AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಪಿಲಿಭಿತ್​ನಲ್ಲಿ ಮೂವರು ಖಲಿಸ್ತಾನಿ ಉಗ್ರರ ಎನ್​ಕೌಂಟರ್

ಉತ್ತರ ಪ್ರದೇಶದ ಪಿಲಿಭಿತ್​ನಲ್ಲಿ ಪೊಲೀಸ್ ಠಾಣೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಪಂಜಾಬ್‌ನಲ್ಲಿ ಪೊಲೀಸ್ ಪೋಸ್ಟ್ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ಮೂವರು ಖಲಿಸ್ತಾನಿ ಉಗ್ರರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶದ ಪಿಲಿಭಿತ್​ನಲ್ಲಿ ಮೂವರು ಖಲಿಸ್ತಾನಿ ಉಗ್ರರ ಎನ್​ಕೌಂಟರ್
Encounter
ಸುಷ್ಮಾ ಚಕ್ರೆ
|

Updated on: Dec 23, 2024 | 1:07 PM

Share

ನವದೆಹಲಿ: ಇಂದು ಪಿಲಿಭಿತ್‌ನಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡವು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್‌ನಲ್ಲಿ ಗ್ರೆನೇಡ್ ಅಥವಾ ಬಾಂಬ್‌ಗಳನ್ನು ಎಸೆದು ಮೂವರು ಅಪರಾಧಿಗಳನ್ನು ಎನ್‌ಕೌಂಟರ್ ಮಾಡಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪೊಲೀಸರು ಎರಡು ಎಕೆ 10, 19 ಗನ್‌ಗಳು ಮತ್ತು ಎರಡು ಗ್ಲಾಕ್ ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಪ್ರದೇಶದಲ್ಲಿ ಕೆಲವು ಖಲಿಸ್ತಾನಿ ಭಯೋತ್ಪಾದಕರ ಅನುಮಾನಾಸ್ಪದ ಚಲನವಲನದ ಬಗ್ಗೆ ಮಾಹಿತಿ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಮೇರೆಗೆ, ಪೊಲೀಸ್ ತಂಡವು ಅವರನ್ನು ಹಿಡಿಯಲು ಪ್ರಯತ್ನಿಸಿತು. ಆದರೆ ಅವರು ಪೊಲೀಸರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಇದರಿಂದ ಎನ್‌ಕೌಂಟರ್ ಕಾರ್ಯಾಚರಣೆ ನಡೆಸಬೇಕಾಯಿತು.

ಇದನ್ನೂ ಓದಿ: ಸಿಟಿ ರವಿಯನ್ನ ಫೇಕ್​ ಎನ್​ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಅನಿಸುತ್ತೆ: ಪ್ರಲ್ಹಾದ್ ಜೋಶಿ ಆರೋಪ

ಪುರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್‌ಕೌಂಟರ್ ನಡೆದಿದೆ. ಗುಂಡಿನ ದಾಳಿಯಲ್ಲಿ ಉಗ್ರರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಸಿಎಚ್‌ಸಿ ಪುರನ್‌ಪುರ ಆಸ್ಪತ್ರೆಗೆ ಕಳುಹಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಎನ್​ಕೌಂಟರ್​ನಲ್ಲಿ ಮೃತರಾದವರನ್ನು ಗುರ್ವಿಂದರ್ ಸಿಂಗ್, ವೀರೇಂದ್ರ ಸಿಂಗ್ ಮತ್ತು ಜಸನ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಸದಸ್ಯರಾಗಿದ್ದರು. ಕಾರ್ಯಾಚರಣೆಯ ವೇಳೆ ಪೊಲೀಸರು ಅವರ ಬಳಿಯಿದ್ದ ಎರಡು ಎಕೆ-47 ರೈಫಲ್‌ಗಳು ಮತ್ತು ಎರಡು ಗ್ಲಾಕ್ ಪಿಸ್ತೂಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ