ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ವಸತಿ ಗಡಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 20, 2022 | 11:37 AM

ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿಯೊಂದರ ಗಡಿ ಗೋಡೆ ಕುಸಿದ ಪರಿಣಾಮ ಮೂವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನೋಯ್ಡಾ ಪ್ರಾಧಿಕಾರವು ಸೆ.21ರಲ್ಲಿ ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಯ ಗುತ್ತಿಗೆಯನ್ನು ನೀಡಿತ್ತು. ಕಾರ್ಮಿಕರು ಇಟ್ಟಿಗೆಗಳನ್ನು ಹೊರತೆಗೆಯುವಾಗ ಗೋಡೆ ಕುಸಿದಿದೆ ಎಂದು ತಿಳಿಸಲಾಗಿದೆ.

ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ವಸತಿ ಗಡಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು
Follow us on

ಉತ್ತರಪ್ರದೇಶ: ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿಯೊಂದರ ಗಡಿ ಗೋಡೆ ಕುಸಿದ ಪರಿಣಾಮ ಮೂವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕ್ಕಾಗಿ ಅವಶೇಷಗಳನ್ನು ತೆರವುಗೊಳಿಸಲು ಬುಲ್ಡೋಜರ್‌ಗಳು ಕಾರ್ಯನಿರ್ವಹಿಸುತ್ತಿದೆ.

ನೋಯ್ಡಾ ಪ್ರಾಧಿಕಾರವು ಸೆ.21ರಲ್ಲಿ ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಯ ಗುತ್ತಿಗೆಯನ್ನು ನೀಡಿತ್ತು. ಕಾರ್ಮಿಕರು ಇಟ್ಟಿಗೆಗಳನ್ನು ಹೊರತೆಗೆಯುವಾಗ ಗೋಡೆ ಕುಸಿದಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ತನಿಖೆ ಮಾಡಲಾಗುವುದು. ಜಿಲ್ಲಾ ಆಸ್ಪತ್ರೆ ಮತ್ತು ಕೈಲಾಶ್ ಆಸ್ಪತ್ರೆಯಲ್ಲಿ ತಲಾ 2 ಸಾವುಗಳ ಮಾಹಿತಿಯನ್ನು ಸ್ವೀಕರಿಸಲಾಗಿದೆ (ಒಟ್ಟು 4) ಎಂದು ನೋಯ್ಡಾ ಡಿಎಂ ತಿಳಿಸಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೋಯ್ಡಾ ಸೆಕ್ಟರ್ 21ರಲ್ಲಿ ಗೋಡೆ ಕುಸಿದ ಘಟನೆಯಿಂದಾಗಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡುವುದಾಗಿ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಸುಹಾಸ್ ಎಲ್.ವೈ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳ ವಿವರಗಳನ್ನು ಪತ್ತೆ ಮಾಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದೆ. ಎಲ್ಲಾ ತಂಡಗಳು ಇಲ್ಲಿವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ಇರುವ ಒಳಚರಂಡಿ ವ್ಯವಸ್ಥೆ ಸರಿಪಡಿಸಲು ನೋಯ್ಡಾ ಅಭಿವೃದ್ಧಿ ಪ್ರಾಧಿಕಾರ ಗುತ್ತಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಾರ್ಮಿಕರು ಇಟ್ಟಿಗೆಗಳನ್ನು ಹೊರತೆಗೆಯುವಾಗ ಗೋಡೆ ಕುಸಿದಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

 

 

 

 

Published On - 11:25 am, Tue, 20 September 22