AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Encounter: ಪುಲ್ವಾಮಾದಲ್ಲಿ ಮೂವರು ಉಗ್ರರ ಎನ್​ಕೌಂಟರ್: ಈ ಪೈಕಿ ಒಬ್ಬ ಪೊಲೀಸ್ ಹತ್ಯೆಯ ಸಂಚು ರೂಪಿಸಿದ್ದವ

ಪೊಲೀಸರು ಸುದೀರ್ಘ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು.

Encounter: ಪುಲ್ವಾಮಾದಲ್ಲಿ ಮೂವರು ಉಗ್ರರ ಎನ್​ಕೌಂಟರ್: ಈ ಪೈಕಿ ಒಬ್ಬ ಪೊಲೀಸ್ ಹತ್ಯೆಯ ಸಂಚು ರೂಪಿಸಿದ್ದವ
ಸಾಂದರ್ಭಿಕ ಚಿತ್ರImage Credit source: Zee News
TV9 Web
| Edited By: |

Updated on:Jun 12, 2022 | 7:18 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರಗಾಮಿಗಳನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಪುಲ್ವಾಮಾದ ದ್ರಾಬ್​ಗಮ್ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಸುದೀರ್ಘ ಕಾರ್ಯಾಚರಣೆ (Encounter) ನಡೆಸಿದರು. ಹಲವು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು.

ಎಲ್ಲ ಮೂವರು ಉಗ್ರರೂ ಸ್ಥಳೀಯರೇ ಆಗಿದ್ದು, ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್-ಎ-ತಯ್ಯಬಾ ಜೊತೆಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಉಗ್ರನ ಪೈಕಿ ಒಬ್ಬನ ಹೆಸರು ಜುನೈದ್ ಶೀರ್​ಗೊರ್​ಜಿ. ಈತ ಜಮ್ಮು ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿ ರಿಯಾಜ್ ಅಹ್ಮದ್ ಥೋಕರ್ ಅವರ ಹತ್ಯೆಯ ಆರೋಪ ಹೊತ್ತಿದ್ದ ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪುಲ್ವಾಮಾದಲ್ಲಿ ಕಳೆದ ತಿಂಗಳು ಪೊಲೀಸ್ ಅಧಿಕಾರಿ ತಮ್ಮ ಮನೆಯಲ್ಲಿದ್ದಾಗಲೇ ಉಗ್ರರ ಮೇಲೆ ಗುಂಡು ಹಾರಿಸಿದ್ದರು. ಥೋಕರ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದರು.

ಇನ್ನಿಬ್ಬರು ಉಗ್ರಗಾಮಿಗಳನ್ನು ಫಾಜಿಲ್ ನಾಝಿರ್ ಭಟ್ ಮತ್ತು ಇರ್ಫಾನ್ ಅಹ್ ಮಾಲಿಕ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಪುಲ್ವಾಮಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಭಯೋತ್ಪಾದನೆಗೆ ಬಳಸುವ ಪ್ರಚಾರ ಸಾಹಿತ್ಯ, ಎರಡು ಎಕೆ 47 ರೈಫಲ್ಸ್, ಪಿಸ್ತೂಲ್ ಸೇರಿದಂತೆ ಸಾಕಷ್ಟು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ಹಿಂದೂಗಳು ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಕೊಲ್ಲುವ ಪ್ರಕರಣಗಳ ಹೆಚ್ಚಾದ ಹಿನ್ನೆಲೆಯಲ್ಲಿ ಈ ಎನ್​ಕೌಂಟರ್​ಗೆ ಮಹತ್ವ ಬಂದಿದೆ. ಉಗ್ರಗಾಮಿಗಳ ಉಪಟಳದಿಂದ ಕಂಗಾಲಾಗಿರುವ ಕಾಶ್ಮೀರಿ ಪಂಡಿತರು ಕಣಿವೆ ತೊರೆಯಲು ಮುಂದಾಗಿದ್ದಾರೆ. ಅವರಲ್ಲಿ ವಿಶ್ವಾಸ ತುಂಬಲು ಸರ್ಕಾರ ಪ್ರಯತ್ನಿಸುತ್ತಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:18 am, Sun, 12 June 22

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?