ತಿರುಪತಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಟೋಕನ್ ಕೌಂಟರ್‌ನಲ್ಲಿ ಕಾಲ್ತುಳಿತ; ನಾಲ್ವರು ಭಕ್ತರ ಸಾವು

ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಾರೀ ಕಾಲ್ತುಳಿತ ಉಂಟಾಗಿ, ನಾಲ್ವರು ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ಟೋಕನ್ ಕೌಂಟರ್‌ ಟೋಕನ್ ವಿತರಿಸುವಾಗ ಭಕ್ತರ ನಡುವೆ ತಳ್ಳಾಟ ಶುರುವಾಗಿದೆ. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿವಿಧ ಕೇಂದ್ರಗಳಲ್ಲಿ ದರ್ಶನದ ಟೋಕನ್‌ಗಾಗಿ ಸಾವಿರಾರು ಮಂದಿ ಜಮಾಯಿಸಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು.

ತಿರುಪತಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಟೋಕನ್ ಕೌಂಟರ್‌ನಲ್ಲಿ ಕಾಲ್ತುಳಿತ; ನಾಲ್ವರು ಭಕ್ತರ ಸಾವು
Tirupati Temple
Follow us
ಸುಷ್ಮಾ ಚಕ್ರೆ
|

Updated on:Jan 08, 2025 | 10:45 PM

ತಿರುಮಲ: ತಿರುಪತಿಯಲ್ಲಿ ಭೀಕರ ಕಾಲ್ತುಳಿತ ಉಂಟಾಗಿದ್ದು, ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ. ತಿರುಪತಿಯಲ್ಲಿ ಇಂದು (ಬುಧವಾರ) ರಾತ್ರಿ ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್‌ಗಳಲ್ಲಿ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದೆ. ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಘಟನೆಗೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ನಾನು ದಿಗ್ಭ್ರಾಂತಗೊಂಡಿದ್ದೇನೆ ಎಂದಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ.

ತಮಿಳುನಾಡಿನ ಸೇಲಂ ಮೂಲದ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿದ್ದು, ವೈಕುಂಠ ದ್ವಾರ ದರ್ಶನದ ಟಿಕೆಟ್‌ ಪಡೆಯಲು ನೂಕುನುಗ್ಗಲು ಉಂಟಾಗಿದ್ದರಿಂದ ಈ ದುರಂತ ಘಟನೆ ನಡೆದಿದೆ. ತಿರುಪತಿಯ ವಿಷ್ಣುನಿವಾಸಂ ಬಳಿ ನೂಕುನುಗ್ಗಲು ಸಂಭವಿಸಿ ದುರಂತ ಸಂಭವಿಸಿದೆ. ಅಲಿಪಿರಿ, ಶ್ರೀನಿವಾಸಂ, ಸತ್ಯನಾರಾಯಣಪುರಂ ಹಾಗೂ ಪದ್ಮಾವತಿಪುರಂನಲ್ಲಿ ಭಕ್ತರು ಜಮಾಯಿಸಿದ್ದರಿಂದ ಭಾರಿ ನೂಕುನುಗ್ಗಲು ಉಂಟಾಗಿತ್ತು. ಇದರಿಂದ ಜನರನ್ನು ನಿಯಂತ್ರಿಸಲು ಸಾಧ್ಯವಾಗದೆ ಕಾಲ್ತುಳಿತ ಉಂಟಾಗಿದೆ.

ಇದನ್ನೂ ಓದಿ: ತಿರುಪತಿ ದೇವಸ್ಥಾನದ ಆಡಳಿತದಿಂದ ಹಿಂದೂಯೇತರರು ಹೊರಕ್ಕೆ: ಟಿಟಿಡಿ ನಿರ್ಧಾರ

ಹಲವು ಟೋಕನ್ ವಿತರಣಾ ಕೇಂದ್ರಗಳಲ್ಲಿ ಘಟನೆ ನಡೆದಿದ್ದು, ಜನವರಿ 10ರಿಂದ 19ರವರೆಗೆ ನಡೆಯಲಿರುವ ವೆಂಕಟೇಶ್ವರನ ವೈಕುಂಠ ದ್ವಾರ ದರ್ಶನಕ್ಕಾಗಿ ಸಾವಿರಾರು ಭಕ್ತರು ಪ್ರವೇಶ ಟೋಕನ್‌ಗಳನ್ನು ಸಂಗ್ರಹಿಸಲು ಜಮಾಯಿಸಿದ್ದರು. ಕೌಂಟರ್‌ಗಳು ಬೆಳಗ್ಗೆ 5 ಗಂಟೆಗೆ ತೆರೆಯಬೇಕಾಗಿದ್ದರೂ, ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಪ್ರಾರಂಭಿಸಿದರು. ಸಂಜೆಯ ವೇಳೆಗೆ ಭಾರೀ ಜನಸಂದಣಿ ಉಂಟಾಯಿತು.

ಶ್ರೀನಿವಾಸಂ, ಬೈರಾಗಿಪಟ್ಟೇಡ ರಾಮನಾಯ್ಡು ಶಾಲೆ, ಸತ್ಯನಾರಾಯಣಪುರಂ ಮುಂತಾದ ಕಡೆ ಕಾಲ್ತುಳಿತ ಸಂಭವಿಸಿದೆ. ಶ್ರೀನಿವಾಸಂನಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಹಲವರು ಮೂರ್ಛೆ ಹೋಗಿದ್ದಾರೆ. ಗಾಯಗೊಂಡ ಭಕ್ತರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ವಿವರ

ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದ್ದುದರಿಂದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮೂರು ದಿನಗಳ ದರ್ಶನಕ್ಕೆ (ಜನವರಿ 10-12) ಎಂಟು ಸ್ಥಳಗಳಲ್ಲಿ ಟೋಕನ್ ವಿತರಣೆಯನ್ನು ಘೋಷಿಸಿದೆ. ಟಿಟಿಡಿ ಗಸ್ತು ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರ ಉಪಸ್ಥಿತಿಯ ಹೊರತಾಗಿಯೂ, ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಂಡಿದ್ದರಿಂದ ಜನಸಂದಣಿಯನ್ನು ನಿಯಂತ್ರಿಸಲು ಕಷ್ಟವಾಯಿತು.

ವೈಕುಂಠ ದ್ವಾರಂ ಮೂಲಕ ವಿಶೇಷ ದರ್ಶನದ ಮೂಲಕ ವೈಕುಂಠ ಏಕಾದಶಿ ಆಚರಣೆಯ ಸಂದರ್ಭದಲ್ಲಿ ಲಕ್ಷಾಂತರ ಯಾತ್ರಾರ್ಥಿಗಳನ್ನು ಆಕರ್ಷಿಸುವ ನಿರೀಕ್ಷೆಯಿದೆ. ಹೀಗಾಗಿ, ಟೋಕನ್ ಹೊಂದಿರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಟಿಟಿಡಿ ಸ್ಪಷ್ಟಪಡಿಸಿದೆ.

ಜನವರಿ 10, 11 ಮತ್ತು 12ರಂದು ವೈಕುಂಠ ದ್ವಾರ ದರ್ಶನದ ಮೊದಲ ಮೂರು ದಿನಗಳಾಗಿವೆ. ಗುರುವಾರ ಬೆಳಿಗ್ಗೆ 1.20 ಲಕ್ಷ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ನಿರ್ಧರಿಸಿದೆ. ಇನ್ನುಳಿದ ದಿನಗಳಲ್ಲಿ ತಿರುಪತಿಯ ವಿಷ್ಣು ನಿವಾಸ, ಶ್ರೀನಿವಾಸಂ ಮತ್ತು ಭೂದೇವಿ ಸಂಕೀರ್ಣಗಳಲ್ಲಿ ಟಿಕೆಟ್ ನೀಡಲು ಟಿಟಿಡಿ ವ್ಯವಸ್ಥೆ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:44 pm, Wed, 8 January 25

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್