Threat to Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ 3 ಬಾರಿ ಜೀವ ಬೆದರಿಕೆ ಕರೆ

| Updated By: ಗಣಪತಿ ಶರ್ಮ

Updated on: Jan 14, 2023 | 4:14 PM

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಬಂದಿದೆ. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಬಂದಿದೆ.

Threat to Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ 3 ಬಾರಿ ಜೀವ ಬೆದರಿಕೆ ಕರೆ
ನಿತಿನ್ ಗಡ್ಕರಿ
Follow us on

ಮಹಾರಾಷ್ಟ್ರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಗೆ (Nitin Gadkari) ಜೀವ ಬೆದರಿಕೆ ಕರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಬಂದಿದೆ. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಬಂದಿದೆ. ಈ ಕರೆಯಲ್ಲಿ ಗಡ್ಕರಿ ಅವರನ್ನು ಕೊಲ್ಲುವುದಾಗಿ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಸಚಿವರ ಕಚೇರಿ ದೂರವಾಣಿ ಸಂಖ್ಯೆಗೆ 2 ಬಾರಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ಬೆಳ್ಳಗೆ 11.30ಕ್ಕೆ, 11.40ಕ್ಕೆ ಎರಡು ಬಾರಿ ಕರೆ​ ಮಾಡಲಾಗಿದೆ.

ಗಡ್ಕರಿ ಅವರಿಗೆ ಶನಿವಾರ ನಾಗ್ಪುರದಲ್ಲಿರುವ ತಮ್ಮ ಕಚೇರಿಗೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಲ್ಯಾಂಡ್‌ಲೈನ್ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿಯಿಂದ ಬೆಳಿಗ್ಗೆಯಿಂದ ಎರಡು ಬಾರಿ ಕರೆ ಬಂದಿತ್ತು. ಕರೆ ಮಾಡಿದವರು ಗಡ್ಕರಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು.

ಈ ಮಾಹಿತಿ ಪಡೆದ ನಂತರ, ಸ್ಥಳೀಯ ಪೊಲೀಸರಿಗೆ ವಿಷಯದ ಬಗ್ಗೆ ಮಾಹಿತಿ ನೀಡಲಾಗಿದ್ದು, ಪ್ರಸ್ತುತ ನಾಗ್ಪುರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಾಗ್ಪುರದ ಖಮ್ಲಾ ರಸ್ತೆಯಲ್ಲಿರುವ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆದರಿಕೆ ಕರೆ ಬಂದಿದೆ. ಕರೆ ಮಾಡಿದವರು ಗಡ್ಕರಿ ಅವರು ಕೆಲವು ಬೇಡಿಕೆಯನ್ನು ಇಟ್ಟಿದ್ದಾರೆ. ಇಲ್ಲದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಇದನ್ನು ಓದಿ:Moscow-Goa flight: ಬಾಂಬ್ ಬೆದರಿಕೆ ಕರೆ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದ ಮಾಸ್ಕೋ-ಗೋವಾ ಅಂತಾರಾಷ್ಟ್ರೀಯ ವಿಮಾನ

ಮೂಲಗಳ ಪ್ರಕಾರ, ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 12:30 ರ ನಡುವೆ ಮೂರು ಬಾರಿ ಬೆದರಿಕೆ ಕರೆಗಳು ಬಂದಿವೆ. ರಾನ್ಸಮ್ ಮತ್ತು ದಾವೂದ್ ಹೆಸರನ್ನೂ ಕರೆ ತೆಗೆದುಕೊಳ್ಳಲಾಗಿದೆ.

ಮೂರು ಬೆದರಿಕೆ ಕರೆಗಳು ಬಂದ ನಂತರ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಗಡ್ಕರಿ ಅವರ ಕಚೇರಿಗೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Sat, 14 January 23