
ಆಂಧ್ರಪ್ರದೇಶ, ನವೆಂಬರ್ 08: ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಜಗ್ಗಂಪೇಟ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಅಣ್ಣಾವರಂನಿಂದ ಜಗ್ಗಂಪೇಟೆಗೆ ಹೋಗುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಅಪಘಾತ(Accident) ಸಂಭವಿಸಿದೆ. ವಾಹನವು ಬೈಕ್ ಮತ್ತು ಆಟೋರಿಕ್ಷಾಗೆ ಡಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ನುಗ್ಗಿ ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಮೋರ್ತಾ ಆನಂದರಾವ್, ಮೋರ್ತಾ ಕೊಂಡಯ್ಯ ಮತ್ತು ಕಾಕಡ ರಾಜು ಎಂದು ಗುರುತಿಸಲಾಗಿದ್ದು, ಎಲ್ಲರೂ ಸೋಮನಾಡ ಗ್ರಾಮದ ನಿವಾಸಿಗಳು.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಸ್ಥಳೀಯ ಶಾಸಕ ಜ್ಯೋತುಲಾ ನೆಹರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಬಲಿಪಶುಗಳ ಕುಟುಂಬಗಳನ್ನು ಭೇಟಿ ಮಾಡಿ, ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದರು.
ಇದರ ನಡುವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭಿಸಿದ್ದಾರೆ. ಶಾಸಕ ಜ್ಯೋತುಲ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ, ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಮತ್ತಷ್ಟು ಓದಿ: ಭಾಲ್ಕಿ ಬಳಿ ಭೀಕರ ಅಪಘಾತ: ಗಾಣಗಾಪುರಕ್ಕೆ ತೆರಳುತ್ತಿದ್ದ ತೆಲಂಗಾಣದ ಮೂವರು ಭಕ್ತರ ದುರ್ಮರಣ
ಮತ್ತೊಂದು ಘಟನೆ
ಚಿತ್ಯಾಲ್ ಮಂಡಲದ ಗುಂಡ್ರಂಪಳ್ಳಿ ಬಳಿ ಒಂದು ದೊಡ್ಡ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಇನ್ನೋವಾ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿತ್ತು, ಅದಕ್ಕು ಮುನ್ನ ಪಲ್ಟಿಯಾಗಿತ್ತು. ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದರೂ, ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ