ಜಮ್ಮು ಕಾಶ್ಮೀರದಲ್ಲಿ ಎನ್​​ಕೌಂಟರ್​​: ದೀರ್ಘಕಾಲ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಹಿಜ್ಬುಲ್​​ ಮುಜಾಹಿದ್ದೀನ್​​ ಸಂಘಟನೆಯ ಉಗ್ರ ಸೇರಿದಂತೆ ಮೂವರ ಹತ್ಯೆ

| Updated By: ರಶ್ಮಿ ಕಲ್ಲಕಟ್ಟ

Updated on: May 06, 2022 | 7:29 PM

ಇಂದು ಗುಂಡಿಕ್ಕಿ ಕೊಲ್ಲಲ್ಪಟ್ಟ ಮೂವರು ಉಗ್ರರ ಪೈಕಿ ಒಬ್ಬ ದೀರ್ಘಕಾಲ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಹಿಜ್ಬುಲ್‌ ಮುಜಾಹಿದ್ದೀನ್ ಸಂಘಟನೆಯ ಉಗ್ರ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಎನ್​​ಕೌಂಟರ್​​: ದೀರ್ಘಕಾಲ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಹಿಜ್ಬುಲ್​​ ಮುಜಾಹಿದ್ದೀನ್​​ ಸಂಘಟನೆಯ ಉಗ್ರ ಸೇರಿದಂತೆ ಮೂವರ ಹತ್ಯೆ
ಪ್ರಾತಿನಿಧಿಕ ಚಿತ್ರ
Follow us on

ಶ್ರೀನಗರ: ಅಮರನಾಥ ಯಾತ್ರೆಯ (Jammu and Kashmir) ಪ್ರಮುಖ ಮಾರ್ಗವಾದ ಅನಂತನಾಗ್ ಜಿಲ್ಲೆಯ ವ್ಯಾಪ್ತಿಗೆ ಬರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ(Pahalgam) ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆಮಾಡಿದ್ದಾರೆ. ಈ ಮಾರ್ಗದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ಶುಕ್ರವಾರ ನಡೆದ ಈ ಎನ್‌ಕೌಂಟರ್ ದೊಡ್ಡ ಯಶಸ್ಸು ಎಂದು ಪೊಲೀಸರು ಹೇಳಿದ್ದಾರೆ. ಇಂದು ಗುಂಡಿಕ್ಕಿ ಕೊಲ್ಲಲ್ಪಟ್ಟ ಮೂವರು ಉಗ್ರರ ಪೈಕಿ ಒಬ್ಬ ದೀರ್ಘಕಾಲ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಹಿಜ್ಬುಲ್‌ ಮುಜಾಹಿದ್ದೀನ್ (Hizbul Mujahideen) ಸಂಘಟನೆಯ ಉಗ್ರ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಅಶ್ರಫ್ ಮೋಲ್ವಿ ಜೊತೆಗೆ ಇಬ್ಬರು ಉಗ್ರರು ಕೊಲ್ಲಲ್ಪಟ್ಟರು. ಯಾತ್ರಾ ಮಾರ್ಗದಲ್ಲಿ ಯಶಸ್ವಿ ಕಾರ್ಯಾಚರಣೆಯು ನಮಗೆ ದೊಡ್ಡ ಯಶಸ್ಸು” ಎಂದು ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಪಹಲ್ಗಾಮ್‌ನ ಕಾಡಿನಲ್ಲಿ ಉಗ್ರರ ಉಪಸ್ಥಿತಿಯ ಕುರಿತು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಕಾರ್ಡನ್ ಮತ್ತು ಹುಡುಕಾಟ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು, ಅಡಗಿರುವ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ ಅಮರನಾಥ ಯಾತ್ರೆಯ ಮೂಲ ಶಿಬಿರಗಳಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತಿದ್ದು ಇದು ಎರಡು ವರ್ಷಗಳ ನಂತರ ಜೂನ್ 30 ರಿಂದ ಪ್ರಾರಂಭವಾಗಲಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

 

Published On - 7:28 pm, Fri, 6 May 22