀಪಿಸಿತು ಎನ್ನುವಾಗಲೇ ಇದೀಗ ಕೊರೊನಾ ರೂಪಾಂತರಿ ವೈರಸ್ಗಳ ಹಾವಳಿ ಶುರುವಾಗಿದೆ. ಇದೀಗ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ ಸೋಂಕಿನ ಹೊಸ ತಳಿ ಭಾರೀ ಅಪಾಯಕಾರಿಯಾಗಿದೆ. ಈ ರೂಪಾಂತರಿ ವೈರಸ್ ಡೆಲ್ಟಾ ವೈರಸ್ಗಿಂತಲೂ ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದಕ್ಷಿಣ ಆಫ್ರಿಕಾ, ಹಾಂಕಾಂಗ್ ಮತ್ತು ಬೋಟ್ಸ್ವಾನಾ ದೇಶಗಳಿಂದ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆ ಹಾಗೂ ಪರೀಕ್ಷೆಗೆ ಒಳಪಡಿಸುವಂತೆ ನಿನ್ನೆ ಆದೇಶ ಹೊರಡಿಸಿದೆ.
ಕೋವಿಡ್ ಸೋಂಕಿನಲ್ಲಿ ಈವರೆಗಿನ ಎಲ್ಲಾ ರೂಪಾಂತರಿಗಳಿಗಿಂತಲೂ ಭಿನ್ನವಾದ, ತತಕ್ಷಣಕ್ಕೆ ಹಾಗೂ ವೇಗವಾಗಿ ಪ್ರಸರಿಸುವ ಹೊಸ ರೂಪಾಂತರಿ ಕೊರೊನಾ ದಕ್ಷಿಣ ಆಫ್ರಿಕಾ, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಹಿನ್ನೆಲೆಯಲ್ಲಿ ಕಟ್ಟಚ್ಚರ ವಹಿಸಿದ್ದು. ಮುಜಾಂಗ್ರತೆಗಾಗಿ ವಿಶ್ವಸಂಸ್ಥೆ ತುರ್ತು ಸಭೆ ಕರೆದಿದೆ.
ಬಿ 1.1.529 ಎಂದು ಸಂಕೇತಿಸಲಾದ ಹೊಸ ರೂಪಾಂತರಿ ಕೊರೊನಾ ಬೋಟ್ಸ್ವಾನಾದಲ್ಲಿ ಮೂರು, ದಕ್ಷಿಣ ಆಫ್ರಿಕಾದಲ್ಲಿ ಆರು, ಹಾಂಕ್‍ಕಾಂಗ್‍ನಲ್ಲಿ ಎರಡು ಪ್ರಕರಣಗಳು ನಿನ್ನೆ ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದ ಮೂರು ಪ್ರಾಂತ್ಯಗಳಲ್ಲಿ ಒಟ್ಟು 22 ಪ್ರಕರಣಗಳು ಪತ್ತೆಯಾಗಿವೆ. ಈ ಹೊಸ ಕೊರೊನಾ ಸೋಂಕು ಅತ್ಯಂತ ಅಪಾಯಕಾರಿ ಎನ್ನಲಾಗಿದ್ದು, ಇದಕ್ಕೆ ಲಸಿಕೆಯೂ ಲಭ್ಯವಿಲ್ಲ.
ಹೀಗಾಗಿ, ವಿಶ್ವದ ಹಲವು ರಾಷ್ಟ್ರಗಳು ಕಟ್ಟೆಚ್ಚರ ವಹಿಸಿದ್ದು, ಹೊಸ ಸೋಂಕು ಪತ್ತೆಯಾದ ಆರು ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ಬ್ರಿಟನ್ ತಾತ್ಕಾಲಿಕ ಕಡಿವಾಣ ಹಾಕಿದೆ. ಬೋಟ್ಸ್ವಾನ, ಜಿಂಬಾಂಬೆ ಮೋಜಬಿಕ್ಯೂ, ನಂಬಿಯಾ, ಇಸ್ಟವಾನಿ, ದಕ್ಷಿಣ ಆಫ್ರಿಕಾ, ಲೆಸೋಥೋ ರಾಷ್ಟ್ರಗಳ ವಿಮಾನಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಆಫ್ರಿಕಾದಲ್ಲಿ ದೈನಂದಿನ ಕೊರೊನಾ ಸೋಂಕುಗಳ ಸಂಖ್ಯೆ ಈ ತಿಂಗಳ ಆರಂಭದಿಂದ ಹತ್ತು ಪಟ್ಟು ಹೆಚ್ಚಾಗಿದೆ. ಹಠಾತ್ ಸ್ಪೈಕ್ ಮತ್ತು ಹೊಸ ರೂಪಾಂತರಕ್ಕೆ ಪ್ರತಿಕ್ರಿಯಿಸಿದ ಬ್ರಿಟನ್ ದೇಶ ಮತ್ತು ಇತರ 5 ದಕ್ಷಿಣ ಆಫ್ರಿಕಾದ ರಾಷ್ಟ್ರಗಳಿಂದು ಬೇರೆ ದೇಶಗಳಿಗೆ ಪ್ರಯಾಣವನ್ನು ನಿಷೇಧಿಸಲಾಗಿದೆ. ಈ ರೂಪಾಂತರವು ಡೆಲ್ಟಾಕ್ಕಿಂತ ಹೆಚ್ಚು ಸಾಂಕ್ರಾಮಿಕವಾಗಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಇಲ್ಲಿಯವರೆಗೆ ಯಾವುದೇ ಹೊಸ ಕೊವಿಡ್ ರೂಪಾಂತರದ ಪ್ರಕರಣ ಪತ್ತೆಯಾಗಿಲ್ಲ: ವರದಿ
ಇದನ್ನೂ ಓದಿ: ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೊನಾ ರೂಪಾಂತರಿ ಪತ್ತೆ; ವಿಶ್ವಸಂಸ್ಥೆ ಎಚ್ಚರಿಕೆಯ ಬೆನ್ನಲ್ಲೇ ನೂತನ ನಿರ್ಧಾರ ಪ್ರಕಟಿಸಿದ ಯುಕೆ