ಲಾರಿಗೆ ಕಾರು ಡಿಕ್ಕಿ: ಮೂವರ ದುರ್ಮರಣ, 6 ಜನರಿಗೆ ಗಾಯ
ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ತಕ್ಕೆಲ್ಲಪದು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.
ತೆಲಂಗಾಣ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ತಕ್ಕೆಲ್ಲಪದು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಹಾಗೂ ಅಪಘಾತದಲ್ಲಿ 6 ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.
ಇನ್ನು ಇದೇ ರೀತಿಯಾದ ಅಪಘಾತವೊಂದು ಬುಧವಾರ ಸಂಭವಿಸಿತ್ತು. ನಾರಾಯಣಪೇಟೆ ಜಿಲ್ಲೆಯ ಮಕ್ತಾಲ್ ಬಳಿಯ ಗುಡಿಗಂಡಲದಲ್ಲಿ ರಾಷ್ಟ್ರೀಯ ಹೆದ್ದಾರಿ 167 ರಲ್ಲಿ ಬಾದಂಗ್‌ಪೇಟ್‌ನ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ರಾತ್ರಿ ವೇಳೆ ಹೆಚ್ಚು ಅಪಘಾತವಾಗುತ್ತಿರುವ ಬಗ್ಗೆ ವರದಿಯಾಗಿದೆ.
Andhra Pradesh: Three persons dead, six injured after a car hit a lorry near Takkellapadu village in Krishna district
— ANI (@ANI) December 10, 2020