AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿಗೆ ಸಿಲುಕಿ ಹೆಣ್ಣಾನೆ ಮತ್ತು ಅದರ 2 ಪುಟ್ಟ ಮರಿಗಳು ದುರ್ಮರಣ; ತಮಿಳುನಾಡಲ್ಲೊಂದು ದುರಂತ

ಇಂಥದ್ದೇ ಒಂದು ಘಟನೆ 2021ರ ಮಾರ್ಚ್​ ತಿಂಗಳಲ್ಲಿ ನಡೆದಿತ್ತು. ಪಲಕ್ಕಾಡ್ ಮತ್ತು ಕೊಯಂಬತ್ತೂರ್​​ನ  ಮಧ್ಯದಲ್ಲಿರುವ ರೈಲ್ವೆ ಹಳಿಯ ಮೇಲೆ ಆನೆಯೊಂದು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟಿತ್ತು.

ರೈಲಿಗೆ ಸಿಲುಕಿ ಹೆಣ್ಣಾನೆ ಮತ್ತು ಅದರ 2 ಪುಟ್ಟ ಮರಿಗಳು ದುರ್ಮರಣ; ತಮಿಳುನಾಡಲ್ಲೊಂದು ದುರಂತ
ಸಾವನ್ನಪ್ಪಿದ ಆನೆಗಳು
TV9 Web
| Edited By: |

Updated on: Nov 27, 2021 | 8:56 AM

Share

ಕೊಯಂಬತ್ತೂರ್​: ಒಂದು ಹೆಣ್ಣಾನೆ ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ. ತಾಯಿ ಆನೆಗೆ ಸುಮಾರು 25 ವರ್ಷವಾಗಿರಬಹುದು ಹಾಗೂ ಮರಿಗಳಿಗೆ 12 ವರ್ಷ ಆಗಿದೆ ಎಂದು ಸ್ಥಳೀಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 9.05ರ ಹೊತ್ತಿಗೆ ಮಹೀಂದ್ರಾಮೇಡು ಎಂಬಲ್ಲಿ, ಮಂಗಳೂರು-ಚೆನ್ನೈ ಎಕ್ಸ್​​ಪ್ರೆಸ್​ ರೈಲಿಗೆ ಈ ಆನೆಗಳು ಬಲಿಯಾಗಿವೆ. ರೈಲಿಗೆ ಸಿಲುಕಿದ ಈ ಆನೆಗಳು ಹಳಿಯ ಮೇಲೆ ಕೆಲವು ಮೀಟರ್​​ಗಳಷ್ಟು ದೂರ ಎಳೆಯಲ್ಪಟ್ಟಿವೆ. 

ಆನೆಗಳು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ್ದಾರೆ.  ರಾತ್ರಿ ಕತ್ತಲಿದ್ದರೂ ಆನೆಯ ಮೃತದೇಹಗಳನ್ನು ಹಳಿಯ ಮೇಲಿಂದ ತೆಗೆಯಲಾಗಿದ್ದು, ಇಂದು ಪೋಸ್ಟ್​ಮಾರ್ಟಮ್​ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.  ಘಟನೆಯ ಪ್ರಾಥಮಿಕ ತನಿಖೆ ನಡೆಸಲು ಜಿಲ್ಲಾ ಅರಣ್ಯಾಧಿಕಾರಿ ಟಿ.ಕೆ.ಅಶೋಕ್​ ಕುಮಾರ್ ಸೇರಿ ಇಲಾಖೆಯ ಇತರ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.  ಹಾಗೇ, ರೈಲಿನ ಲೋಕೋ ಪೈಲಟ್​ ನೀಡಿದ ಮಾಹಿತಿ ಅನ್ವಯ ರೈಲ್ವೆ ಪೊಲೀಸರೂ ಕೂಡ ಸ್ಥಳಕ್ಕೆ ತೆರಳಿದ್ದಾರೆ.

ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಕೂಡ ಆನೆಗಳ ಮೃತದೇಹ ನೋಡಲು ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಮೂಕಪ್ರಾಣಿಗಳ ಸಾವಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇಂಥದ್ದೇ ಒಂದು ಘಟನೆ 2021ರ ಮಾರ್ಚ್​ ತಿಂಗಳಲ್ಲಿ ನಡೆದಿತ್ತು. ಪಲಕ್ಕಾಡ್ ಮತ್ತು ಕೊಯಂಬತ್ತೂರ್​​ನ  ಮಧ್ಯದಲ್ಲಿರುವ ರೈಲ್ವೆ ಹಳಿಯ ಮೇಲೆ ಆನೆಯೊಂದು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟಿತ್ತು. 2016ರಲ್ಲಿ ಇದೇ ರೀತಿ 15 ವರ್ಷದ ಹೆಣ್ಣಾನೆಯೊಂದು ಸಾವನ್ನಪ್ಪಿತ್ತು.

ಇದನ್ನೂ ಓದಿ:  ಬಿಗ್​ ಬಾಸ್​ ನಿರೂಪಕರ ಬದಲಾವಣೆ; ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ​

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!