Nupur Sharma: ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದಕ್ಕೆ ಉದ್ಯಮಿಗೆ ಬೆದರಿಕೆ ಹಾಕಿದ್ದ ಮೂವರ ಬಂಧನ
ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿದ್ದಕ್ಕಾಗಿ ಉದ್ಯಮಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉದ್ಯಮಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಒಟ್ಟು ಆರು ಮಂದಿ ಆರೋಪಿಗಳಾಗಿದ್ದು, ಈ ಪೈಕಿ ಮೂವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ದೆಹಲಿ: ವಿವಾದತ್ಮಕ ಹೇಳಿಕೆಯನ್ನು ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿದ್ದಕ್ಕಾಗಿ ಉದ್ಯಮಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉದ್ಯಮಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಒಟ್ಟು ಆರು ಮಂದಿ ಆರೋಪಿಗಳಾಗಿದ್ದು, ಈ ಪೈಕಿ ಮೂವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬರು ಮಹಿಳೆ, ಮೊಯಮ್ಮದ್ ಅಯಾನ್, ರಶೀದ್ ರಫೀಕ್ ಬುರಾ ಮತ್ತು ಅಲಿಯಾ ಮೊಹಮ್ಮದ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳನ್ನು ಮುನ್ನಾ ಮಲಿಕ್, ಶೆಹಜಾದ್ ಮತ್ತು ಫೈಜಾನ್ ಎಂದು ಗುರುತಿಸಲಾಗಿದೆ.
ಬಿಜೆಪಿಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ವಿವಾದತ್ಮಕ ಹೇಳಿಕೆನ್ನು ನೀಡಿದ್ದರೆ ಎಂದು ಎನ್ನಲಾಗಿತ್ತು. ಇದು ಜಾಗತಿಕವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಚರ್ಚೆಯ ಕ್ಲಿಪ್ ವೈರಲ್ ಆಗುತ್ತಿದ್ದಂತೆ, ಕತಾರ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಸೇರಿದಂತೆ 14 ರಾಷ್ಟ್ರಗಳು ಈ ಕುರಿತು ಭಾರತ ಮತ್ತು ನೂಪುರ್ ಶರ್ಮಾ ಅವರ ಹೇಳಿಕೆಯನ್ನು ದೂಷಿಸಿದವು.
ಈ ವಿಚಾರವನ್ನು ತಣ್ಣಗಾಗಿಸಲು ಬಿಜೆಪಿಯು ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತು. ಜಿಂದಾಲ್ ಅವರು ಹಿಂದೂ ದೇವತೆಗಳ ಮೇಲೆ ದಾಳಿ ಮಾಡುವ ಮತ್ತು ಅವಮಾನಿಸುವವರ ಬಗ್ಗೆ ಟ್ವೀಟ್ ಮಾಡಿದ್ದಾರೆ ಮತ್ತು ಇದು ಯಾವುದೇ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
Published On - 10:51 am, Sat, 16 July 22