AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಲಷ್ಕರ್ ಉಗ್ರರ ಬಂಧನ

22 ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಸೇರಿದಂತೆ ಭದ್ರತಾ ಪಡೆಗಳೊಂದಿಗೆ ಸೋಪೋರ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 3 ಲಷ್ಕರ್ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Jammu and Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಲಷ್ಕರ್ ಉಗ್ರರ ಬಂಧನ
Jammu and KashmirImage Credit source: ANI
ಅಕ್ಷಯ್​ ಪಲ್ಲಮಜಲು​​
|

Updated on: Aug 27, 2022 | 9:52 AM

Share

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಮೂವರು ಅತಿಕ್ರಮಣ ಕಾರ್ಮಿಕರನ್ನು (ಒಜಿಡಬ್ಲ್ಯೂ) ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. 22 ರಾಷ್ಟ್ರೀಯ ರೈಫಲ್ಸ್ (RR), ಮತ್ತು 179 BN ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಸೇರಿದಂತೆ ಭದ್ರತಾ ಪಡೆಗಳೊಂದಿಗೆ ಸೋಪೋರ್ ಪೊಲೀಸರು ಶುಕ್ರವಾರ ಸಂಜೆ ಪೊಲೀಸ್ ಠಾಣೆ ಬೊಮೈ ವ್ಯಾಪ್ತಿಯ ಬೊಮೈ ಚೌಕ್‌ನಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಮೂವರನ್ನು ಬಂಧಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಶಾರಿಕ್ ಅಶ್ರಫ್, ಸಕ್ಲೇನ್ ಮುಷ್ತಾಕ್ ಮತ್ತು ತೌಫೀಕ್ ಹಸನ್ ಶೇಖ್ ಎಂದು ಗುರುತಿಸಲಾಗಿದೆ. ತಪಾಸಣೆ ವೇಳೆ ಗೋರಿಪುರದಿಂದ ಬೊಮೈ ಕಡೆಗೆ ಬರುತ್ತಿದ್ದ ಮೂವರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಅವರನ್ನು ನಿಲ್ಲಿಸಲಾಗಿತ್ತು , ಆದರೆ ಅವರು ಆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದಾರೆ, ತಕ್ಷಣದಲ್ಲಿ ಭದ್ರತಾ ಪಡೆಗಳ ಚಾಕಚಕ್ಯತೆಯಿಂದ ಅವರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಮೂವರನ್ನು ತನಿಖೆ ನಡೆಸಿದ ನಂತರ ಮೂರು ಹ್ಯಾಂಡ್ ಗ್ರೆನೇಡ್‌ಗಳು, ಒಂಬತ್ತು ಪೋಸ್ಟರ್‌ಗಳು ಮತ್ತು 12 ಪಾಕಿಸ್ತಾನಿ ಧ್ವಜಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೂವರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯ ಒಜಿಡಬ್ಲ್ಯೂಗಳು ಮತ್ತು ಹೊರಗಿನ ಕಾರ್ಮಿಕರು ಸೇರಿದಂತೆ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ದಾಳಿ ನಡೆಸಲು ಬಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರಂತೆ ಬೋಮಾಯಿ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ