ಪಾಕಿಸ್ತಾನಕ್ಕೆ ಬೆಂಬಲ ನೀಡುವ ಬಗ್ಗೆ ಟರ್ಕಿಗೆ ಕಟು ಸಂದೇಶ ನೀಡಿದ ಭಾರತ
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಸಂಘರ್ಷದಲ್ಲಿ ಟರ್ಕಿ ಮತ್ತು ಚೀನಾ ಪಾಕಿಸ್ತಾನಕ್ಕೆ ತಮ್ಮ ಬೆಂಬಲ ಘೋಷಿಸಿದ್ದವು. ಈ ಬಗ್ಗೆ ಭಾರತ ಪ್ರತಿಕ್ರಿಯಿಸಿದ್ದು, "ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಕೊನೆಗೊಳಿಸುವಂತೆ ಮತ್ತು ದಶಕಗಳಿಂದ ಅದು ಆಶ್ರಯಿಸಿರುವ ಭಯೋತ್ಪಾದಕ ಪರಿಸರ ವ್ಯವಸ್ಥೆಯ ವಿರುದ್ಧ ವಿಶ್ವಾಸಾರ್ಹ ಮತ್ತು ಪರಿಶೀಲಿಸಬಹುದಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಟರ್ಕಿ ಬಲವಾಗಿ ಒತ್ತಾಯಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ನವದೆಹಲಿ, ಮೇ 22: ಕಾಶ್ಮೀರದ ಪಹಲ್ಗಾಮ್ ದಾಳಿಯ (Pahalgam Attack) ನಂತರ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಟರ್ಕಿಯ ವಿರುದ್ಧದ ಆಕ್ರೋಶವನ್ನು ಹೊರಹಾಕಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ನಿಲ್ಲಿಸಲು ಮತ್ತು ಇಸ್ಲಾಮಾಬಾದ್ ವರ್ಷಗಳಿಂದ ಆಶ್ರಯಿಸಿರುವ ಭಯೋತ್ಪಾದಕ ಪರಿಸರ ವ್ಯವಸ್ಥೆಯ ವಿರುದ್ಧ ಸ್ಪಷ್ಟ ಕ್ರಮಗಳನ್ನು ತೆಗೆದುಕೊಳ್ಳುವಂತೆ ಟರ್ಕಿ ಪಾಕಿಸ್ತಾನವನ್ನು ಬಲವಾಗಿ ಒತ್ತಾಯಿಸುತ್ತದೆ ಎಂದು ಭಾರತ ನಿರೀಕ್ಷಿಸುತ್ತದೆ ಎಂದು ಖಡಕ್ ಸಂದೇಶ ರವಾನಿಸಿದೆ.
ಟರ್ಕಿ ಪಾಕಿಸ್ತಾನಕ್ಕೆ ನಿರಂತರ ಬೆಂಬಲ ನೀಡುತ್ತಿರುವ ಮತ್ತು ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಗಡಿಯಾಚೆಗಿನ ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳ ವಿರುದ್ಧ ಭಾರತ ಆರಂಭಿಸಿದ ಆಪರೇಷನ್ ಸಿಂಧೂರ್ ಅನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಈ ಹೇಳಿಕೆಗಳನ್ನು ನೀಡಿದೆ.
#WATCH | Delhi: On Turkey, MEA spokesperson Randhir Jaiswal says, “We expect Turkey to strongly urge Pakistan to end its support to cross-border terrorism and take credible and verifiable actions against the terror ecosystem it has harboured for decades. Relations are built on… pic.twitter.com/yD1dtEtG77
— ANI (@ANI) May 22, 2025
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ನಿಕಟತೆಯಿಂದಾಗಿ ಭಾರತ-ಟರ್ಕಿ ಸಂಬಂಧಗಳಲ್ಲಿ ಬಿಕ್ಕಟ್ಟಿನ ನಂತರ, ದ್ವಿಪಕ್ಷೀಯ ಸಂಬಂಧಗಳು ಪರಸ್ಪರ ಗೌರವ ಮತ್ತು ಪರಸ್ಪರರ ಕಾಳಜಿಗಳಿಗೆ ಸೂಕ್ಷ್ಮತೆಯನ್ನು ಆಧರಿಸಿರಬೇಕು ಎಂದು ಭಾರತ ಒತ್ತಿ ಹೇಳಿದೆ.
ಇದನ್ನೂ ಓದಿ: ಭಾರತ-ಪಾಕ್ ನಡುವೆ ನೇರ ಮಾತುಕತೆ ಮೂಲಕ ಕದನವಿರಾಮ; ಮತ್ತೊಮ್ಮೆ ಜೈಶಂಕರ್ ಸ್ಪಷ್ಟನೆ
ಇದೇ ವೇಳೆ ಸೆಲೆಬಿ ವಾಯುಯಾನ ವಿಷಯದ ಕುರಿತು ಮಾತನಾಡಿದ ರಣಧೀರ್ ಜೈಸ್ವಾಲ್, ನವದೆಹಲಿಯಲ್ಲಿರುವ ಟರ್ಕಿಶ್ ರಾಯಭಾರ ಕಚೇರಿಯೊಂದಿಗೆ ಈ ವಿಷಯವನ್ನು ಚರ್ಚಿಸಲಾಗಿದೆ ಎಂದು ಹೇಳಿದರು. “ಸೆಲೆಬಿ ವಿಷಯದ ಬಗ್ಗೆ ಇಲ್ಲಿನ ಟರ್ಕಿಶ್ ರಾಯಭಾರ ಕಚೇರಿಯೊಂದಿಗೆ ಚರ್ಚಿಸಲಾಗಿದೆ. ಆದರೆ ಈ ನಿರ್ದಿಷ್ಟ ನಿರ್ಧಾರವನ್ನು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ತೆಗೆದುಕೊಂಡಿದೆ” ಎಂದು ಅವರು ಹೇಳಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಪೋಸ್ಟ್; ಬಾಗಲಕೋಟೆಯ ಯುವಕನ ಬಂಧನ
ಕಳೆದ ವಾರ, ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಮತ್ತು ಸರಕು ಸಾಗಣೆ ನೆಲದ ನಿರ್ವಹಣೆ ಸೇವೆಗಳನ್ನು ಒದಗಿಸುವಲ್ಲಿ ತೊಡಗಿರುವ ಟರ್ಕಿಶ್ ಕಂಪನಿಯಾದ ಸೆಲೆಬಿ ಏವಿಯೇಷನ್‌ನ ಭದ್ರತಾ ಅನುಮತಿಯನ್ನು ಭಾರತ ರದ್ದುಗೊಳಿಸಿತ್ತು. ಮೇ 15ರಂದು ಹೊರಡಿಸಲಾದ ಸರ್ಕಾರಿ ಆದೇಶದ ಪ್ರಕಾರ, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು.
ಹಾಗೇ, ಪಾಕಿಸ್ತಾನವನ್ನು ಬೆಂಬಲಿಸಿದ್ದಕ್ಕಾಗಿ ಐಐಟಿ ಬಾಂಬೆ ಮತ್ತು ಐಐಟಿ ರೂರ್ಕಿ ಸೇರಿದಂತೆ ಹಲವಾರು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳು ಟರ್ಕಿಯ ವಿಶ್ವವಿದ್ಯಾಲಯಗಳೊಂದಿಗಿನ ಸಂಬಂಧವನ್ನು ಸ್ಥಗಿತಗೊಳಿಸಿದ್ದವು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ