ಜಿಲೇಬಿ ಪ್ರಸಾದದ ಬೆಲೆಯನ್ನು ₹500ಕ್ಕೆ ಏರಿಸಿದ ತಿರುಮಲ ತಿರುಪತಿ ದೇವಸ್ಥಾನ

ಟಿಟಿಡಿ ವಿಶ್ವದ ಅತ್ಯಂತ ಗೌರವಾನ್ವಿತ ಹಿಂದೂ ಧಾರ್ವಿುಕ ಸಂಸ್ಥೆಗಳಲ್ಲಿ ಒಂದಾಗಿದೆ, ಇದು ಸಬ್ಸಿಡಿ ದರದಲ್ಲಿ ಅಥವಾ ಕನಿಷ್ಠ ವೆಚ್ಚದ ಆಧಾರದ ಮೇಲೆ ಪ್ರಸಾದವನ್ನು ನೀಡಬೇಕು. ಆದರೆ ಇಲ್ಲಿ ಟಿಟಿಡಿ ಜಿಲೇಬಿ-ಥೆಂಥೋಲವನ್ನು ಮಾರಾಟ ಮಾಡುವ ಮೂಲಕ ಶೇ 239 ಲಾಭ ಗಳಿಸಲು ಪ್ರಯತ್ನಿಸುತ್ತಿದೆ.

ಜಿಲೇಬಿ ಪ್ರಸಾದದ ಬೆಲೆಯನ್ನು ₹500ಕ್ಕೆ ಏರಿಸಿದ ತಿರುಮಲ ತಿರುಪತಿ ದೇವಸ್ಥಾನ
ತಿರುಪತಿ ಜಿಲೇಬಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Feb 23, 2022 | 12:32 PM

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ (TTD) ತಿರುಮಲ ದೇವಸ್ಥಾನದಲ್ಲಿ ತನ್ನ ಜಿಲೇಬಿ ಪ್ರಸಾದದ ಬೆಲೆಯನ್ನು 100 ರಿಂದ 500 ರೂಗೆ ಏರಿಕೆ ಮಾಡಿದ್ದು ದೇವಸ್ಥಾನದಲ್ಲಿ ಆರ್ಜಿತ ಸೇವೆ ಮತ್ತೆ ಬರುವಾಗ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ. ಆದಾಗ್ಯೂ, ಈ ಗುರುವಾರ ವಿಶೇಷ ಪ್ರಸಾದವನ್ನು ತೆರೆದ ಕೌಂಟರ್‌ಗಳಿಂದ ಭಕ್ತರಿಗೆ ವಿತರಿಸಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಪ್ರಸಾದವನ್ನು ತಯಾರಿಸಲು, ತಿರುಮಲ ದೇವಾಲಯದ ಒಳಗಿನ ಪಾಡಿ ಪೋಟುನಿಂದ ದೇವಾಲಯದ ಹೊರಗೆ ಹೊಸದಾಗಿ ನಿರ್ಮಿಸಲಾದ ಬೂಂದಿ ಕಿಚನ್​​ಗೆ ಬದಲಾಯಿಸಲಾಗುತ್ತದೆ. ಮಧ್ಯವರ್ತಿಗಳು ಕಾಳ ದಂಧೆಯಲ್ಲಿ ಒಂದು ಸೆಟ್​ಗೆ 2000 ನಂತೆ ಮಾರುವುದನ್ನು ತಡೆಯಲು ಜೂನ್ 2021 ರಲ್ಲಿ, ಟಿಟಿಡಿ ಆಡಳಿತದ ಉನ್ನತಾಧಿಕಾರಿಗಳು ಟ್ರಸ್ಟ್ ಬೋರ್ಡ್‌ಗೆ ಪ್ರಸ್ತುತ 100 ಕ್ಕೆ ಮಾರಾಟವಾಗುತ್ತಿರುವ ಜಿಲೇಬಿ ಮತ್ತು ಥೆಂಥೋಲವನ್ನು 2000ಕ್ಕೆ ಮಾರುವಂತೆ ಪ್ರಸ್ತಾಪವಿರಿಸಿದ್ದರು. ಜಿಲೇಬಿ ಮತ್ತು ಥೆಂಥೋಲ ಸೆಟ್ ತಯಾರಿಸಲು ಟಿಟಿಡಿ ಮಾಡಿದ ವೆಚ್ಚ ₹147.50 ಆಗಿದೆ.  ಟ್ರಸ್ಟ್ ಬೋರ್ಡ್ ವಿವರವಾದ ಚರ್ಚೆಯನ್ನು ನಡೆಸಿತು ಮತ್ತು ಬೆಲೆಯನ್ನು 500 ರೂ.ಗೆ ಹೆಚ್ಚಿಸಲು ನಿರ್ಧರಿಸಿತು. ಬೆಲೆ ಏರಿಕೆಯಿಂದಾಗಿ ಟಿಟಿಡಿ ಶೇ 239 ರಷ್ಟು ಹೆಚ್ಚುವರಿ ಲಾಭವನ್ನು ಪಡೆಯುತ್ತದೆ.  ಆಂಧ್ರಪ್ರದೇಶದ ಸಾರ್ವಜನಿಕ ಖಾತೆಗಳ ಸಮಿತಿಯ ಅಧ್ಯಕ್ಷ ಪಯ್ಯವುಲ ಕೇಶವ್ ಅವರು ಟಿಟಿಡಿ ಟ್ರಸ್ಟ್ ಬೋರ್ಡ್ ಕಾಳದಂಧೆ ನಿಲ್ಲಿಸುವ ಉದ್ದೇಶದಿಂದ ಐದು ಪಟ್ಟು ಹೆಚ್ಚಿಸಿದ್ದಾರೆ ಎಂದು ಹೇಳಿದರು. “ಟಿಟಿಡಿ ವಿಶ್ವದ ಅತ್ಯಂತ ಗೌರವಾನ್ವಿತ ಹಿಂದೂ ಧಾರ್ವಿುಕ ಸಂಸ್ಥೆಗಳಲ್ಲಿ ಒಂದಾಗಿದೆ, ಇದು ಸಬ್ಸಿಡಿ ದರದಲ್ಲಿ ಅಥವಾ ಕನಿಷ್ಠ ವೆಚ್ಚದ ಆಧಾರದ ಮೇಲೆ ಪ್ರಸಾದವನ್ನು ನೀಡಬೇಕು. ಆದರೆ ಇಲ್ಲಿ ಟಿಟಿಡಿ ಜಿಲೇಬಿ-ಥೆಂಥೋಲವನ್ನು ಮಾರಾಟ ಮಾಡುವ ಮೂಲಕ ಶೇ 239 ಲಾಭ ಗಳಿಸಲು ಪ್ರಯತ್ನಿಸುತ್ತಿದೆ. ಪ್ರಸಾದವು ಅದರ ತಯಾರಿಕೆಯ ವೆಚ್ಚಕ್ಕಿಂತ ಹೆಚ್ಚು, ಇದು ಅತ್ಯಂತ ಆಕ್ಷೇಪಾರ್ಹವಾಗಿದೆ, ”ಎಂದು ಟಿಡಿಪಿ ಶಾಸಕ ಹೇಳಿದರು.

ಟಿಟಿಡಿ ಟ್ರಸ್ಟ್‌ನ ಮಾಜಿ ಸದಸ್ಯ ಜಿ ಭಾನುಪ್ರಕಾಶ್ ರೆಡ್ಡಿ ಕೂಡ ಬೆಲೆ ಏರಿಕೆ ತಪ್ಪು ಎಂದಿದ್ದಾರೆ ಭಕ್ತರಿಗೆ ಸಬ್ಸಿಡಿ ದರದಲ್ಲಿ ಪ್ರಸಾದವನ್ನು ಯಾವಾಗಲೂ ನೀಡಬೇಕು ಆದರೆ ಇಲ್ಲಿ ಟಿಟಿಡಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣಕ್ಕೆ ಭಕ್ತರನ್ನು ಸುಲಿಗೆ ಮಾಡುತ್ತಿದೆ, ಇದು ಆಕ್ಷೇಪಾರ್ಹವಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಟಿಟಿಡಿ ಖ್ಯಾತೆಯಿಂದ ಅಲರ್ಟ್​! ಆಂಜನೇಯ ಜನಿಸಿದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಮುಂದು, ಕೋಟ್ಯಂತರ ಅನುದಾನ ಘೋಷಣೆ ಸಾಧ್ಯತೆ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್