TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ
ತಿರುಮಲ ತಿರುಪತಿ ದೇವಸ್ಥಾನ
Follow us
TV9 Web
| Updated By: Lakshmi Hegde

Updated on: Oct 22, 2021 | 9:55 AM

ತಿರುಪತಿ: ನವೆಂಬರ್​ ಮತ್ತು ಡಿಸೆಂಬರ್​ ತಿಂಗಳುಗಳ ವಿಶೇಷ ಪ್ರವೇಶ ದರ್ಶನ (SED) ಟಿಕೆಟ್​​ಗಳನ್ನು ಇಂದು ಬೆಳಗ್ಗೆ 9ಗಂಟೆಗೆ ತನ್ನ ಅಧಿಕೃತ ವೆಬ್​​ಸೈಟ್​​ನಲ್ಲಿ ಬಿಡುಗಡೆ ಮಾಡುವುದಾಗಿ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಿಳಿಸಿದೆ. ಇದು ಒಂದು ಟಿಕೆಟ್​​ಗೆ 300 ರೂಪಾಯಿ ಇರುತ್ತದೆ. ಹಾಗೇ, ಹಾಗೇ ನವೆಂಬರ್ ಕೋಟಾದ ಸರ್ವ ದರ್ಶನ ಟಿಕೆಟ್​​​ ಸ್ಲಾಟ್  ಭಾನುವಾರ ಬೆಳಗ್ಗೆ 9ಗಂಟೆಗೆ ತೆರೆಯಲಿದ್ದು, ಭಕ್ತರು ಆನ್​​ಲೈನ್​ ಮೂಲಕ ಬುಕಿಂಗ್​ ಮಾಡಬಹುದು. 

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಪಡೆದಿರುವ ಪ್ರಮಾಣಪತ್ರ, ಕೊವಿಡ್​ 19 ನೆಗೆಟಿವ್​ ವರದಿ ತರುವುದು ಕಡ್ಡಾಯ ಎಂಬ ನಿಯಮವನ್ನು ಈಗಾಗಲೇ ಟಿಟಿಡಿ ಜಾರಿಗೊಳಿಸಿದೆ. ಈ ಮಧ್ಯೆ ದೇಗುಲಕ್ಕೆ ಭೇಟಿ ನೀಡಲು ಹೇರಿರುವ ಭಕ್ತರ ಸಂಖ್ಯಾ ಮಿತಿಯನ್ನು ಹೆಚ್ಚುಗೊಳಿಸಬೇಕು ಎಂಬ ಒತ್ತಡವೂ ಅದರ ಮೇಲೆ ಜಾಸ್ತಿಯಾಗುತ್ತಿದೆ. ಹಾಗಾಗಿ ಈ ಬಾರಿ ಕೋಟಾದಲ್ಲಿ ಜಾಸ್ತಿ ಟಿಕೆಟ್​ ಬಿಡುಗಡೆ ಮಾಡಬಹುದಾ ಎಂಬ ಕುತೂಹಲವೂ ಸಹಜವಾಗಿಯೇ ಎದ್ದಿದೆ. ಸದ್ಯ ಒಂದು ದಿನಕ್ಕೆ 30,000ಕ್ಕಿಂತಲೂ  ಕಡಿಮೆ ಭಕ್ತರು ತಿರುಮಲ ದೇವರ ದರ್ಶನಕ್ಕೆ ಆಗಮಿಸಬಹುದಾಗಿದೆ. ಕೊವಿಡ್​ 19 ಸಾಂಕ್ರಾಮಿಕಕ್ಕೂ ಪೂರ್ವ ಈ ದೇವಾಲಯದಲ್ಲಿ ಒಂದು ದಿನಕ್ಕೆ 79-80 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇತ್ತು.

ಇದನ್ನೂ ಓದಿ: Raayan Raj Sarja: ಚಿರು ಪುತ್ರ ರಾಯನ್​ ರಾಜ್​ ಸರ್ಜಾ ಜನ್ಮದಿನ: ಮೇಘನಾ ರಾಜ್​ ಮನೆಯಲ್ಲಿ ಸಂಭ್ರಮವೋ ಸಂಭ್ರಮ

ಬಿಡದಿ‌: ಕೆರೆ ಕಟ್ಟೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಜಲಸಮಾಧಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?