Uttarakhand CM: ಉತ್ತರಾಖಂಡ ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯನ್ನು ಘೋಷಿಸಿದ ಬಿಜೆಪಿ; ತಿರತ್ ಸಿಂಗ್ ರಾವತ್ಗೆ ಸಿಎಂ ಪಟ್ಟ
Tirath Singh Rawat: ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತಿರತ್ ಸಿಂಗ್ ರಾವತ್ ಆಯ್ಕೆ ಆಗಿದ್ದಾರೆ. ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾವತ್ ಅವರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯದ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತಿರತ್ ಸಿಂಗ್ ರಾವತ್ ಆಯ್ಕೆ ಆಗಿದ್ದಾರೆ. ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾವತ್ ಅವರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯದ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ.ಉತ್ತರಾಖಂಡ ಸಚಿವ ಧನ್ ಸಿಂಗ್ ರಾವತ್, ಕೇಂದ್ರ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಬಿಜೆಪಿ 56ರ ಹರೆಯದ ಗಡ್ವಾಲ್ನ ಸಂಸದ ತಿರತ್ ಸಿಂಗ್ ಅವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದೆ. ಇಂದು ಸಂಜೆ 4 ಗಂಟೆಗೆ ತಿರತ್ ಸಿಂಗ್ ರಾವತ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
9ಫೆಬ್ರವರಿ 2013ರಿಂದ 2015 ಡಿಸೆಂಬರ್ 31ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದರು ತಿರತ್ ಸಿಂಗ್ ರಾವತ್.2012 ರಿಂದ 2017ರ ವರೆಗೆ ರಾವತ್ ಅವರು ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಿದ್ದರು. ಇವರು ಉತ್ತರಪ್ರದೇಶದ ಭಾರತೀಯ ಜನತಾ ಯುವ ಮೋರ್ಚಾದ ಉಪಾಧ್ಯಕ್ಷರಾಗಿದ್ದರು. ಉತ್ತರಾಖಂಡ ರಚನೆಯಾದಾಗ ಮೊದಲ ಶಿಕ್ಷಣ ಸಚಿವರಾಗಿದ್ದವರು ತಿರತ್ ಸಿಂಗ್. 2007ರಲ್ಲಿ ಉತ್ತರಾಖಂಡದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಇದಾದನಂತರ ರಾಜ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಶಾಸಕರಾಗಿ ಆಯ್ಕೆಯಾದ ಇವರು 2013ರಲ್ಲಿ ಉತ್ತರಾಖಂಡ ಬಿಜೆಪಿ ಅಧ್ಯಕ್ಷರಾದರು.
BJP MP Tirath Singh Rawat to become new chief minister of Uttarakhand: Trivendra Singh Rawat who resigned from the post yesterday
Tirath Singh Rawat will take oath as the chief minister at 4 pm today. pic.twitter.com/ihhLdjkGRG
— ANI (@ANI) March 10, 2021
ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ಗವರ್ನರ್ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿದ ನಂತರ ರಾಜೀನಾಮೆ ನೀಡಿದ್ದರು. ತಮ್ಮದೇ ಪಕ್ಷದ ಶಾಸಕರಿಂದ ತ್ರಿವೇಂದ್ರ ಸಿಂಗ್ ‘ಅಸಮರ್ಥ ಮುಖ್ಯಮಂತ್ರಿ’ (below average) ಎನಿಸಿಕೊಂಡಿದ್ದರು. ರಾವತ್ ನಾಯಕತ್ವ ಮುಂದುವರಿದರೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಬಹುತೇಕ ಶಾಸಕರು ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವಲ್ಲಿ ರಾವತ್ ವಿಫಲರಾಗಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು.
The party gave me a golden opportunity to serve this State for four years. I had never thought that I would get such an opportunity. The party has now decided that the opportunity to serve as CM should be given to someone else now: Trivendra Singh Rawat, BJP in Dehradun pic.twitter.com/cwj36xkSZd
— ANI (@ANI) March 9, 2021
ಪಕ್ಷದ ನಿರ್ಧಾರದಂತೆ ರಾಜೀನಾಮೆ ರಾಜ್ಯಕ್ಕೆ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಪಕ್ಷವು ನನಗೆ ಅವಕಾಶ ನೀಡಿತ್ತು. ನನಗೆ ಇಂಥ ಅವಕಾಶ ಸಿಗಬಹುದು ಎಂದು ನಾನೆಂದೂ ಭಾವಿಸಿರಲಿಲ್ಲ. ಇದೀಗ ಪಕ್ಷವು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಮತ್ತೊಬ್ಬರಿಗೆ ನೀಡಬೇಕು ಎಂದು ಚಿಂತನೆ ನಡೆಸಿದೆ ಎಂದು ರಾವತ್ ಡೆಹ್ರಾಡೂನ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಶಾಸಕರಿಂದ ‘ಅಸಮರ್ಥ’ ಎನಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾಜೀನಾಮೆ
Published On - 11:32 am, Wed, 10 March 21