AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ರಸ್ತೆ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಮೂವರು ಸಾವು

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT)ನಲ್ಲಿ ನಡೆದ ಪ್ರತಿಭಟನೆಯಿಂದ ಉಂಟಾದ ಅಡಚಣೆಗಳ ನಡುವೆ ಮುಂಬೈನ ಸ್ಯಾಂಡ್‌ಹರ್ಸ್ಟ್ ರಸ್ತೆ ನಿಲ್ದಾಣದ ಬಳಿ ಸ್ಥಳೀಯ ರೈಲು ಡಿಕ್ಕಿ ಹೊಡೆದು ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಪ್ರಯಾಣಿಕರು ರೈಲ್ವೆ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ ಸಮಯಕ್ಕೆ ಸರಿಯಾಗಿ ಚಲಿಸಲು ಸಾಧ್ಯವಾಗದ ಕಾರಣ ರೈಲು ಅವರಿಗೆ ಡಿಕ್ಕಿ ಹೊಡೆದಿದೆ.

ಮುಂಬೈನಲ್ಲಿ ರಸ್ತೆ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಮೂವರು ಸಾವು
Mumbai Train Accident
ಸುಷ್ಮಾ ಚಕ್ರೆ
|

Updated on:Nov 06, 2025 | 11:10 PM

Share

ಮುಂಬೈ, ನವೆಂಬರ್ 6: ಮಹಾರಾಷ್ಟ್ರದ (Maharashtra) ಮುಂಬ್ರಾದ ಸ್ಯಾಂಡ್‌ಹರ್ಸ್ಟ್ ನಿಲ್ದಾಣದ ಬಳಿ ಮುಂಬೈ ಉಪನಗರದ ರೈಲು (Mumbai Train Accident) ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಇಂದು ಸಂಜೆ ದಕ್ಷಿಣ ಮುಂಬೈನ ಸ್ಯಾಂಡ್‌ಹರ್ಸ್ಟ್ ರಸ್ತೆ ರೈಲು ನಿಲ್ದಾಣದ ಬಳಿ ಸ್ಥಳೀಯ ರೈಲು ಡಿಕ್ಕಿ ಹೊಡೆದು ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರು ರೈಲ್ವೆ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯ ರೈಲು ಅವರ ಬಳಿಗೆ ಬಂದಿತು. ಸಮಯಕ್ಕೆ ಸರಿಯಾಗಿ ಅವರು ಆಚೆ ಚಲಿಸಲು ಸಾಧ್ಯವಾಗದ ಕಾರಣ ರೈಲು ಅವರಿಗೆ ಡಿಕ್ಕಿ ಹೊಡೆದಿದೆ. ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ: ಬೆಂಗಳೂರಿನಿಂದ ಬಿಹಾರಕ್ಕೆ ವಿಶೇಷ ರೈಲುಗಳು, ಇಲ್ಲಿದೆ ವೇಳಾಪಟ್ಟಿ

ಇಂದು ರಾತ್ರಿ 7 ಗಂಟೆ ಸುಮಾರಿಗೆ ತೀವ್ರ ಜನದಟ್ಟಣೆ ಮತ್ತು ಉಪನಗರ ರೈಲು ಸೇವೆಗಳ ಅಡಚಣೆಯಿಂದಾಗಿ ಹಲವಾರು ಪ್ರಯಾಣಿಕರು ರೈಲ್ವೆ ಹಳಿಗಳ ಉದ್ದಕ್ಕೂ ನಡೆಯತೊಡಗಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ. ಜೂನ್ 9ರಂದು ನಡೆದ ಮುಂಬ್ರಾ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಎಂಜಿನಿಯರ್‌ಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ವಿರುದ್ಧ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಲ್ಲಿ ರೈಲ್ವೆ ನೌಕರರು ಹಠಾತ್ ಪ್ರತಿಭಟನೆ ನಡೆಸಿದ್ದರಿಂದ ಜನದಟ್ಟಣೆ ಹೆಚ್ಚಾಗಿತ್ತು.

ಇದನ್ನೂ ಓದಿ: ಮಿರ್ಜಾಪುರದಲ್ಲಿ ರೈಲ್ವೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ, ನಾಲ್ವರು ಸಾವು

ಸ್ಥಳೀಯ ರೈಲು ಸಮೀಪಿಸಿದಾಗ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಆದರೆ, ಸಮಯಕ್ಕೆ ಸರಿಯಾಗಿ ಅವರಿಗೆ ರೈಲ್ವೆ ಹಳಿಯನ್ನು ದಾಟಿ ಆಚೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರಿಗೆ ರೈಲು ಡಿಕ್ಕಿ ಹೊಡೆದಿದೆ. ನಾಲ್ವರನ್ನೂ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ನಂತರ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೂ ತೊಂದರೆಯಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:09 pm, Thu, 6 November 25

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?