Operation Akhal: ಆಪರೇಷನ್ ಅಖಾಲ್, ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಭಯೋತ್ಪಾದನಾ ನಿಗ್ರಹ ಕೈಗೊಂಡ ಉಗ್ರ(Terrorist)ರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಓರ್ವ ಸೈನಿಕರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಭಾರತೀಯ ಸೇನೆಯು ಆಪರೇಷನ್ ಅಖಾಲ್ ಅಡಿಯಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಾಚರಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಭಾನುವಾರ ಕೂಡ ಮೂವರು ಉಗ್ರರನ್ನು ಕೊಲ್ಲಲ್ಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಮ್ಮು ಮತ್ತು ಕಾಶ್ಮೀರ, ಆಗಸ್ಟ್ 03: ಭಯೋತ್ಪಾದನಾ ನಿಗ್ರಹ ಕೈಗೊಂಡ ಉಗ್ರ(Terrorist)ರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಓರ್ವ ಸೈನಿಕರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಭಾರತೀಯ ಸೇನೆಯು ಆಪರೇಷನ್ ಅಖಾಲ್ ಅಡಿಯಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಾಚರಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.
ಶನಿವಾರ ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಭಾನುವಾರವೂ ಮೂವರು ಉಗ್ರರನ್ನು ಕೊಲ್ಲಲ್ಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ರಾತ್ರಿಯಿಡೀ ಸ್ಫೋಟಗಳು ಮತ್ತು ಗುಂಡಿನ ಸದ್ದುಗಳು ಮುಂದುವರೆದವು. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ತಂಡ ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್ ಇನ್ನೂ ಮುಂದುವರೆದಿದೆ.
ಶುಕ್ರವಾರ, ಅಖಾಲ್ ಅರಣ್ಯದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಕಾಡಿನಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರ ಗುಂಪೊಂದು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆಯಿತು.
ಆರಂಭಿಕ ಗುಂಡಿನ ಚಕಮಕಿಯ ನಂತರ, ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಶನಿವಾರ ಮತ್ತೆ ಕಾರ್ಯಾಚರಣೆ ಪುನರಾರಂಭವಾಯಿತು, ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿವೆ.
ಮತ್ತಷ್ಟು ಓದಿ: Operation Mahadev: ಶ್ರೀನಗರದಲ್ಲಿ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ
ಶನಿವಾರ ಕೊಲ್ಲಲ್ಪಟ್ಟ ಭಯೋತ್ಪಾದಕರು ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಯ ಒಂದು ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಗೆ ಸೇರಿದವರು ಎನ್ನಲಾಗಿದೆ. 26 ನಾಗರಿಕರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಈ ಸಂಘಟನೆ ಹೊತ್ತುಕೊಂಡಿತ್ತು. ಶ್ರೀನಗರದ ದಾಚಿಗಾಮ್ ಪ್ರದೇಶದ ಬಳಿ ಪಹಲ್ಗಾಮ್ ಹತ್ಯಾಕಾಂಡದ ಹಿಂದಿನ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಆಪರೇಷನ್ ಮಹಾದೇವ್‌ನಲ್ಲಿ ಹತ್ಯೆ ಮಾಡಿದ ಬಳಿಕ ಈ ಘಟನೆ ಸಂಭವಿಸಿದೆ.
ಮರುದಿನ, ಜುಲೈ 29 ರಂದು, ಶಿವಶಕ್ತಿ ಎಂಬ ಇನ್ನೊಂದು ಕಾರ್ಯಾಚರಣೆ ನಡೆಸಿ, ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿತು. ಏಪ್ರಿಲ್ 22 ರ ದಾಳಿಯ ನಂತರ ಒಟ್ಟಾರೆಯಾಗಿ ಸುಮಾರು 20 ಉನ್ನತ ಮಟ್ಟದ ಭಯೋತ್ಪಾದಕರನ್ನು ನಿರ್ನಾಮ ಮಾಡಲಾಗಿದೆ. ಇದಲ್ಲದೆ, ಮೇ 6-7 ರ ನಡುವೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಪಡೆಗಳು 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




