ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ, 3 ಬೋಗಿಗಳು ಅಗ್ನಿಗಾಹುತಿ

ವಿಶಾಖಪಟ್ಟಣಂನಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಬೋಗಿಗಳು ಬೆಂಕಿಗಾಹುತಿಯಾಗಿವೆ.ಎಕ್ಸ್​ಪ್ರೆಸ್​ ರೈಲಿನ ಮೂರು ಹವಾನಿಯಂತ್ರಿತ ಕೋಚ್​ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ನಿಂತಿದ್ದ ರೈಲಾಗಿದ್ದರಿಂದ ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಪ್ರಯಾಣಿಕರೆಲ್ಲಾ ಇಳಿದಿದ್ದರು.

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ, 3 ಬೋಗಿಗಳು ಅಗ್ನಿಗಾಹುತಿ
ಬೆಂಕಿ
Follow us
ನಯನಾ ರಾಜೀವ್
|

Updated on:Aug 04, 2024 | 3:21 PM

ವಿಶಾಖಪಟ್ಟಣಂನಲ್ಲಿ ಭಾನುವಾರ ಸಸಂಭವಿಸಿದ ಅಗ್ನಿ ಅವಘಡದಲ್ಲಿ ಮೂರು ಬೋಗಿಗಳು ಬೆಂಕಿಗಾಹುತಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಕ್ಸ್​ಪ್ರೆಸ್​ ರೈಲಿನ ಮೂರು ಹವಾನಿಯಂತ್ರಿತ ಕೋಚ್​ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ನಿಂತಿದ್ದ ರೈಲಾಗಿದ್ದರಿಂದ ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಪ್ರಯಾಣಿಕರೆಲ್ಲಾ ಇಳಿದಿದ್ದರು.

ರೈಲು ಬೆಳಗ್ಗೆ ಛತ್ತೀಸ್‌ಗಢದ ಕೊರ್ಬಾದಿಂದ ಪ್ಲಾಟ್‌ಫಾರ್ಮ್ ನಂಬರ್ ನಾಲ್ಕಕ್ಕೆ ಬಂದಿತ್ತು ಮತ್ತು ನಂತರ ತಿರುಪತಿಗೆ ಹೊರಡಬೇಕಿತ್ತು. ಕೊರ್ಬಾ ಎಕ್ಸ್‌ಪ್ರೆಸ್ ಬೆಳಿಗ್ಗೆ 6.30 ಕ್ಕೆ ಬಂದಿತು ಮತ್ತು ಕೋಚಿಂಗ್ ಡಿಪೋಗೆ ನಿರ್ವಹಣೆಗಾಗಿ ಹೋಗಬೇಕಾಗಿತ್ತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿಗೆ ಬೀಗ ಹಾಕಲಾಗಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದರು.

ಬೆಳಗ್ಗೆ 9.20ರ ವೇಳೆಗೆ ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿತ್ತು, ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಬಿ7 ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಿ6 ಹಾಗೂ ಎಂ1 ಬೋಗಿಗಳು ಭಾಗಶಃ ಹಾನಿಗೊಳಗಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದವು.

ಮತ್ತಷ್ಟು ಓದಿ: Indian Railways: ಈ ಬಾಕ್ಸ್‌ಗಳು ರೈಲ್ವೆ ಟ್ರ್ಯಾಕ್‌ ಪಕ್ಕದಲ್ಲಿ ಏಕೆ ಇರುತ್ತವೆ ನಿಮಗೆ ತಿಳಿದಿದೆಯೇ? ಇವುಗಳಿಂದ ರೈಲ್ವೆಗೆ ಏನು ಉಪಯೋಗ?

ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಫಕೀರಪ್ಪ ತಿಳಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಹಾನಿಗೊಳಗಾದ ಬೋಗಿಗಳನ್ನು ಹೊರತುಪಡಿಸಿ, ರೈಲ್ವೇ ಸಿಬ್ಬಂದಿ ನಿರ್ವಹಣೆಗಾಗಿ ರೈಲನ್ನು ಡಿಪೋಗೆ ಸ್ಥಳಾಂತರಿಸಿದರು.

ಕೋಚ್‌ಗಳಲ್ಲಿ ದಹನಕಾರಿ ವಸ್ತುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಸ್ವಲ್ಪ ಸಮಯ ತೆಗೆದುಕೊಂಡರು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:20 pm, Sun, 4 August 24

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್