AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಏಳೆಂಟು ವಲಸೆ ಕಾರ್ಮಿಕರಿಗೆ ಡಿಕ್ಕಿ ಹೊಡೆದ ರೈಲು; ಮೂವರು ಸ್ಥಳದಲ್ಲೇ ಸಾವು

Odisha: ಹೀಗೆ ವಲಸೆ ಕಾರ್ಮಿಕರು ರೈಲಿಗೆ ಬಲಿಯಾಗಿದ್ದು ಇದೇ ಮೊದಲಲ್ಲ. ಹಿಂದೆ ಕೂಡ ಹಲವು ಘಟನೆಗಳು ನಡೆದಿವೆ. ಕೆಲವೇ ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಇಂಥದ್ದೇ ಅವಘಡ ನಡೆದಿತ್ತು.

Odisha: ಏಳೆಂಟು ವಲಸೆ ಕಾರ್ಮಿಕರಿಗೆ ಡಿಕ್ಕಿ ಹೊಡೆದ ರೈಲು; ಮೂವರು ಸ್ಥಳದಲ್ಲೇ ಸಾವು
ರೈಲ್ವೆ ಹಳಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Aug 30, 2021 | 5:40 PM

Share

ರೈಲ್ವೆ ಸ್ಟೇಶನ್ (Railway Station) ​​ ತಲುಪಲು ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಲಸೆ ಕಾರ್ಮಿಕ (Migrant Labourers)ರಿಗೆ  ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಉಳಿದವರು ಗಾಯಗೊಂಡ ಘಟನೆ ಒಡಿಶಾದ ಗಂಜಮ್​ ಜಿಲ್ಲೆಯಲ್ಲಿ ನಡೆದಿದೆ. ಇವರೆಲ್ಲ ಬಿಹಾರ (Bihar)ದ ಕಾರ್ಮಿಕರಾಗಿದ್ದು, ಮನೆಗೆ ಹೋಗುವ ಸಲುವಾಗಿ ರೈಲ್ವೆ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂದು ಸರ್ಕಾರಿ ರೈಲ್ವೆ ಪೊಲೀಸ್​ ಅಧಿಕಾರಿ (GRP)ಯೊಬ್ಬರು ತಿಳಿಸಿದ್ದಾರೆ.

ಸುಮಾರು 7-8 ವಲಸೆ ಕಾರ್ಮಿಕರು ಭಾನುವಾರ ರಾತ್ರಿ ಬ್ರಹ್ಮಾಪುರ ರೈಲ್ವೆ ಸ್ಟೇಶನ್​ಗೆ ಹೋಗುತ್ತಿದ್ದರು. ಇವರೆಲ್ಲ ಹಳಿಯ ಮೇಲೇ ನಡೆದುಕೊಂಡು ಹೋಗುತ್ತಿದ್ದು, ಅದೇ ಸಮಯದಲ್ಲಿ ಬಂದ ವಿಶಾಖಪಟ್ಟಣಂ-ಟಾಟಾನಗರ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಎಲ್ಲ ಕಾರ್ಮಿಕರೂ ಸ್ಥಳೀಯ ಒಂದು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಈ ಹಿಂದೆಯೂ ಹಲವು ಘಟನೆಗಳು ನಡೆದಿವೆ ಹೀಗೆ ವಲಸೆ ಕಾರ್ಮಿಕರು ರೈಲಿಗೆ ಬಲಿಯಾಗಿದ್ದು ಇದೇ ಮೊದಲಲ್ಲ. ಹಿಂದೆ ಕೂಡ ಹಲವು ಘಟನೆಗಳು ನಡೆದಿವೆ. ಕೆಲವೇ ದಿನಗಳ ಹಿಂದೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 68 ವರ್ಷದ ರೈತನೊಬ್ಬನಿಗೆ ಸಿಲ್ವಾರ್​ ಗ್ರಾಮದ ಬಳಿ ದೆಹಲಿ-ಸಹರನ್​ಪುರ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಈ ರೈತ ಕೂಡ ರೈಲ್ವೆ ಹಳಿ ದಾಟುತ್ತಿದ್ದಾಗಲೇ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: ಉಡುಗೆ ಯಾವುದಾದರೇನು, ರಣವೀರ್ ಸಿಂಗ್ ಮಟ್ಟಸ ದೇಹದ ಮೇಲೆ ಚೆನ್ನಾಗಿ ಕಾಣುತ್ತದೆ ಅನ್ನೋದು ಸುಳ್ಳಲ್ಲ!

Closing Bell: ದಿನಾಂತ್ಯಕ್ಕೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಸೆನ್ಸೆಕ್ಸ್, ನಿಫ್ಟಿ; ಹೂಡಿಕೆದಾರರ ಸಂಪತ್ತು 3.58 ಲಕ್ಷ ಕೋಟಿ ರೂ. ಹೆಚ್ಚಳ

Published On - 5:33 pm, Mon, 30 August 21

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!