AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ನವಿ ಮುಂಬೈನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಹಲವಾರು ಮಂದಿ ಸಿಲುಕಿರುವ ಶಂಕೆ

Navi Mumbai: ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ. ಶಹಬಾಜ್ ಗ್ರಾಮವು ಬೇಲಾಪುರ್ ವಾರ್ಡ್ ವ್ಯಾಪ್ತಿಗೆ ಬರುತ್ತದೆ. ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದವು. ಇಬ್ಬರನ್ನು ರಕ್ಷಿಸಲಾಗಿದೆ ಮತ್ತು ಇಬ್ಬರು ಸಿಲುಕಿರುವ ಸಾಧ್ಯತೆಯಿದೆ. ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ ಎಂದು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ

ಮಹಾರಾಷ್ಟ್ರ: ನವಿ ಮುಂಬೈನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಹಲವಾರು ಮಂದಿ ಸಿಲುಕಿರುವ ಶಂಕೆ
ಕುಸಿದು ಬಿದ್ದ ಕಟ್ಟಡ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ತಂಡ
ರಶ್ಮಿ ಕಲ್ಲಕಟ್ಟ
|

Updated on:Jul 27, 2024 | 8:47 AM

Share

ಮುಂಬೈ ಜುಲೈ 27: ಇಂದು (ಶನಿವಾರ) ಬೆಳಗ್ಗೆ ನವಿ ಮುಂಬೈನ (Navi Mumbai) ಶಹಬಾಜ್ ಗ್ರಾಮದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು (building collapses) ಬಿದ್ದಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು G+3 ಕಟ್ಟಡ. ಶಹಬಾಜ್ ಗ್ರಾಮವು ಬೇಲಾಪುರ್ ವಾರ್ಡ್ ವ್ಯಾಪ್ತಿಗೆ ಬರುತ್ತದೆ. ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದವು. ಇಬ್ಬರನ್ನು ರಕ್ಷಿಸಲಾಗಿದೆ ಮತ್ತು ಇಬ್ಬರು ಸಿಲುಕಿರುವ ಸಾಧ್ಯತೆಯಿದೆ. ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಸುದ್ದಿಗಾರರೊಂದಗೆ ಮಾತನಾಡಿದ ಶಿಂಧೆ ಹೇಳಿದ್ದಾರೆ.

ರಕ್ಷಿಸಲ್ಪಟ್ಟ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಕೈಲಾಸ್ ಶಿಂಧೆ ತಿಳಿಸಿದ್ದಾರೆ.

“ಇದು 10 ವರ್ಷಗಳ ಹಳೆಯ ಕಟ್ಟಡ. ತನಿಖೆ ನಡೆಯುತ್ತಿದೆ. ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ದಕ್ಷಿಣ ಮುಂಬೈನಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಬಾಲ್ಕನಿಯ ಒಂದು ಭಾಗವು ಕುಸಿದುಬಿದ್ದ ನಂತರ 80 ವರ್ಷದ ಮಹಿಳೆ ಸಾವಿಗೀಡಾದ ಪ್ರಕರಣದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಕಳೆದ ವಾರ ಶನಿವಾರ ಘಟನೆ ನಡೆದ ರುಬಿನ್ನಿಸಾ ಮಂಜಿಲ್ ಗ್ರಾಂಟ್ ರೋಡ್ ರೈಲು ನಿಲ್ದಾಣದ ಬಳಿಯ ಸ್ಲೀಟರ್ ರಸ್ತೆಯಲ್ಲಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:47 am, Sat, 27 July 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!