ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ತಿಹಾರ್ ಜೈಲಿನ ಲಿಂಕ್!

Mukesh Ambani Threat: ಮೊಬೈಲ್ ನಂಬರ್​ನ ಮೂಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಪೂರ್ವ ದೆಹಲಿಯ ರಘುಬರ್ ಪುರದ ಜಯದೀಪ್ ಲೂಧಿಯಾ ಎಂಬುವವರ ಹೆಸರಲ್ಲಿ ಈ ಸಂಖ್ಯೆ ನೋಂದಣಿಯಾಗಿದ್ದು, ಕಳೆದ ಜುಲೈನಲ್ಲಿ ಮೊದಲ ಬಾರಿಗೆ ಸಕ್ರಿಯವಾಗಿತ್ತು. ಆದರೆ ಕೆಲ ಸಮಯದ ನಂತರ ತಿಹಾರ್ ಜೈಲಿಗೆ ಕಳ್ಳ ಸಾಗಾಣಿಕೆಯಾಗಿತ್ತು ಎಂದು ಪೊಲೀಸರು ತನಿಖೆ ತಿಳಿಸಿದೆ.

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ತಿಹಾರ್ ಜೈಲಿನ ಲಿಂಕ್!
ತಿಹಾರ್ ಕಾರಾಗೃಹ
Edited By:

Updated on: Mar 12, 2021 | 4:15 PM

ದೆಹಲಿ: ಮುಕೇಶ್ ಅಂಬಾನಿ ನಿವಾಸದ ಎದುರು ಅಪರಿಚಿತ ಕಾರಿನಲ್ಲಿ ಪತ್ತೆಯಾಗಿದ್ದ ಸ್ಫೋಟಕಗಳು ತಿಹಾರ್ ಜೈಲಿನವರೆಗೂ ಸಂಪರ್ಕ ಹೊಂದಿವೆ ಎಂಬ ವಿವರಗಳು ತಿಹಾರ್ ಜೈಲು ಅಧಿಕಾರಿಗಳು ನಿನ್ನೆ (ಮಾರ್ಚ್ 11) ನಡೆಸಿದ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ಜೈಷ್-ಉಲ್-ಹಿಂದ್ ಸಂಘಟನೆ ಪ್ರಕರಣದ ಹೊಣೆ ಹೊತ್ತುಕೊಂಡಿತ್ತು. ಇದೀಗ, ಜೈಷ್-ಉಲ್-ಹಿಂದ್ ಸಂಘಟನೆಯ ಟೆಲಿಗ್ರಾಂ ಚಾನೆಲ್ ಸೃಷ್ಟಿಯಾಗಿದ್ದ ಮೊಬೈಲ್ ಮತ್ತು ಸಿಮ್ ಕಾರ್ಡ್​ ತಿಹಾರ್ ಜೈಲಿನಲ್ಲಿರುವುದು ಪತ್ತೆಯಾಗಿದೆ.

ತಿಹಾರದ ಉಪ ಕಾರಾಗೃಹ ಸಂಖ್ಯೆ 8ರಲ್ಲಿ ದೊರೆತ ಮೊಬೈಲ್​ನಿಂದ ಮುಕೇಶ್ ಅಂಬಾನಿ ಮನೆ ಎದುರು ಸ್ಪೋಟಕ ಇರಿಸಲು ಸಂಚು ರೂಪಿಸಿರುವುದು ತಿಳಿದುಬಂದಿದೆ. ತೆಹ್ಸಿನ್ ಅಖ್ತರ್ ಬರ್ರಾಕ್ ಎಂಬ ಇಂಡಿಯನ್ ಮುಜಾಹುದ್ದೀನ್ ಸಂಘಟನೆಗೆ ಸೇರಿದ ಬಂಧಿತ ಉಗ್ರಗಾಮಿಯ ಬಳಿ 9311**0819 ಸಂಖ್ಯೆಯ ಸಿಮ್ ಕಾರ್ಡ್​ ವಶಪಡಿಸಿಕೊಳ್ಳಲಾಗಿದೆ. ಇದೇ ಮೊಬೈಲ್ ನಂಬರ್​ನಿಂದ ರಚಿಸಿದ ಟೆಲಿಗ್ರಾಂ ಚಾನೆಲ್ ಮೂಲಕ ಸಂಚಿಗೆ ಯೋಜನೆ ರೂಪಿಸಲಾಗಿತ್ತು.

ಈ ಮೊಬೈಲ್ ನಂಬರ್​ನ ಮೂಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಪೂರ್ವ ದೆಹಲಿಯ ರಘುಬರ್ ಪುರದ ಜಯದೀಪ್ ಲೂಧಿಯಾ ಎಂಬುವವರ ಹೆಸರಲ್ಲಿ ಈ ಸಂಖ್ಯೆ ನೋಂದಣಿಯಾಗಿದ್ದು, ಕಳೆದ ಜುಲೈನಲ್ಲಿ ಮೊದಲ ಬಾರಿಗೆ ಸಕ್ರಿಯವಾಗಿತ್ತು. ಆದರೆ ಕೆಲ ಸಮಯದ ನಂತರ ತಿಹಾರ್ ಜೈಲಿಗೆ ಕಳ್ಳ ಸಾಗಾಣಿಕೆಯಾಗಿತ್ತು ಎಂದು ಪೊಲೀಸರು ತನಿಖೆ ತಿಳಿಸಿದೆ.

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ, ಏನಿದು ಪ್ರಕರಣ?
ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ  ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್​ ಕಡ್ಡಿಗಳು ಪತ್ತೆಯಾಗಿದ್ದವು. ಸ್ಥಳಕ್ಕೆ ಎಟಿಎಸ್​, ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು ದೌಡಾಯಿಸಿದ್ದರು.

ಮುಕೇಶ್ ಅಂಬಾನಿಯವರ ಅಂತಿಲ್ಲಾ ನಿವಾಸದ ಬಳಿ ಸ್ಕಾರ್ಪಿಯೊ ವಾಹನವೊಂದು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಜೆಲೆಟಿನ್​ ಕಡ್ಡಿಗಳು ಇರುವುದು ಕಂಡುಬಂದಿತ್ತು.

ಇನ್ನು, ಈ ಕುರಿತು ಪ್ರತಿಕ್ರಿಯಿಸಿದ ಮುಂಬೈ ಪೊಲೀಸ್​ ವಕ್ತಾರ DCP ಚೈತನ್ಯ ವಾಹನದಲ್ಲಿ ಸ್ಫೋಟಕ ಜಿಲೆಟಿನ್​ ಕಡ್ಡಿಗಳು ಇರುವುದು ಪತ್ತೆಯಾಗಿದೆ. ಆದರೆ, ಇದು ಬಾಂಬ್​ ಮಾದರಿಯಲ್ಲಿ ರೂಪಿಸಿರುವುದಾಗಿ ಸದ್ಯಕ್ಕೆ ಕಂಡುಬಂದಿಲ್ಲ. ಸದ್ಯ, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದರು.

ಅಂದ ಹಾಗೆ, ಈ ಸ್ಕಾರ್ಪಿಯೊ ವಾಹನದ ನೋಂದಣಿ ಸಂಖ್ಯೆ ಉದ್ಯಮಿಯ ಭದ್ರತಾ ಸಿಬ್ಬಂದಿ ಬಳಸುವ ವಾಹನಗಳಿಗೆ ಹೋಲುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೊತೆಗೆ, ವಾಹನದಿಂದ ಪತ್ರವೊಂದು ಸಹ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ: Hurun Global Rich List: Hurunನಿಂದ ಭಾರತದ ಅತ್ಯಂತ ಸಿರಿವಂತರ ಟಾಪ್ 10 ಪಟ್ಟಿ ಬಿಡುಗಡೆ: ಮುಕೇಶ್ ಅಂಬಾನಿ ನಂಬರ್ ಒನ್

ಭಾರತವು ಬಲಿಷ್ಠ ಆರ್ಥಿಕತೆಯ ದೇಶವಾಗಲಿದೆ: ಮುಕೇಶ್ ಅಂಬಾನಿ