AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ban ಆದ್ಮೇಲೂ TikTok ವರ್ಕ್​ ಆಗ್ತಿದೆಯಾ? ತಾಜಾ ಮಾಹಿತಿ ಇಲ್ಲಿದೆ

ಬೆಂಗಳೂರು: ಇತ್ತೀಚೆಗಷ್ಟೇ ಗಾಲ್ವಾನ್ ಕಣಿವೆಯಲ್ಲಿ ಚೀನಾ ಹಾಗೂ ಭಾರತ ಯೋಧರ ನಡುವೆ ನಡೆದ ಸಂಘರ್ಷದ ಬೆನ್ನಲ್ಲೇ ದೇಶವ್ಯಾಪ್ತಿ ಚೀನಾದ ವಸ್ತುಗಳನ್ನು ಬಹಿಷ್ಕರಿಸಲು ಜನರು ಮುಂದಾದರು. ಇದೀಗ ರಾತ್ರಿ ಪ್ರಧಾನಿ ಮೋದಿ ದಿಢೀರನೇ ಚೀನಾದ ಆ್ಯಪ್​ಗಳ ಮೇಲೆ ಸಮರ ಸಾರಿ ಟಿಕ್ ಟಾಕ್ ಸೇರಿದಂತೆ 59 ಆ್ಯಪ್​ಗಳಿಗೆ ಭಾರತದಿಂದ ಗೇಟ್​ಪಾಸ್ ನೀಡಿದ್ದಾರೆ. ಪ್ರಧಾನಿ ಮೋದಿಯ ನಿರ್ಧಾರವನ್ನು ದೇಶಾದ್ಯಂತ ಜನರು ಸ್ವಾಗತಿಸಿದ್ದಾರೆ. ರಾತ್ರಿಯಿಂದಲೇ ಕೆಲವರು ಟಿಕ್​ ಟಾಕ್ ಆ್ಯಪ್​ಗಳನ್ನು ತಮ್ಮ ಮೊಬೈಲ್​ನಿಂದ ಡಿಲೀಟ್ ಮಾಡಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರ ಆದೇಶದ […]

Ban ಆದ್ಮೇಲೂ TikTok ವರ್ಕ್​ ಆಗ್ತಿದೆಯಾ? ತಾಜಾ ಮಾಹಿತಿ ಇಲ್ಲಿದೆ
ಸಾಧು ಶ್ರೀನಾಥ್​
| Updated By: |

Updated on:Jun 30, 2020 | 12:17 PM

Share

ಬೆಂಗಳೂರು: ಇತ್ತೀಚೆಗಷ್ಟೇ ಗಾಲ್ವಾನ್ ಕಣಿವೆಯಲ್ಲಿ ಚೀನಾ ಹಾಗೂ ಭಾರತ ಯೋಧರ ನಡುವೆ ನಡೆದ ಸಂಘರ್ಷದ ಬೆನ್ನಲ್ಲೇ ದೇಶವ್ಯಾಪ್ತಿ ಚೀನಾದ ವಸ್ತುಗಳನ್ನು ಬಹಿಷ್ಕರಿಸಲು ಜನರು ಮುಂದಾದರು. ಇದೀಗ ರಾತ್ರಿ ಪ್ರಧಾನಿ ಮೋದಿ ದಿಢೀರನೇ ಚೀನಾದ ಆ್ಯಪ್​ಗಳ ಮೇಲೆ ಸಮರ ಸಾರಿ ಟಿಕ್ ಟಾಕ್ ಸೇರಿದಂತೆ 59 ಆ್ಯಪ್​ಗಳಿಗೆ ಭಾರತದಿಂದ ಗೇಟ್​ಪಾಸ್ ನೀಡಿದ್ದಾರೆ.

ಪ್ರಧಾನಿ ಮೋದಿಯ ನಿರ್ಧಾರವನ್ನು ದೇಶಾದ್ಯಂತ ಜನರು ಸ್ವಾಗತಿಸಿದ್ದಾರೆ. ರಾತ್ರಿಯಿಂದಲೇ ಕೆಲವರು ಟಿಕ್​ ಟಾಕ್ ಆ್ಯಪ್​ಗಳನ್ನು ತಮ್ಮ ಮೊಬೈಲ್​ನಿಂದ ಡಿಲೀಟ್ ಮಾಡಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರ ಆದೇಶದ ಬಳಿಕ ನಿನ್ನೆ ರಾತ್ರಿಯೇ ಗೂಗಲ್​ ಪ್ಲೇಸ್ಟೋರ್​ನಲ್ಲಿ ಟಿಕ್​ಟಾಕ್​ ಡೌನ್​ಲೋಡ್​ ಆಗುತ್ತಿತ್ತು. ಆದ್ರೆ ಇಂದು ಬೆಳಗ್ಗೆಯಿಂದ ಪ್ಲೇಸ್ಟೋರ್​ನಲ್ಲಿ ಟಿಕ್​ಟಾಕ್ ಆ್ಯಪ್​ ಲಭ್ಯವಾಗುತ್ತಿಲ್ಲ. ಆದ್ರೆ ಬೇರೊಂದು ರೂಪಗಳಲ್ಲಿ ಇನ್ನೂ ಟಿಕ್​ಟಾಕ್ ಸಿಗುತ್ತಿದೆ.

ಟಿಕ್‌ ಟಾಕ್ ಬಳಕೆದಾರರ ಮಾಹಿತಿ ಸುರಕ್ಷಿತವಾಗಿದೆ ಭಾರತ ಸರ್ಕಾರ ಟಿಕ್​ಟಾಕ್ ಸೇರಿದಂತೆ 59 ಚೀನಾ ಆ್ಯಪ್​ಗಳನ್ನು ಬ್ಯಾನ್ ಮಾಡಿದೆ. ಸರ್ಕಾರದ ಆದೇಶವನ್ನು ನಾವು ಅನುಸರಿಸುತ್ತಿದ್ದೇವೆ. ಹಾಗೂ ಈ ಬಗ್ಗೆ ಸ್ಪಷ್ಟನೆಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನ ನಾವು ಸಂಪರ್ಕಿಸಲು ಯತ್ನಿಸುತ್ತಿದ್ದೇವೆ. ಟಿಕ್​ಟಾಕ್​ನ ಎಲ್ಲಾ ಮಾಹಿತಿಯನ್ನು ನಾವು ಗೌಪ್ಯವಾಗಿ ಹಾಗೂ ಭದ್ರವಾಗಿ ಇಟ್ಟಿದ್ದೇವೆ. ಟಿಕ್‌ ಟಾಕ್ ಆ್ಯಪ್ ಬಳಕೆದಾರರ ಮಾಹಿತಿ ಸುರಕ್ಷಿತವಾಗಿದೆ. ಚೀನಾ ಸರ್ಕಾರ ಸೇರಿದಂತೆ ಯಾವುದೇ ವಿದೇಶಿ ಸರ್ಕಾರದ ಜತೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಇಂಟರ್​ನೆಟ್​ ಮೂಲಕ ಟಿಕ್​ಟಾಕ್ ಕಾರ್ಯನಿರ್ವಹಿಸಲಿದ್ದು, ಭಾರತದ 14 ಭಾಷೆಯಲ್ಲಿ ಟಿಕ್​ಟಾಕ್ ಲಭ್ಯವಿದೆ. ಅಲ್ಲದೆ, ನೂರಾರು ಮಿಲಿಯನ್​ ಫಾಲೋವರ್ಸ್​ ಆಗಿದ್ದಾರೆ. ಕಲಾವಿದರು, ವಿದ್ಯಾರ್ಥಿಗಳು, ಸೆಲೆಬ್ರೆಟಿಗಳು ಸೇರಿದಂತೆ ಹಲವರಿಗೆ ಟಿಕ್​ಟಾಕ್ ಜೀವನಾಧಾರವಾಗಿದೆ ಎಂದು ಭಾರತದ ಟಿಕ್​ಟಾಕ್​ ಸಂಸ್ಥೆಯ ಮುಖ್ಯಸ್ಥ ನಿಖಿಲ್ ಗಾಂಧಿ ತಿಳಿಸಿದ್ದಾರೆ.

Published On - 11:48 am, Tue, 30 June 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ