ಜೋಳದ ರೊಟ್ಟಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರು ಅಸ್ವಸ್ಥ
ಜೋಳದ ರೊಟ್ಟಿ ತಿಂದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಇನ್ನಿಬ್ಬರು ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೈದರಾಬಾದ್: ಜೋಳದ ಹಿಟ್ಟಿನಿಂದ ಮಾಡಿದ ರೊಟ್ಟಿ ತಿಂದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಇನ್ನಿಬ್ಬರು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ವಾಟ್ಪಲ್ಲಿ ಮಂಡಲದ ಪಲ್ವಟ್ಲಾ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಮನೆಯಲ್ಲಿ ಮಾಡಿದ ಜೋಳದ ರೊಟ್ಟಿ ಸೇವಿಸಿ ಐದು ಜನರು ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಸಂಗರೆಡ್ಡಿಯಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸುಶೀಲಾ (60) ಮತ್ತು ಚಂದ್ರಮೌಳಿ (55) ಶ್ರೀಶೈಲಂ (45) ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಅನುಸುಯಾ(50) ಮತ್ತು ಸರಿತಾ (40) ಉಸ್ಮಾನಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಜೋಳದ ರೊಟ್ಟಿಯಲ್ಲಿ ವಿಷ ಸೇರಿಸಿ ಕುಟುಂಬದವರು ಸೇವಿಸಿರಬೇಕು ಎಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತನಿಖಾ ಅಧಿಕಾರಿಗಳು ಆಹಾರದ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ
Published On - 1:40 pm, Tue, 22 December 20